ಪ್ರಧಾನಿ ಮೋದಿ-ಸಿಎಂ ಯಡಿಯೂರಪ್ಪಗಿಲ್ಲ ರೈತ ಪರ ಕಾಳಜಿ
Team Udayavani, Sep 29, 2020, 3:44 PM IST
ಸಾಂದರ್ಭಿಕ ಚಿತ್ರ
ಸಿಂಧನೂರು: ಕೇಂದ್ರ ಮತ್ತು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆ ಜಾರಿ ವಿರೋಧಿಸಿ ರೈತ ಸಂಘಟನೆ ಸೇರಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಸಿಂಧನೂರಲ್ಲಿ ಯಶಸ್ವಿಯಾಯಿತು. ನಗರದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ರೈತ ಪರ ಸಂಘಟನೆಗಳ ಸಮನ್ವಯ ಸಮಿತಿ ಸೇರಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಾಮ್ರಾಜ್ಯಶಾಹಿ ವಿರೋಧಿ ಒಕ್ಕೂಟ ಅಧ್ಯಕ್ಷ ಸಂಚಾಲಕ ಚಂದ್ರಶೇಖರ ಗೊರೇಬಾಳ ಮಾತನಾಡಿ, ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ವಿದ್ಯುತ್ ಕಾಯ್ದೆಗಳಿಗೆ ತಿದ್ದುಪಡಿ ಮಾಡಿದ್ದು, ಇವು ರೈತ ಮತ್ತು ಕಾರ್ಮಿಕರಿಗೆ ಮರಣ ಶಾಸನಗಳಾಗಿವೆ. ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪಗೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಬದಲಾಗಿ ಕಾರ್ಪೋರೇಟ್ ಕಂಪನಿಗಳ ಪರ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ಸರ್ಕಾರ ರೈತರು, ಕಾರ್ಮಿಕರ ಪರ ಕಾನೂನು ಜಾರಿಗೆ ಮುಂದಾಗಬೇಕು ಎಂದು ಆಗ್ರಹಿಸಿದರು.
ವರ್ತಕರ ಸಂಘದ ಕಾರ್ಯದರ್ಶಿಪೂಜಪ್ಪ ಪೂಜಾರಿ, ಗೊಬ್ಬರ ಮತ್ತು ಕ್ರಿಮಿನಾಶಕ ವ್ಯಾಪಾರಿಗಳ ಸಂಘ ಅಧ್ಯಕ್ಷ ಎನ್.ಭೀಮನಗೌಡ ಗೊರೇಬಾಳ, ಬಸವರಾಜ ಬಾದರ್ಲಿ, ಮಹಾದೇವ ಧುಮತಿ, ನಾರಾಯಣ ಬೆಳಗುರ್ಕಿ, ಸಮ್ಮದ್ ಚೌದ್ರಿ, ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.