ಸಿಎಎ -ಎನ್‌ಆರ್‌ಸಿ ಖಂಡಿಸಿ ಪಂಜಿನ ಮೆರವಣಿಗೆ

Team Udayavani, Feb 25, 2020, 12:40 PM IST

rc-tdy-1

ರಾಯಚೂರು: ದೇಶದ ಜನರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸಿಎಎ, ಎನ್‌ಆರ್‌ಸಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಸೋಮವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಲಾಯಿತು.

ನಗರದ ಶೆಟ್ಟಿಭಾವಿ ವೃತ್ತದಿಂದ ಶುರುವಾದ ಮೆರವಣಿಗೆ ನಗರದ ಪ್ರಮುಖ ರಸ್ತೆಗಳ ಮಾರ್ಗವಾಗಿ ಸಾಗಿ ಜಿಲ್ಲಾ ಕ್ರೀಡಾಂಗಣದ ಪಕ್ಕದಲ್ಲಿರುವ ಮಹಾತ್ಮ ಗಾಂಧಿ ಪುತ್ಥಳಿವರೆಗೆ ನಡೆಯಿತು. ಅಲ್ಲಿ ಬಹಿರಂಗ ಸಭೆ ನಡೆಸಲಾಯಿತು. ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಮಾರ್ಗದುದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಮುಖಂಡರು, ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದೆ. ದೇಶದ ಮೂಲ ನಿವಾಸಿಗಳಿಗೆ ತೊಂದರೆ ಕೊಡುವ ನಿಟ್ಟಿನಲ್ಲಿ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಸಮಸ್ಯೆ ಸೃಷ್ಟಿಸಿದೆ. ಕೇಂದ್ರ ಸರ್ಕಾರ ಧರ್ಮಾಧಾರಿತವಾಗಿ ಪೌರತ್ವ ನೀಡುತ್ತಿರುವುದು ಸರಿಯಲ್ಲ. ಪ್ರಧಾನಿ ನರೇಂದ್ರ ಮೋದಿ ಸರ್ವಾಧಿ ಕಾರಿ ಆಡಳಿತ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಜನರೇ ಈ ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದರು.

ದೇಶದ ಮೂಲ ನಾಗಕರಿಗೆ ಧಕ್ಕೆ ಉಂಟು ಮಾಡುವ ಈ ಕಾಯ್ದೆಗಳನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಬಿ.ವಿ.ನಾಯಕ, ವಿಧಾನ ಪರಿಷತ್‌ ಸದಸ್ಯರಾದ ಎನ್‌.ಎಸ್‌.ಬೋಸರಾಜ್‌, ಬಸವರಾಜ ಪಾಟೀಲ ಇಟಗಿ, ಮಾಜಿ ಶಾಸಕರಾದ ಹಂಪಯ್ಯ ನಾಯಕ, ಸೈಯ್ಯದ್‌ ಯಾಸಿನ್‌, ಎ.ರಾಜಶೇಖರ ನಾಯಕ, ನಗರಸಭೆ ಸದಸ್ಯ ಜಯಣ್ಣ, ಮುಖಂಡರಾದ ಎ.ವಸಂತಕುಮಾರ, ರಾಮಣ್ಣ ಇರಬಗೇರಾ, ಬಸವರಾಜ ರೆಡ್ಡಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

MUST WATCH

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಹೊಸ ಸೇರ್ಪಡೆ

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.