ಪಿಯು ಪರೀಕ್ಷೆ ಸುಗಮ; 979 ಜನ ಗೈರು
Team Udayavani, Mar 2, 2018, 3:50 PM IST
ರಾಯಚೂರು: ಜಿಲ್ಲಾದ್ಯಂತ ಗುರುವಾರದಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ ಅರ್ಥಶಾಸ್ತ್ರ, ಭೌತಶಾಸ್ತ್ರ ವಿಷಯಕ್ಕೆ ಪರೀಕ್ಷೆ ನಡೆಯಿತು.
ಅರ್ಥಶಾಸ್ತ್ರ ವಿಷಯದಲ್ಲಿ 11,638ರಲ್ಲಿ 10,797 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 841 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಭೌತಶಾಸ್ತ್ರ ವಿಷಯದಲ್ಲಿ 3,348ರಲ್ಲಿ 3,210 ವಿದ್ಯಾರ್ಥಿಗಳು ಹಾಜರಿದ್ದು, 138 ವಿದ್ಯಾರ್ಥಿಗಳು ಗೈರಾದರು.
ಜಿಲ್ಲೆಯಲ್ಲಿ 34 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದು, ಒಂದೆರಡು ಕೇಂದ್ರ ಹೊರತಾಗಿಸಿ ಬಹುತೇಕ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು. ರಾಯಚೂರು-11, ಸಿಂಧನೂರು-7, ಮಾನವಿ-5, ಲಿಂಗಸುಗೂರು-8 ಮತ್ತು ದೇವದುರ್ಗ-3 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಎಲ್ಲೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿತ್ತು.
ರೂಟ್ ಅಧಿಕಾರಿಗಳ ವಾಹನಗಳಿಗೆ ಜಿಪಿಎಸ್ ಯಂತ್ರ ಅಳವಡಿಸುವ ಮೂಲಕ ಪ್ರಶ್ನೆ ಪತ್ರಿಕೆಗಳನ್ನು ಸಾಗಿಸುವಾಗ ವಿಶೇಷ ನಿಗಾ ವಹಿಸಲಾಗಿತ್ತು. ವಾಹನವನ್ನು ಮಾರ್ಗ ಮಧ್ಯದಲ್ಲಿ ನಿಲ್ಲಿಸದೇ ನೇರವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲಾಯಿತು. ಪರೀಕ್ಷೆ ಮುಗಿದ ಬಳಿಕವೂ ನಂತರ ನಿಯೋಜಿತ ಪೊಲೀಸ್ ಸಿಬ್ಬಂದಿಯೊಂದಿಗೆ ಉತ್ತರ ಪತ್ರಿಕೆಗಳನ್ನು ಅಂಚೆ ಕಚೇರಿಗೆ ತಲುಪಿಸಲಾಯಿತು ಎಂದು ಡಿಡಿಪಿಯುವ ಮಾಧವ ಮಾದಗಿ ತಿಳಿಸಿದ್ದಾರೆ.
ದೇವದುರ್ಗ: 1,041 ವಿದ್ಯಾರ್ಥಿಗಳು ಹಾಜರು
ದೇವದುರ್ಗ: ಪಟ್ಟಣದ ಬಾಲಕಿಯರ, ಬಾಲಕರ ಮತ್ತು ಬಸವ ಪ್ರೌಢಶಾಲೆಯಲ್ಲಿ ನಡೆದ ಭೌತಶಾಸ್ತ್ರ ಮತ್ತು ಅರ್ಥಶಾಸ್ತ್ರ ವಿಷಯ ದ್ವಿತೀಯ ಪಿಯು ಪರೀಕ್ಷೆಗೆ 1041 ವಿದ್ಯಾರ್ಥಿಗಳು ಹಾಜರಾಗಿದ್ದರು.
100 ವಿದ್ಯಾರ್ಥಿಗಳು ಗೈರಾಗಿದ್ದರು. ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಭೌತಶಾಸ್ತ್ರ 36 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಅರ್ಥಶಾಸ್ತ್ರ ವಿಷಯ 390 ವಿದ್ಯಾರ್ಥಿಗಳು ಹಾಜರಾಗಿದ್ದರು. ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಅರ್ಥಶಾಸ್ತ್ರ 248 ವಿದ್ಯಾರ್ಥಿಗಳು, ಭೌತಶಾಸ್ತ್ರ 37 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಬಸವ ಪ್ರೌಢಶಾಲೆಯಲ್ಲಿ ಭೌತಶಾಸ್ತ್ರ ವಿಷಯ 33 ವಿದ್ಯಾರ್ಥಿಗಳು ಹಾಜರಾಗಿದ್ದರು.
ಅರ್ಥಶಾಸ್ತ್ರ 297 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಮೂರು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ 31 ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು. ಕೇಂದ್ರ ಸುತ್ತಲೂ ಯಾವುದೇ ನಕಲು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. ಪರೀಕ್ಷೆ ಮುಖ್ಯ ಅಧೀಕ್ಷಕರಾದ ಗರುಡ ವಾಹನ, ದೊಡ್ಡಮನಿ, ಪವನ ಕುಮಾರ ರಾಯಚೂರು ಸೇರಿ ಸಹಾಯಕ ಅಧಿಕಾರಿಗಳು ಸಿದ್ದಣ್ಣ, ಪ್ರಾಚಾರ್ಯ ಮಸರಕಲ್, ಡಾ| ರಫಿಕ ಅಹ್ಮದ್, ಯಮನಪ್ಪ, ಜಾವೀದ್ ಪಾಷ, ತಿರುಪತಿ ಸೂಗೂರು, ಶಿವಗೇನಿ, ವೆಂಕಟೇಶ ಚಲುವಾದಿ, ಶಿವುಕುಮಾರ ಗಲಗ, ಶ್ರೀಕಾಂತ್ ಬಿಲ್ಲವ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.