ಬಜೆಟ್‌ನಲ್ಲಿ ಅನ್ಯಾಯ ಖಂಡಿಸಿ ನಿರಶನ
Team Udayavani, Mar 16, 2021, 7:33 PM IST
ರಾಯಚೂರು: ರಾಜ್ಯ ಬಜೆಟ್ನಲ್ಲಿ ಅಂಗನವಾಡಿ ನೌಕರರಿಗೆ ಸೂಕ್ತ ಅನುದಾನ ಮೀಸಲಿಡದೆ ವಂಚಿಸಿದ ರಾಜ್ಯ ಸರ್ಕಾರದ ನಡೆ ಖಂಡಿಸಿ ಡಿಸಿ ಕಚೇರಿ ಎದುರಿನ ಉದ್ಯಾನವನದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ಸದಸ್ಯರು ಸೋಮವಾರ ಉಪವಾಸ ಸತ್ಯಾಗ್ರಹ ಆರಂಭಿಸಿದರು.
ಈ ಕುರಿತು ಡಿಸಿ ಮೂಲಕ ಸಿಎಂಗೆ ಮನವಿ ಸಲ್ಲಿಸಿ, ರಾಜ್ಯ ಸರ್ಕಾರಕ್ಕೆ ಅಂಗನವಾಡಿ ನೌಕರರ ಶ್ರಮದ ಬೆಲೆ ತಿಳಿಯದಾಗಿದೆ. ಜೀವದ ಹಂಗು ತೊರೆದು ಕೆಲಸ ಮಾಡಿದ ನಮ್ಮ ಮೂಲ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬಜೆಟ್ನಲ್ಲಿ ವಿಶೇಷ ಒತ್ತು ನೀಡುವಂತೆ ಮುಂಚೆಯೇ ಮನವಿ ಸಲ್ಲಿಸಿದರೂ ಮುಖ್ಯಮಂತ್ರಿಗಳು ಪರಿಗಣಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು.
ಸೂಕ್ತ ಸೌಲಭ್ಯ ಇಲ್ಲದಿದ್ದರೂ ಕಷ್ಟಪಟ್ಟು ಕೆಲಸ ಮಾಡುವ ಸ್ಥಿತಿ ಇದೆ. ಕೆಲಸದ ಒತ್ತಡದಿಂದ 35 ಜನ, ಕೊರೊನಾ ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ 28 ಜನ ಸಾವಿಗೀಡಾಗಿದ್ದಾರೆ. 173 ಕಾರ್ಯಕರ್ತರಿಗೆ ಕೊರೊನಾ ಸೋಂಕು ತಗುಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಿನಿ ಅಂಗನವಾಡಿ ಕೇಂದ್ರಗಳ ಸಹಾಯಕಿಯರ ನೇಮಕಾತಿ, ವೇತನ ವ್ಯತ್ಯಾಸ, ನಿವೃತ್ತಿ ಸೌಲಭ್ಯ ಸೇರಿದಂತೆ 339.48 ಕೋಟಿ ರೂ. ನೀಡಲು ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಆದರೆ, ಈ ಮೂರು ಶಿಫಾರಸುಗಳ ಅಂಶಗಳಲ್ಲಿ ಒಂದು ಅಂಶ ಕೂಡ ಬಜೆಟ್ನಲ್ಲಿ ಉಲ್ಲೇಖವಾಗಿಲ್ಲ. ಬಜೆಟ್ ಅಂತಿಮಗೊಳಿಸುವ ವೇಳೆಯಲ್ಲಾದರೂ ಈ ಅಂಶಗಳನ್ನು ಸೇರಿಸಬೇಕು. ಅಂಗನವಾಡಿ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು. ಸಂಘದ ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ಕಾರ್ಯದರ್ಶಿ ಪಾರ್ವತಿ ಮನ್ಸಲಾಪುರ, ಸದಸ್ಯರಾದ ಗಂಗಮ್ಮ, ಗೋಕರಮ್ಮ, ವರಲಕ್ಷ್ಮಿ , ಲಕ್ಷ್ಮಿ, ಗೌರಮ್ಮ, ಪ್ರಭಾವತಿ, ನರ್ಮದಾ, ರಾಜಶ್ರೀ, ಭಾಗ್ಯಮ್ಮ, ಸಿಐಟಿಯು ಸಂಘಟನೆ ಮುಖಂಡರಾದ ಡಿ.ಎಸ್. ಶರಣಬಸವ, ಕೆ.ಜಿ ವೀರೇಶ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.