ತಾತ್ಕಾಲಿಕ ಶೆಡ್‌ ನಿರ್ಮಾಣಕ್ಕೆ ಪ್ರಯಾಣಿಕರ ಆಗ್ರಹ


Team Udayavani, Aug 29, 2017, 4:19 PM IST

ray 5.jpg

ಜಾಲಹಳ್ಳಿ: ಸ್ಥಳೀಯ ಬಸ್‌ ನಿಲ್ದಾಣದ ಆವರಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ತಾತ್ಕಾಲಿಕ ಶೆಡ್‌ ನಿರ್ಮಿಸಬೇಕೆಂದು ಜಾಲಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಪ್ರಯಾಣಿಕರು ಆಗ್ರಹಿಸಿದ್ದಾರೆ. ಗ್ರಾಮದಲ್ಲಿ ನೂತನ ಬಸ್‌ ನಿಲ್ದಾಣ ನಿರ್ಮಾಣಕ್ಕೆ 80 ಲಕ್ಷ ರೂ. ಮಂಜೂರಾಗಿದ್ದು, ಕಾಮಗಾರಿ ಗುತ್ತಿಗೆಯನ್ನು ಸಿರವಾರ ಮೂಲದ ಗುತ್ತಿಗೆದಾರರಿಗೆ ವಹಿಸಲಾಗಿದೆ. ಗುತ್ತಿಗೆದಾರರು ಕಾಮಗಾರಿ ಆರಂಭಿಸುವ ಸಲುವಾಗಿ ಬಸ್‌ ನಿಲ್ದಾಣದ ಹಳೆ ಕಟ್ಟಡವನ್ನು ನೆಲಸಮಗೊಳಿಸಿದ್ದಾರೆ. ಹೀಗಾಗಿ ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು, ವೃದ್ಧರು ಬಸ್‌ ಗಾಗಿ ಬಿಸಿಲು, ಮಳೆಯಲ್ಲಿ ಕಾಯುವಂತಾಗಿದೆ. ಬಸ್‌ ನಿಲ್ದಾಣ ಕಾಮಗಾರಿ ಪೂರ್ಣಕ್ಕೆ ಕನಿಷ್ಠ ಒಂದು ವರ್ಷವಾದರೂ ಬೇಕಾಗಬಹುದು. ಅಲ್ಲಿಯವರೆಗೆ ತಾತ್ಕಾಲಿಕ ಶೆಡ್‌ ನಿರ್ಮಾಣ ಮಾಡಬೇಕೆಂದು ಪ್ರಯಾಣಿಕರು ಆಗ್ರಹಿಸಿದ್ದಾರೆ. ತಾತ್ಕಾಲಿಕ ಶೆಡ್‌ ನಿರ್ಮಿಸುವಂತೆ ಸಾರಿಗೆ ಸಂಸ್ಥೆಯ ಎಇಇ ರಘುನಂದ ಅವರಿಗೆ ಹಲವು ಬಾರಿ ದೂರವಾಣಿ ಮೂಲಕ ವಿನಂತಿಸಿದರೂ ಯಾವದೇ ಪ್ರಯೋಜನವಾಗಿಲ್ಲ. ಎಇಇಯವರನ್ನು ದೂರವಾಣಿಯಲ್ಲಿ ಸಂಪರ್ಕಿಸಿ ವಿಚಾರಿಸಿದರೆ ಗುತ್ತಿಗೆದಾರರಿಗೆ ಹೇಳಿದ್ದೇನೆ ಎನ್ನುತ್ತಾರೆ. ಈ ಕುರಿತು ಹಲವು ಬಾರಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಂಸ್ಥೆಯ ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿದೆ. ಅವರು ಶೆಡ್‌ ನಿರ್ಮಿಸುವ ಭರವಸೆ ನೀಡಿದ್ದಾರೆಯೇ ಹೊರತು ಆದು ಇನ್ನು ಕಾರ್ಯರೂಪಕ್ಕೆ ತಂದಿಲ್ಲ ಎಂದು ಪ್ರಯಾಣಿಕರು ದೂರಿದ್ದಾರೆ. ಪುರುಷರು ಅಂಗಡಿ, ಹೋಟಲ್‌ ಗಳಲ್ಲಿ ಕೂಡ್ರಬಹುದು. ಆದರೆ ಮಹಿಳೆಯರು, ವಿದ್ಯಾರ್ಥಿಗಳು ಬಸ್‌ ನಿಲ್ದಾಣದ ಆವರಣದ ಬಯಲಲ್ಲೇ ಮಳೆ, ಗಾಳಿ, ಬಿಸಿಲು ಎನ್ನದೇ ಕುಳಿತುಕೊಳ್ಳಬೇಕಾಗಿದೆ. ಆದ್ದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ತಾತ್ಕಾಲಿಕ ಶೆಡ್‌ ನಿರ್ಮಿಸಬೇಕೆಂದು ಗ್ರಾಮಸ್ಥರು, ಪ್ರಯಾಣಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ

1-us

Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ

1-car

Mangaluru: ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

NEP-training

National Education Policy: ಎನ್‌ಇಪಿ ಜಾರಿ ಗೊಂದಲ ಮಧ್ಯೆ ಶಿಕ್ಷಕರಿಗೆ ತರಬೇತಿ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige-6-

Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ

train-track

ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್‌ ಬಂದ್‌

1-ksde

CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ

Vimana 2

Air India Express; ಮಂಗಳೂರು-ಪುಣೆ ನೇರ ವಿಮಾನ ಆರಂಭ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.