ಪ್ರಣಾಳಿಕೆಗೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹ
Team Udayavani, Feb 3, 2018, 4:54 PM IST
ಮಾನ್ವಿ: ಸಾರ್ವಜನಿಕ ಸಭೆ ಕರೆದು ಚರ್ಚಿಸಿ ಪ್ರಣಾಳಿಕೆ ಸಿದ್ದಪಡಿಸುವ ಪ್ರಕ್ರಿಯೆ ಇದುವರೆಗೂ ದೇಶದಲ್ಲಿ ಯಾವುದೇ ಪಕ್ಷ ಮಾಡಿಲ್ಲ. ಇದು ಮೊದಲ ಪ್ರಯತ್ನವಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಾಗರತ್ನ ಕುಪ್ಪಿ ಹೇಳಿದರು.
ಪಟ್ಟಣದ ಎಪಿಎಂಸಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾನ್ವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಸಿದ್ಧಪಡಿಸಬೇಕಾಗಿದೆ. ಪ್ರಣಾಳಿಕೆ ಸಭೆ ನಡೆಸುವ ಮೂಲಕ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಸಾರ್ವಜನಿಕರು ನೀಡುವ ಸಮಸ್ಯೆ, ಸಲಹೆ, ಪರಿಹಾರಗಳನ್ನು
ಪ್ರಣಾಳಿಕೆಯಲ್ಲಿ ಬಳಸಿಕೊಳ್ಳಲಾಗುತ್ತದೆ ಎಂದು ಹೇಳಿದರು.
ಸಭೆಯಲ್ಲಿ ಮಾಹಿತಿಯೊಂದಿಗೆ ಸಾರ್ವಜನಿಕರು ತಿಳಿಸುವ ಸಮಸ್ಯೆ ಹಾಗೂ ಆ ಸಮಸ್ಯೆ ನಿವಾರಣೆಗೆ ಪರಿಹಾರ ಬರೆಯಲು ಫಾರಂ ನೀಡಲಾಗುತ್ತದೆ. ಸಾರ್ವಜನಿಕರು ತಿಳಿಸಿದ ಸಮಸ್ಯೆ ಮತ್ತು ಸಲಹೆಗಳನ್ನು ಪ್ರಣಾಳಿಕೆ ತಯಾರಿಕೆ ಸಮಯದಲ್ಲಿ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಅಲ್ಲದೆ ಒಂದು ವೇಳೆ ಪಕ್ಷ ಅಧಿಕಾರಕ್ಕೆ ಬಂದರೆ ಸಾರ್ವಜನಿಕರು ನೀಡಿರುವ ಪರಿಹಾರ ಬಳಸಿಕೊಂಡು ಸಮಸ್ಯೆ ನಿವಾರಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ನಂತರ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಶಿವುಕುಮಾರ ಮಾತನಾಡಿ, ಪ್ರಣಾಳಿಕೆಗೆ ಅಭಿಪ್ರಾಯ ಸಂಗ್ರಹ ಇದೊಂದು ವಿಭಿನ್ನ ಕಾರ್ಯಕ್ರಮವಾಗಿದೆ. ವಿವಿಧ ಇಲಾಖೆಗಳ ಸಮಸ್ಯೆ, ಕುಡಿಯುವ ನೀರು, ರಸ್ತೆ, ರೈತರು ಮತ್ತು ನೀರಾವರಿ, ಶಿಕ್ಷಣ, ಆರೋಗ್ಯ ಸೇರಿದಂತೆ ಅನೇಕ ವಿಷಯಗಳಲ್ಲಿ ಹೆಚ್ಚಿನ ಬೇಡಿಕೆ ಇರುವ ಅಂಶಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಿಕೊಳ್ಳಲಾಗುತ್ತದೆ. ಬಿಜೆಪಿ ಹಿರಿಯ
ಮುಖಂಡರ ಸೂಚನೆಯಂತೆ ನವಭಾರತಕ್ಕಾಗಿ ನವಕರ್ನಾಟಕ ಜನಪರ ಶಕ್ತಿ ಹಾಗೂ ಪ್ರಣಾಳಿಕೆ ಸಭೆ ನಡೆಸಲಾಗುತ್ತಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ ಪಾಟೀಲ, ತಾಲೂಕು ಅಧ್ಯಕ್ಷ ಶರಣಪ್ಪಗೌಡ ನಕ್ಕುಂದಿ ಮಾತನಾಡಿದರು. ಮುಖಂಡರಾದ ಗಂಗಾಧರನ ನಾಯಕ, ಡಾ| ಶರಣಪ್ಪ ಬಲ್ಲಟಗಿ, ಗಿರಯ್ಯ ಪಾಟೀಲ, ಎ. ಬಾಲಸ್ವಾಮಿ ಕೊಡ್ಲಿ, ಕೊಟ್ರೇಶಪ್ಪ ಕೋರಿ, ಅಯ್ಯಪ್ಪ ಮ್ಯಾಕಲ್, ವೈ. ಶರಣಪ್ಪ ಗುಡದಿನ್ನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.