ಪಿಯು ಪರೀಕ್ಷೆ: 17,881 ಮಂದಿ ಹಾಜರು
Team Udayavani, Jun 19, 2020, 7:16 AM IST
ರಾಯಚೂರು: ಜಿಲ್ಲಾದ್ಯಂತ ಗುರುವಾರ ದ್ವಿತೀಯ ಪಿಯು ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು ಯಾವುದೇ ಅಹಿತಕರ ಘಟನೆ ಇಲ್ಲದಂತೆ ಸುಗಮವಾಗಿ ನಡೆಯಸಲಾಯಿತು.
ಲಾಕ್‌ಡೌನ ಇಂಗ್ಲಿಷ್ ಪರೀಕ್ಷೆ ಬರೆಯಲು ಜಿಲ್ಲೆಯಲ್ಲಿ 19,228 ಜನ ನೋಂದಾಯಿಸಿಕೊಂಡಿದ್ದರು. ಅವರ ಪೈಕಿ 17,881 ಮಂದಿ ಪರೀಕ್ಷೆಗೆ ಹಾಜರಾಗಿದ್ದು, 1347 ಮಂದಿ ಪರೀಕ್ಷೆಗೆ ಗೈರಾಗಿದ್ದಾರೆ. ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಪರೀಕ್ಷೆ ನಡೆಯುತ್ತಿದ್ದ ನಗರ ಕೆಲವು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಭೇಟಿ ನೀಡಿ ಪರಿಶೀಲಿಸಿದರು. ನಗರದ ಎಲ್‌ವಿಡಿ ಕಾಲೇಜು ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದ ಅವರು ಪರೀಕ್ಷೆ ನಡೆಯುತ್ತಿರುವ ಎಲ್ಲ ಕೊಠಡಿಗಳು ಹಾಗೂ ಕೋವಿಡ್-19 ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳನ್ನು ಕೂಲಂಕುಷವಾಗಿ ಪರಿಶೀಲಿಸಿದರು. ಎಸ್‌ಪಿ ಡಾ| ಸಿ.ಬಿ. ವೇದಮೂರ್ತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.