ಬಾಕಿ ವೇತನ ಪಾವತಿಗೆ ಆಗ್ರಹಿಸಿ ಪ್ರತಿಭಟನೆ
ಕಾರಣ ಕೇಳಿದರೆ ಇಲಾಖೆ ಉಪ ನಿರ್ದೇಶಕರು ಅನುದಾನವಿಲ್ಲ ಎನ್ನುತ್ತಾರೆ
Team Udayavani, Jun 28, 2022, 6:27 PM IST
ರಾಯಚೂರು: ಅಂಗನವಾಡಿ ನೌಕರರ ಮೂರು ತಿಂಗಳಿನಿಂದ ಬಾಕಿ ಇರುವ ವೇತನ, ತರಕಾರಿ ಬಿಲ್ ಮತ್ತು ಕೇಂದ್ರಗಳ ಬಾಡಿಗೆ ಹಣ ಕೂಡಲೇ ಬಿಡುಗಡೆಗೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕಳೆದ ಮೂರು ತಿಂಗಳಿಂದ ವೇತನವಿಲ್ಲದೇ ಕೇಂದ್ರಗಳ ಬಾಡಿಗೆ ಹಣವಿಲ್ಲದೇ ತೀವ್ರ ಸಂಕಷ್ಟದ ಜೀವನ ಎದುರಿಸುತ್ತಿದ್ದಾರೆ. ಪ್ರತಿ ವರ್ಷ ಮಾರ್ಚ್‌ನಿಂದ ಮೇ ವರೆಗೆ ಈ ರೀತಿ ಸಮಸ್ಯೆ ಎದುರಾಗುತ್ತಿದೆ. ಆದರೆ, ಈ ವರ್ಷ ಜೂನ್ ತಿಂಗಳಾದರೂ ಗೌರವಧನ ಪಾವತಿಸಿಲ್ಲ. ಕಾರಣ ಕೇಳಿದರೆ ಇಲಾಖೆ ಉಪ ನಿರ್ದೇಶಕರು ಅನುದಾನವಿಲ್ಲ ಎನ್ನುತ್ತಾರೆ. ಕೇಂದ್ರ ಕಚೇರಿಯಲ್ಲಿ ಕೇಳಿದರೆ ವೇತನ ಪಾವತಿ ಮಾಡುವ ವಿಧಾನ ಬದಲಾವಣೆ ಆಗಿದೆ ಎನ್ನುತ್ತಾರೆ. ಕೇಂದ್ರ ಸರ್ಕಾರ ತನ್ನ ಪಾಲಿನ ಹಣ ಬಿಡುಗಡೆ ಮಾಡದೇ ಸತಾಯಿಸುತ್ತಿರುವುದು ಸರಿಯಲ್ಲ ಎಂದು ದೂರಿದರು.
ಅಂಗನವಾಡಿ ನೌಕರರು ಇನ್ನು ಎಷ್ಟು ತಾಳ್ಮೆಯಿಂದ ವರ್ತಿಸಬೇಕು. ಮಾದರಿ ಆಡಳಿತ ನೀಡುವ ಸರ್ಕಾರಗಳೇ ಅನುದಾನದ ನೆಪದಲ್ಲಿ ಸರಿಯಾಗಿ ವೇತನ ಕೊಡದೇ ದುಡಿಸಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ?. ಐಎಲ್‌ಸಿಯ ಉದ್ದೇಶಗಳು ಮತ್ತು ಕಾನೂನುಗಳ ಉಲ್ಲಂಘನೆಯಲ್ಲವೇ ?. ಕೂಡಲೇ ಮೂರು ತಿಂಗಳಿಂದ ಬಾಕಿ ಇರುವ ನೌಕರರ ವೇತನ, ಅಂಗನವಾಡಿ ಕೇಂದ್ರಗಳ ಬಾಡಿಗೆ ಹಣ ಮತ್ತು ಜೂನ್ ದಿಂದ ಆಗಸ್ಟ್‌ವರೆಗೆ ಮುಂಗಡವಾಗಿ ತರಕಾರಿ ಬಿಲ್ ಬಿಡುಗಡೆ ಮಾಡಬೇಕು. 2-3 ದಿನದೊಳಗಾಗಿ ಸಮಸ್ಯೆ ಪರಿಹರಿಸದಿದ್ದಲ್ಲಿ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಮುಷ್ಕರ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ವೇಳೆ ಜಿಲ್ಲಾಧ್ಯಕ್ಷೆ ಎಚ್. ಪದ್ಮಾ, ತಾಲೂಕು ಕಾರ್ಯದರ್ಶಿ ನರ್ಮದಾ, ರಂಗಮ್ಮ, ಅನ್ವರ್, ನರ್ಮದಾ, ವರಲಕ್ಷ್ಮೀ, ರಹೆಮತ್, ಆದಿಲಕ್ಷ್ಮೀ, ಆಸ್ಮಾ, ಕೃಷ್ಣವೇಣಿ, ನಾಗಮ್ಮ, ರೇಖಾ, ಭಾಗ್ಯಲಕ್ಷ್ಮೀ, ಗೋಕರಮ್ಮ, ಡಿ.ಎಸ್. ಶರಣಬಸವ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.