ಪೊಲೀಸ್‌ಗೆ ಪಾಸಿಟಿವ್: ದೇವದುರ್ಗ ಠಾಣೆ ಸೀಲ್‌ಡೌನ್
Team Udayavani, Jun 3, 2020, 6:26 AM IST
ದೇವದುರ್ಗ: ತಾಲೂಕಿನ ಜಾಲಹಳ್ಳಿ ಮೊರಾರ್ಜಿ ವಸತಿ ನಿಲಯ ಕ್ವಾರಂಟೈನ್ ನಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಸಂಚಾರಿ ಠಾಣೆ ಪೊಲೀಸ್ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ದೇವದುರ್ಗ ಪೊಲೀಸ್ ಠಾಣೆ ಸೀಲ್ ಡೌನ್ ಮಾಡಲಾಗಿದೆ.
ಪೊಲೀಸ್ ವಾಸುತ್ತಿದ್ದ ಪಟ್ಟಣದ ಶಾಂತಿನಗರ ವಾರ್ಡ್ ಲಾಕ್‌ಡೌನ್ ಮಾಡಲಾಗಿದೆ. 25 ಜನ ಪೊಲೀಸ್ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗುತ್ತದೆ. ದೇವದುರ್ಗ ಠಾಣೆ ವ್ಯಾಪ್ತಿಗೆ ಬರುವಂತ ಯಾವುದೇ ದೂರುಗಳನ್ನು ಏಳು ದಿನದ ವರೆಗೆ ತಾತ್ಕಲಿಕವಾಗಿ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆಗೆ ಸಲ್ಲಿಸಲು ಸೂಚಿಸಲಾಗಿದೆ ಎಂದು ಡಿವೈಎಸ್‌ಪಿ ಎಸ್.ಎಸ್.ಹುಲ್ಲೂರು ತಿಳಿಸಿದ್ದಾರೆ.
ಪಾಸಿಟಿವ್ ಪ್ರಕರಣ ಕಂಡುಬಂದ ಪೊಲೀಸ್ ಸಿಬ್ಬಂದಿ ಜತೆಗೆ ಪ್ರಥಮ ಹಾಗೂ ದ್ವಿತೀಯ ಸಂಪರ್ಕದಲ್ಲಿರುವನ್ನು ಪತ್ತೆ ಮಾಡಲಾಗುತ್ತಿದೆ. ಏಳು ದಿನವರೆಗೆ ಠಾಣೆ ವ್ಯಾಪ್ತಿಯ ಸುತ್ತಲೂ ಮುಂಜಾಗೃತಾ ಕ್ರಮವಹಿಸಲು ಪುರಸಭೆ ಮುಖ್ಯಾಧಿಕಾರಿಗೆ ಸೂಚನೆ ನೀಡಲಾಗಿದೆ. ಕಂಟೇನ್ಮೆಂಟ್ ಝೋನ್ ಎಂದು ಪರಿಗಣಿಸಲಾಗಿದ್ದು, ಹೆಚ್ಚಿನ ಗಮನಹರಿಸಲು ಸೂಚನೆ ನೀಡಲಾಗಿದೆ. ಶಾಂತಿನಗರದಲ್ಲಿ ವಾಸಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಪಾಸಿಟಿವ್ ಪ್ರಕರಣ ದೃಢ ಪಡುತ್ತಿದ್ದಂತೆಯೇ ಅಲ್ಲಿನ ನಿವಾಸಿಗಳು ತೀರಾ ಆತಂಕ ಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಪಿಎಸ್‌ಐ ರಂಗಯ್ಯ, ಮುಖ್ಯಾಧಿಕಾರಿ ಶರಣಪ್ಪ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.