PWD AE ಪರೀಕ್ಷೆಗೆ ತಡವಾಗಿದ್ದಕ್ಕೆ ರೈಲು ನಿಲ್ಲಿಸಿ ಪ್ರತಿಭಟನೆ
Team Udayavani, Dec 14, 2021, 8:41 AM IST
ರಾಯಚೂರು: ಲೋಕೋಪಯೋಗಿ ಇಲಾಖೆಯ ಪರೀಕ್ಷೆಗೆಂದು ಕಲಬುರಗಿಗೆ ತೆರಳುತ್ತಿದ್ದ ಪರೀಕ್ಷಾರ್ಥಿಗಳು ಐದು ಗಂಟೆ ವಿಳಂಬವಾಗಿದ್ದಕ್ಕೆ ರಾಯಚೂರು ಸಮೀಪ ರೈಲು ತಡೆದು ಪ್ರತಿಭಟನೆ ನಡೆಸಿದ ಪ್ರಸಂಗ ನಡೆದಿದೆ.
ಮಂಗಳವಾರ ಲೋಕೋಪಯೋಗಿ ಇಲಾಖೆ (PWD AE) ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಕಳೆದ ಬಾರಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಆರೋಪದಿಂದ ಈ ಬಾರಿ ಬೆಂಗಳೂರು ಭಾಗದ ಅಭ್ಯರ್ಥಿಗಳಿಗೆ ಕಲಬುರಗಿಯಲ್ಲಿ, ಉತ್ತರ ಕರ್ನಾಟಕ ಭಾಗದವರಿಗೆ ಬೆಂಗಳೂರಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಯಲಹಂಕ ಬಳಿ ರೈಲು ಹಳಿ ದುರಸ್ತಿ ಕಾರ್ಯ ನಡೆದ ಹಿನ್ನೆಲೆಯಲ್ಲಿ ಸೊಲ್ಲಾಪುರ– ಯಶವಂತಪುರ, ಉದ್ಯಾನ್ ಎಕ್ಸ್ ಪ್ರೆಸ್ ಹಾಗೂ ಕರ್ನಾಟಕ ಎಕ್ಸಪ್ರೆಸ್ ನಾಲ್ಕರಿಂದ ಐದು ಗಂಟೆ ತಡವಾಗಿದೆ.
ಸೊಲ್ಲಾಪುರ ಎಕ್ಸ್ ಪ್ರೆಸ್ ಇನ್ನೂ ರಾಯಚೂರಿಗೂ ಬಂದಿಲ್ಲ. ಕಲಬುರಗಿ ತಲುವಷ್ಟರಲ್ಲಿ ಕನಿಷ್ಠ 11 ಗಂಟೆಯಾಗಲಿದೆ. ಮೂರು ರೈಲುಗಳಲ್ಲಿ ಏನಿಲ್ಲವೆಂದರೂ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ ಪರೀಕ್ಷೆ ಮುಂದೂಡಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ರಾಯಚೂರು ಸಮೀಪ ರೈಲಿನ ಚೈನ್ ಎಳೆದು ನಿಲ್ಲಿಸಿ ಸ್ಥಳದಲ್ಲೇ ಪ್ರತಿಭಟನೆ ನಡೆಸಿದ್ದಾರೆ.
ಸ್ಥಳಕ್ಕೆ ಬಂದ ರೈಲು ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಲಾಗುತ್ತಿದೆ. ಸರ್ಕಾರ ಕೂಡಲೇ ನಮ್ಮ ಸಮಸ್ಯೆ ಸ್ಪಂದಿಸಬೇಕು ಇಲ್ಲವಾದರೆ ಹೋರಾಟ ಮುಂದುವರಿಸುವುದಾಗಿ ಹೇಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.