ಟಂಟಂಗಳಿಗೆ ಪ್ರತ್ಯೇಕ ನಿಲ್ದಾಣ ಒದಗಿಸಿ
Team Udayavani, Jul 18, 2017, 3:05 PM IST
ರಾಯಚೂರು: ನಗರಸಭೆ ಹಾಗೂ ತಾಪಂ ಕಚೇರಿ ಪಕ್ಕದಲ್ಲಿ ಟಂಟಂ ವಾಹನಗಳಿಗೆ ಪ್ರತ್ಯೇಕ ನಿಲ್ದಾಣ ವ್ಯವಸ್ಥೆ ಮಾಡುವಂತೆ
ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಸಂಘದ ಸದಸ್ಯರು ನಗರಸಭೆ ಅಧ್ಯಕ್ಷರಿಗೆ ಸೋಮವಾರ ಮನವಿ ಸಲ್ಲಿಸಿದರು.
ನಗರಕ್ಕೆ ನಿತ್ಯ ಸುತ್ತಲಿನ ಗ್ರಾಮಗಳಿಂದ ನೂರಾರು ಜನ ಆಗಮಿಸುತ್ತಾರೆ. ಸುತ್ತಲಿನ 5-10 ಕಿ.ಮೀ. ವ್ಯಾಪ್ತಿಯ ಗ್ರಾಮಗಳ ಬಹುತೇಕ ಜನರು ಟಂಟಂ ವಾಹನಗಳನ್ನೇ ಅವಲಂಬಿಸಿದ್ದಾರೆ. ಸೂಕ್ತ ಸಾರಿಗೆ ಸೌಕರ್ಯ ಇಲ್ಲದ ಕಾರಣ ಟಂಟಂ ಆಟೋಗಳೇ ಅನಿವಾರ್ಯವಾಗಿವೆ. ಆದರೆ, ಇಲ್ಲಿ ವಾಹನ ನಿಲ್ಲಿಸಲು ಸೂಕ್ತ ನಿಲ್ದಾಣದ ವ್ಯವಸ್ಥೆ ಇಲ್ಲದೇ ಸಮಸ್ಯೆ ಎದುರಿಸುವಂತಾಗಿದೆ ಎಂದು ದೂರಿದರು.
ಇಲ್ಲಿ ವಾಹನ ನಿಲ್ಲಿಸಲು ನಗರಸಭೆಯಿಂದ ಅನುಮತಿ ಪಡೆಯಬೇಕು ಎಂದು ಪೊಲೀಸರು ತಾಕೀತು ಮಾಡುತ್ತಿದ್ದಾರೆ. ಟಂಟಂಗಳನ್ನು ಸಾಲ ಮಾಡಿ ಖರೀದಿಸಿ ಉಪಜೀವನ ನಡೆಸುತ್ತಿರುವ ಚಾಲಕರಿಗೆ ಇದರಿಂದ ಸಾಕಷ್ಟು ಸಮಸ್ಯೆಯಾಗುತ್ತಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ರಸ್ತೆ ಸುರಕ್ಷತಾ ಹಾಗೂ ನಗರಾಭಿವೃದ್ಧಿ ದೃಷ್ಟಿಯಿಂದ ಟಂಟಂ ಹಾಗೂ ಆಟೋ ರಿಕ್ಷಾಗಳಿಗೆ ಪ್ರತ್ಯೇಕ ನಿಲುಗಡೆಯ ವ್ಯವಸ್ಥೆ
ಮಾಡಲಾಗಿದೆ. ಆದರೆ, ಇಲ್ಲಿ ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಗರದ ಸುತ್ತಮುತ್ತಲಿನ ಗ್ರಾಮಗಳಿಂದ ನಾನಾ ಕಾರ್ಯಗಳಿಗೆ ಬರುವ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಟಂಟಂ ಗಾಡಿಗಳಿಗೆ ಪ್ರತ್ಯೇಕ ನಿಲ್ದಾಣಕ್ಕೆ ನಗರಸಭೆ ಪಕ್ಕದಲ್ಲೇ ಅನುಕೂಲ ಮಾಡಬೇಕು ಎಂದು ಮನವಿ ಮಾಡಿದರು. ವೇದಿಕೆ ಅಧ್ಯಕ್ಷ ಜನಾರ್ಧನ ಹಳ್ಳಿಬೆಂಚಿ, ಪ್ರಧಾನ ಕಾರ್ಯದರ್ಶಿ ಎನ್.ಕೆ.ನಾಗರಾಜ, ಸದಸ್ಯರಾದ ಚಂದ್ರಶೇಖರ ಯಕ್ಲಾಸಪುರ, ಭೀಮಣ್ಣ, ಆರ್.ಆಂಜನೇಯ, ರಾಜಶೇಖರ, ಆಟೋ ಚಾಲಕರಾದ ಮಹಾದೇವ, ತಿಮ್ಮಪ್ಪ, ಹುಸೇನಿ, ಚಿನ್ನಿ, ರಾಮಪ್ಪ, ಭೀಮಪ್ಪ, ವೀರೇಶ, ನಾಗರಾಜ, ನರಸಪ್ಪ, ಸುರೇಶ, ಮಹೇಶ, ಅಯ್ಯಪ್ಪ, ಜಂಬಯ್ಯ ಸೇರಿ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ
IFFI 2024; ಟಾಕ್ಸಿಕ್ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್ ಮಸ್ಸೆಗೆ ವಾರ್ಷಿಕ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.