ಮೂಲ ಸೌಕರ್ಯಕ್ಕಾಗಿ ಅನಿರ್ದಿಷ್ಟಾವಧಿ ಧರಣಿ
Team Udayavani, Oct 1, 2019, 3:56 PM IST
ಸಿರವಾರ: ತಾಲೂಕಿನ ಮಲ್ಲಟ ಗ್ರಾಮದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಗ್ರಾಪಂ ಸದಸ್ಯ ಬಸವರಾಜ ನಾಯಕ ನೇತೃತ್ವದಲ್ಲಿ ಗ್ರಾಮಸ್ಥರು ಸೋಮವಾರ ಗ್ರಾಮ ಪಂಚಾಯಿತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.
ಗ್ರಾಮ ಪಂಚಾಯಿತಿಗೆ ಸತತ ಗೈರಾಗುತ್ತಿರುವ ಪಿಡಿಒ ವಿರುದ್ಧ ಕ್ರಮ ಕೈಗೊಳ್ಳಬೇಕು. ಗ್ರಾಮದ 1ನೇ ವಾರ್ಡ್‌ನಲ್ಲಿ ಸಿಸಿ ರಸ್ತೆ, ಚರಂಡಿ, ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕು. 2016ರಿಂದ 2019ನೇ ಸಾಲಿನವರೆಗೆ ಕೈಗೊಂಡ 14ನೇ ಹಣಕಾಸು ಯೋಜನೆಗಳ ಕಾಮಗಾರಿ ತನಿಖೆ ನಡೆಸಬೇಕು. ಎನ್‌ಆರ್‌ಇಜಿ ಯೋಜನೆಯಡಿ ದನದ ಶೆಡ್ ನಿರ್ಮಿಸಿಕೊಂಡವರಿಗೆಸಹಾಯಧನ ಬಿಡುಗಡೆ ಮಾಡಬೇಕು. ಕೂಲಿ ಕಾರ್ಮಿಕರಿಗೆ ಕೂಲಿ ಪಾವತಿಸಬೇಕು. ವಿದ್ಯಾರ್ಥಿಗಳ ಪುಸ್ತಕಗಳಿಗೆ ಸಹಾಯಧನ ನೀಡಬೇಕು ಎಂದು ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.
ಮೇಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಲಿಖೀತ ಭರವಸೆ ನೀಡುವವರೆಗೆ ಧರಣಿ ನಡೆಸಲಾಗುವುದು. ನಿರ್ಲಕ್ಷಿಸಿದರೆ ಗ್ರಾಪಂ ಕಾರ್ಯಾಲಯಕ್ಕೆ ಬೀಗ ಜಡಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ. ಶಿವುಕುಮಾರ, ಶಾಂತಮ್ಮ, ಮುಖಂಡರಾದ ಶಿಖರೇಶ್ವರ ಸ್ವಾಮಿ, ಆಂಜನೇಯ ನಾಯಕ, ರಮೇಶ ಭಂಡಾರಿ, ಶಂಕರ ಮರಾಟ, ಗ್ರಾಮಸ್ಥರು ಧರಣಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.