ನಗರಸಭೆ ಕಚೇರಿ ಎದುರು ನಿರಶನ
Team Udayavani, Jun 4, 2022, 2:41 PM IST
ರಾಯಚೂರು: ಅಶುದ್ಧ ನೀರು ಪೂರೈಕೆಯಿಂದ ನಗರದಲ್ಲಿ ವಾಂತಿ ಭೇದಿ ಪ್ರಕರಣಗಳು ಹೆಚ್ಚಾಗುತ್ತಿವೆ. ಕೂಡಲೇ ಶುದ್ಧು ಕುಡಿವ ನೀರು ಪೂರೈಕೆಗೆ ಕ್ರಮ ವಹಿಸಬೇಕು ಎಂದು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್ ) ಕಾರ್ಯಕರ್ತರು ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಕುರಿತು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿ, ಅಶುದ್ಧ ನೀರು ಸೇವಿಸಿ ಸಾವಿರಾರು ಜನ ಅಸ್ವಸ್ಥರಾಗಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದಾರೆ. ನಗರದ ವಿವಿಧ ಆಸ್ಪತ್ರೆಗಳಲ್ಲಿ ನೂರಾರು ಜನರು ದಾಖಲಾಗಿದ್ದು ತೀವ್ರ ಆಘಾತ ಹಾಗೂ ಆತಂಕದ ಸಂಗತಿಯಾಗಿದೆ. ನಗರದಲ್ಲಿ ಸರಬರಾಜಾಗುತ್ತಿರುವ ನೀರು ರಾಸಾಯನಿಕ ಮಿಶ್ರಿತ, ವಿಪರೀತ ವಾಂತಿಭೇದಿಗೆ ಕಾರಣವಾಗುವ ರೋಗಾಣು ಜೀವಿಗಳಿಂದ ಕೂಡಿದೆ. ಈ ವಿಚಾರದಲ್ಲಿ ನಗರಸಭೆ ಆಡಳಿತ ಮಂಡಳಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ರಾಂಪೂರ, ಚಿಕ್ಕಸುಗೂರು ಶುದ್ಧೀಕರಣ ಘಟಕಗಳಲ್ಲಿ ನೀರಿನ ಶುದ್ಧೀಕರಣವೇ ಸ್ಥಗಿತವಾಗಿದೆ. ನೀರಿನ ಶುದ್ಧತೆ ಪರೀಕ್ಷಿಸಲು ತಜ್ಞರೇ ಇಲ್ಲದಿರುವುದು ನಗರಸಭೆ ಆಡಳಿತಕ್ಕೆ ಹಿಡಿದ ಕೈಗನ್ನಡಿ. ನಗರದ ಎಲ್ಲ ಆಸ್ಪತ್ರೆಗಳಲ್ಲಿ ವಾಂತಿ ಭೇದಿಗಳಿಂದ ದಾಖಲಾಗುವ ಎಲ್ಲಾ ಪ್ರಕರಣಗಳ ಖರ್ಚು ವೆಚ್ಚವನ್ನು ನಗರಸಭೆ ಹಾಗೂ ಜಿಲ್ಲಾಡಳಿತವೇ ಭರಿಸಬೇಕು. ವಾಂತಿಭೇದಿಯಿಂದ ಮೃತಪಟ್ಟ ಹಾಗೂ ಬಾಧಿತ ಕುಟುಂಬಗಳಿಗೆ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.
ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಡಾ| ಚಂದ್ರಗಿರೀಶ, ಮುಖಂಡರಾದ ಅಣ್ಣಪ್ಪ, ಮಹೇಶ ಚೀಕಲಪರ್ವಿ, ಚನ್ನಬಸವ ಜಾನೇಕಲ್, ಕಾರ್ತಿಕ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.