ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
Team Udayavani, Jul 15, 2022, 6:18 PM IST
ರಾಯಚೂರು: ದಿನಬಳಕೆ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು, ಅಕ್ರಮಗಳಿಗೆ ಕಡಿವಾಣ ಹಾಕಬೇಕು, ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿ ಎದುರು ಎಸ್‌ಯುಸಿಐ(ಸಿ) ಕಾರ್ಯಕರ್ತರು ಪ್ರತಿಭಟಿಸಿದರು.
ಈ ಕುರಿತು ಜಿಲ್ಲಾ ಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿ, ಕೇಂದ್ರ ಸರ್ಕಾರ ಅಡುಗೆ ಅನಿಲ ದರ 1200ಕ್ಕೆ ಹೆಚ್ಚಿಸಿದೆ. ಪೆಟ್ರೊಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿವೆ. ಇದರಿಂದ ಬಡ, ಮಧ್ಯಮ ವರ್ಗದ ಜನ ಬದುಕುವುದೇ ಕಷ್ಟವಾಗಿದೆ ಎಂದರು.
ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಉದ್ಯಮಿಗಳಿಗೆ ಲಾಭ ಮಾಡಿಕೊಡುತ್ತಿದೆ. ಈಚೆಗೆ ರಾಜ್ಯದಲ್ಲಿ ಪಿಎಸ್‌ಐ, ಉಪನ್ಯಾಸಕರ, ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ನಡೆಯುತ್ತಿದ್ದು ಬಡ, ಮಧ್ಯಮ ವರ್ಗದ ಆಕಾಂಕ್ಷಿಗಳು ಭರವಸೆ ಕಳೆದುಕೊಂಡಿದ್ದಾರೆ ಎಂದು ದೂರಿದರು.
ಸಚಿವ ಈಶ್ವರಪ್ಪ ವಿರುದ್ಧ ಶೇ.40ರಷ್ಟು ಕಮಿಷನ್ ಆರೋಪ ಕೇಳಿಬಂದಿದ್ದು, ಗುತ್ತಿಗೆದಾರನ ಸಾವಿಗೆ ಕಾರಣವಾಗಿದೆ. ರಾಜ್ಯದಲ್ಲಿ ಯಾವ ಕೆಲಸಕ್ಕೂ ಲಂಚ ನೀಡುವ ಸ್ಥಿತಿ ಬಂದಿದೆ. ರಾಜ್ಯ ಸರ್ಕಾರ ಮೂರು ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕು, ಅಡುಗೆ ಅನಿಲ, ಇಂಧನ ದರ ಇಳಿಸಬೇಕು. ಅಕ್ಕಿ, ಜೋಳ, ಗೋಧಿ , ಸೀಮೆಎಣ್ಣೆ, ಬೇಳೆ ಕಾಳುಗಳನ್ನು ಪಡಿತರ ವ್ಯವಸ್ಥೆಯಲ್ಲಿ ರಿಯಾಯಿತಿ ದರದಲ್ಲಿ ನೀಡಬೇಕು ಎಂದು ಒತ್ತಾಯಿಸಿದರು.
ಎಸ್‌ಯುಸಿಐ ಜಿಲ್ಲಾ ಕಾರ್ಯದರ್ಶಿ ಡಾ| ಚಂದ್ರಗಿರೀಶ, ಸದಸ್ಯರಾದ ವೀರೇಶ ಎನ್.ಎಸ್, ಚನ್ನಬಸವ ಜಾನೆಕಲ್, ಮಹೇಶ ಚೀಕಲಪರ್ವಿ, ಹಯ್ನಾಳಪ್ಪ, ಮಲ್ಲನಗೌಡ, ಕಾರ್ತಿಕ್, ಮಹೇಶ ಪ್ರತಿಭಟನೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Education Policy: ಎನ್‌ಇಪಿ ಜಾರಿ ಗೊಂದಲ ಮಧ್ಯೆ ಶಿಕ್ಷಕರಿಗೆ ತರಬೇತಿ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.