ಪ್ರಗತಿಪರ ಸಂಘಟನೆಗಳ ಪ್ರತಿಭಟನೆ
Team Udayavani, Aug 14, 2018, 12:29 PM IST
ರಾಯಚೂರು: ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಂವಿಧಾನದ ಪ್ರತಿಯನ್ನು ಸುಟ್ಟು ಹಾಕಿರುವ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಆಗ್ರಹಿಸಿ ಸಂವಿಧಾನ ಉಳಿಸಿ ಕರ್ನಾಟಕ ನೇತೃತ್ವದಲ್ಲಿ ವಿವಿಧ ಸಂಘಟನೆಗಳ
ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಡಾ| ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಲಾಯಿತು. ಸಂವಿಧಾನದ ಪ್ರತಿಯನ್ನು ಸುಟ್ಟು ಹಾಕುವ
ಮೂಲಕ ದೇಶಕ್ಕೆ ಅವಮಾನ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ದೇಶದ್ರೋಹ ಪ್ರಕರಣ ದಾಖಲಿಸಿ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ದೇಶದಲ್ಲಿ ಯಾವುದೇ ವ್ಯಕ್ತಿ, ಸಂಘಟನೆಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ, ಈ ಹಕ್ಕನ್ನು ಕಲ್ಪಿಸಿರುವ ಸಂವಿಧಾನವನ್ನು ಸುಟ್ಟು ಹಾಕುವ ಮೂಲಕ ಜಾತಿ, ಧರ್ಮಾಂಧತೆಯ ವಿಕೃತಿ ತೋರಲಾಗಿದೆ. ಈ ಘಟನೆ ಹಿಂದೆ ಮನುವಾದಿ ಜಾತಿಯ ಮನಸ್ಸಿದೆ ಎಂದು ದೂರಿದರು.
ಅರಕ್ಷಣೆ ವಿರೋಧಿ ಸಂಘಟನೆ, ಭೂಮಿಹಾರ್ ಬ್ರಾಹ್ಮಣ ಏಕ್ತಾ ಮಂಚ್, ಆಜಾದ್ ಸೇನಾ ಸಂಘಟನೆಗಳು ಸಂವಿಧಾನದ ಪ್ರತಿಯನ್ನು ಸುಡುವ ಮೂಲಕ ದೇಶದ ಬಹುಸಂಖ್ಯಾತರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಂಡಿವೆ ಎಂದು ಆರೋಪಿಸಿದರು.
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿಕೃತ ಮನಸುಗಳು ಸಂವಿಧಾನ ಬದ್ಧ ಮೀಸಲಾತಿ ವಿರೋಧಿಸುತ್ತಿವೆ. ಸಂವಿಧಾನ ಬಲಾವಣೆಯ ಮಾತು ಆಡಲಾಗುತ್ತಿದೆ. ಇದರ ಹಿಂದೆ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಬೆಂಬಲಿಸುವ ಸಂಘಟನೆಗಳು ಇವೆ ಎಂದರು.
ಸಂವಿಧಾನ ಪ್ರತಿಯನ್ನು ಸುಟ್ಟಿರುವ ದುಷ್ಕರ್ಮಿಗಳ ವಿರುದ್ಧ ದೇಶದ್ರೋಹ ಕಾನೂನಿನ ಪ್ರಕಾರ ಕ್ರಮ ಜರುಗಿಸಬೇಕು. ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದರು. ಮುಖಂಡರಾದ ರಾಘವೇಂದ್ರ ಕುಷ್ಟಗಿ, ಲಕ್ಷ್ಮಣ ಮಂಡಲಗೇರಾ, ಮರಿಲಿಂಗಪ್ಪ ಕೋಳೂರು, ಖಾಜಾ ಅಸ್ಲಂ, ಹನುಮಂತಪ್ಪ ಕಾಕರಗಲ್, ಪರಪ್ಪ ನಾಗೋಲಿ, ಆಂಜನೇಯ, ಬಸವರಾಜ, ಶೇಖ ಅಹ್ಮದ್ ಇದ್ದರು.
ಮಸ್ಕಿಯಲ್ಲಿ ಇಂದು ಪಂಜಿನ ಮೆರವಣಿಗೆ ಮಸ್ಕಿ: ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನ ಪ್ರತಿ ಸುಟ್ಟ ದೇಶದ್ರೋಹಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಆ.14ರಂದು ರಾತ್ರಿ 9 ಗಂಟೆಗೆ ಪಟ್ಟಣದಲ್ಲಿ ಪಂಜಿನ
ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಾಹಿತಿ ಸಿ. ದಾನಪ್ಪ ನಿಲೋಗಲ್ ತಿಳಿಸಿದರು.
ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ದೆಹಲಿಯ ಜಂತರ್ ಮಂತರ್
ನಲ್ಲಿ ಡಾ| ಅಂಬೇಡ್ಕರ್ ಬರೆದ ಸಂವಿಧಾನ ಪ್ರತಿಯನ್ನು ಸುಡಲಾಗಿದೆ. ಈ ದುಷ್ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಲು ಆಗ್ರಹಿಸಿ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಆ.14ರಂದು ರಾತ್ರಿ 9 ಗಂಟೆಗೆ ಗಾಂಧಿ ವೃತ್ತದಲ್ಲಿ ಪಂಜಿನ ಮೆರವಣಿಗೆ ಹೊರಟು ಪ್ರಮುಖ ರಸ್ತೆ, ವೃತ್ತಗಳ ಮಾರ್ಗವಾಗಿ ಹಳೆ ಬಸ್ ನಿಲ್ದಾಣದ
ಬಳಿ ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿ, ಕಿಡಿಗೇಡಿಗಳ ಪ್ರತಿಕೃತಿ ದಹಿಸಲಾಗುವುದು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳು, ಅಲ್ಪಸಂಖ್ಯಾತ ಸಂಘಟನೆ, ಬಿವಿಎಸ್ ಸಂಫಟನೆ ಸೇರಿ ಪ್ರಗತಿಪರ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.