7ರಿಂದ 19ರವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆ
Team Udayavani, Sep 4, 2020, 6:19 PM IST
ರಾಯಚೂರು: ಜಿಲ್ಲೆಯ 11 ಕೇಂದ್ರಗಳಲ್ಲಿ ಸೆ.7ರಿಂದ 19ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಎಡಿಸಿ ದುರಗೇಶ ಸೂಚಿಸಿದರು.
ನಗರದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಗುರುವಾರ ನಡೆದ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, 9,198 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಅವ್ಯವಸ್ಥೆ, ಲೋಪಗಳಾಗದಂತೆ ಪರೀಕ್ಷೆ ನಡೆಸಬೇಕು. ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಮುಖ್ಯ ಪರೀಕ್ಷೆಯಲ್ಲಿ ಕೈಗೊಂಡ ಕ್ರಮ ಕಡ್ಡಾಯವಾಗಿ ಕೈಗೊಳ್ಳಬೇಕು ಎಂದು ತಿಳಿಸಿದರು. ನಕಲು ನಡೆಯದಂತೆ ಎಚ್ಚರ ವಹಿಸಬೇಕು, ಪರೀಕ್ಷಾ ಕೇಂದ್ರಗಳ ಸುತ್ತಲೂ ಬಂದೋಬಸ್ತ್ ಒದಗಿಸಬೇಕು. ಪರೀಕ್ಷೆಗೆ ಹಾಜರಾಗುವ ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಪರೀಕ್ಷೆ ಮುನ್ನ ಹಾಗೂ ನಂತರ ವಿದ್ಯಾರ್ಥಿಗಳ ಗುಂಪುಗೂಡದಂತೆ ನೋಡಿಕೊಳ್ಳಿ ಎಂದರು.
ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ನಿಗಾವಹಿಸಲು ಸಹಾಯಕ ಆಯುಕ್ತರ ನೇತೃತ್ವದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕೆಂದರು. ಈ ವೇಳೆ ಡಿಡಿಪಿಯು ಸದಾಶಿವಪ್ಪ, ತಹಶೀಲ್ದಾರಗಳಾದ ಡಾ. ಹಂಪಣ್ಣ, ಚಾಮರಸ ಪಾಟೀಲ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ಬಿಇಒಗಳಾದ ಆರ್. ಇಂದಿರಾ, ಚಂದ್ರಶೇಖರ್ ದೊಡ್ಡಮನಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.