ಮಸ್ಕಿ ಅಖಾಡದಲ್ಲಿ ಮಹಿಳಾ ಮಣಿಗಳ ಅಬ್ಬರದ ಪ್ರಚಾರ

5 ಜಿಪಂ ವ್ಯಾಪ್ತಿಯಲ್ಲಿ ಸಂಚರಿಸಿ ಮಹಿಳೆಯರನ್ನು ತಮ್ಮ ಪಕ್ಷದತ್ತ ಸೆಳೆಯುವ ಕಸರತ್ತು ನಡೆಸಿದ್ದಾರೆ.

Team Udayavani, Apr 9, 2021, 6:47 PM IST

Mahile

ಮಸ್ಕಿ: ಮತಕ್ಷೇತ್ರ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ತೀವ್ರ ರಂಗೇರುತ್ತಿದೆ. ಪ್ರಚಾರದ ಅಬ್ಬರ ಜೋರಾಗಿದ್ದು, ಈಗ ಮಹಿಳಾ ಮಣಿಗಳು ಮಸ್ಕಿ
ಅಖಾಡದಲ್ಲಿ ತೀವ್ರ ಸದ್ದು ಮಾಡುತ್ತಿದ್ದಾರೆ. ಕಾಂಗ್ರೆಸ್‌ ಪರವಾಗಿ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ರೇಖಾ ಶ್ರೀನಿವಾಸ ನೇತೃತ್ವದಲ್ಲಿ ಜಿಲ್ಲಾ ಮತ್ತು ಸ್ಥಳೀಯ ಮಹಿಳಾ ಕಾಂಗ್ರೆಸ್‌ ಘಟಕದ ಪದಾಧಿಕಾರಿಗಳು ಕಾಂಗ್ರೆಸ್‌ ಅಭ್ಯರ್ಥಿ ಆರ್‌.ಬಸನಗೌಡ ತುರುವಿಹಾಳ ಪರವಾಗಿ ಕ್ಯಾಂಪೇನ್‌ ಆರಂಭಿಸಿದ್ದರೆ, ಇತ್ತ ಬಿಜೆಪಿಯಲ್ಲಿ ವಿಧಾನ ಪರಿಷತ್‌ ಸದಸ್ಯೆ ಭಾರತಿ ಶೆಟ್ಟಿ ಅವರ ನೇತೃತ್ವದಲ್ಲಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್‌ ಪರವಾಗಿ ಮತಯಾಚನೆ ಮಾಡುತ್ತಿದ್ದಾರೆ.

ಕಳೆದ ಒಂದು ವಾರದಿಂದಲೂ ಅಖಾಡಕ್ಕೆ ಇಳಿದ ಮಹಿಳಾ ಮಣಿಗಳು ಪ್ರತ್ಯೇಕ ತಮ್ಮದೇ ತಂಡದ ಮೂಲಕ ಮತಬೇಟೆ ಆರಂಭಿಸಿದ್ದಾರೆ. ಬಿರುಬಿಸಿಲಿಗೂ
ಅಂಜದೇ ಮಸ್ಕಿ ಪಟ್ಟಣ ಸೇರಿ ತಾಲೂಕಿನ 5 ಜಿಪಂ ವ್ಯಾಪ್ತಿಯಲ್ಲಿ ಸಂಚರಿಸಿ ಮಹಿಳೆಯರನ್ನು ತಮ್ಮ ಪಕ್ಷದತ್ತ ಸೆಳೆಯುವ ಕಸರತ್ತು ನಡೆಸಿದ್ದಾರೆ.

ಹಲವು ಅಸ್ತ್ರ ಪ್ರಯೋಗ: ಬಿಜೆಪಿ ವಿಧಾನ ಪರಿಷತ್‌ ಸದಸ್ಯೆಯಾಗಿರುವ ಭಾರತಿ ಶೆಟ್ಟಿ ಕಳೆದ ಒಂದು ವಾರದಿಂದ ಇಲ್ಲಿಯೇ ವಾಸ್ತವ್ಯ ಹೂಡಿದ್ದು, ಬೂತ್‌ಮಟ್ಟದ ಕಾರ್ಯಕರ್ತೆಯರ ಸಭೆ, ಮನೆ ಪ್ರಚಾರ, ಬಹಿರಂಗ ಕಾರ್ಯಕ್ರಮ ಮೂಲಕ ಮತ ಸೆಳೆಯುತ್ತಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷೆ ವಿಜಯ ರಾಜೇಶ್ವರಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶರಣಮ್ಮ ಮಸ್ಕಿ ಮಹಿಳಾ ಮಂಡಲ ಅಧ್ಯಕ್ಷೆ ಪ್ರಮಿಳಾ ಸೇರಿ ಸ್ಥಳೀಯ ಹಲವು ಮಹಿಳಾ ನಾಯಕಿಯರ ಜತೆಗೂಡಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಮಸ್ಕಿ ಪಟ್ಟಣದ ಎಲ್ಲ ವಾರ್ಡ್‌ಗಳಲ್ಲಿ ಸಂಚಾರ ಮುಗಿಸಿದ ಇವರು, ತಾಲೂಕಿನ ತಿಡಿಗೋಳ, ನಿಡಿಗೋಳ, ಕೋಳಬಾಳ, ಕಣ್ಣೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.

ಇಲ್ಲೂ ಅಬ್ಬರ: ಇನ್ನೂ ಕಾಂಗ್ರೆಸ್‌ನಲ್ಲೂ ಮಹಿಳಾ ನಾಯಕಿಯರ ಪ್ರಚಾರ ಅಬ್ಬರದಿಂದ ಸಾಗಿದೆ. ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ
ರೇಖಾ ಶ್ರೀನಿವಾಸ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷೆ ನಿರ್ಮಲಾ ಬೆಣ್ಣೆ, ಮಸ್ಕಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷೆ ಗಂಗಮ್ಮ, ಕಾರ್ಯದರ್ಶಿ ಜಯಮ್ಮ, ಸಿಂಧನೂರು
ಬ್ಲಾಕ್‌ ಅಧ್ಯಕ್ಷೆ ದಾಕ್ಷಯಿಣಿ, ಮಂಜುಳಾ ಸೇರಿ ಇತರೆ ಮಹಿಳಾ ಮಣಿಗಳು ಇರುವ ಗುಂಪು ಪ್ರತ್ಯೇಕವಾಗಿ ತಾವೇ ಮನೆ-ಮನೆಗೂ ತೆರಳಿ ಮತಯಾಚನೆ
ಮಾಡುತ್ತಿದ್ದಾರೆ. ಕಾಂಗ್ರೆಸ್‌ ಮಹಿಳೆಯರಿಗೆ ನೀಡಿದ ಸ್ಥಾನ-ಮಾನ ಮಹಿಳಾ ಪರವಾಗಿ ರೂಪಿಸಿದ ಯೋಜನೆಗಳು ಸೇರಿ ಹಲವು ಮಾಹಿತಿಗಳನ್ನು ನೀಡುವ
ಮೂಲಕ ಮಹಿಳಾ ಮತದಾರರನ್ನು ಹಿಡಿದಿಡುವ ಪ್ರಯತ್ನ ನಡೆಸಿದ್ದಾರೆ.

ಹೆಚ್ಚಿದ ಕುತೂಹಲ
ಮಸ್ಕಿ ಉಪಚುನಾವಣೆ ಕಣದಲ್ಲಿ ಘಟಾನುಘಟಿ ನಾಯಕರ ಪ್ರಚಾರ ಮಾತ್ರವಲ್ಲ, ಮಹಿಳೆಯರು ಕೂಡ ನಡೆಸಿರುವ ಬಿರುಸಿನ ಮತಪ್ರಚಾರ ಗಮನ ಸೆಳೆಯುತ್ತಿದೆ. ಕೆಂಡದಂತ ಬಿಸಿಲನ್ನೂ ಲೆಕ್ಕಿಸದೇ ಪಟ್ಟಣ, ಹಳ್ಳಿಯ ಗಲ್ಲಿ-ಗಲ್ಲಿಯಲ್ಲಿ ಮಹಿಳೆಯರು ಓಡಾಡಿ ಮತಯಾಚನೆ ಮಾಡುತ್ತಿರುವುದು ಕುತೂಹಲ ಮೂಡಿಸಿದೆ. ವಿಶೇಷವಾಗಿ ಮಹಿಳಾ ನಾಯಕಿಯರು ಹೋದ ಕಡೆಗೆಲ್ಲ ಮಹಿಳಾ ಮತದಾರರೇ ಹಚ್ಚಿನ ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಮಹಿಳೆಯರ ಕಷ್ಟ-ನಷ್ಟ ಕೇಳುವುದು, ಅವರಿಗೆ ಸ್ಪಂದಿಸುವ ಕೆಲಸವನ್ನು ಮಹಿಳಾ ಮಣಿಗಳು ಮಾಡುತ್ತಿದ್ದು, ಇದು ಮಸ್ಕಿ ಮತಕ್ಷೇತ್ರದಲ್ಲಿ ಗಮನ ಸೆಳೆಯುತ್ತಿದೆ.

*ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5

Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.