ರಾಯಚೂರು: ಮತ್ತೆ 3 ಪಾಸಿಟಿವ್
Team Udayavani, Jun 24, 2020, 8:47 AM IST
ರಾಯಚೂರು: ಜಿಲ್ಲೆಯಲ್ಲಿ ಕೋವಿಡ್ ಏರಿಳಿತ ಮುಂದುವರಿದಿದ್ದು, ಮಂಗಳವಾರ ಮತ್ತೆ ಮೂರು ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. ತೆಲಂಗಾಣದಿಂದ ಹಿಂದಿರುಗಿದ ನಗರದ 32 ವರ್ಷದ ಪುರುಷನಿಗೆ, ಐಎಲ್‌ಐನಿಂದ ನಗರದ 52 ವರ್ಷದ ಮಹಿಳೆಗೆ ಹಾಗೂ ಮಹಾರಾಷ್ಟ್ರದಿಂದ ಬಂದ ದೇವದುರ್ಗ ತಾಲೂಕಿನ ಕೊಪ್ಪರ ಗ್ರಾಮದ 60 ವರ್ಷದ ಪುರುಷನಿಗೆ ಸೋಂಕು ಇರುವುದು ದೃಢಪಟ್ಟಿದೆ.
ಮಂಗಳವಾರ ದೇವದುರ್ಗ ತಾಲೂಕಿನಿಂದ 91, ಲಿಂಗಸುಗೂರು ತಾಲೂಕಿನಿಂದ 23, ಮಾನ್ವಿ ತಾಲೂಕಿನಿಂದ 102, ಸಿಂಧನೂರು ತಾಲೂಕಿನಿಂದ 74 ಮತ್ತು ರಾಯಚೂರು ತಾಲೂಕಿನಿಂದ 65 ಸೇರಿದಂತೆ 355 ಜನರ ಗಂಟಲಿನ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹಿಂದೆ ಕಳುಹಿಸಿದ್ದ ವರದಿಗಳಲ್ಲಿ 266 ನೆಗೆಟಿವ್ ಆಗಿವೆ. ಮೂರು ಪಾಸಿಟಿವ್ ಎಂದು ದೃಢಪಟ್ಟಿವೆ. ಒಟ್ಟಾರೆ ಜಿಲ್ಲೆಯಿಂದ ಈವರೆಗೆ 20,722 ಜನರ ಗಂಟಲು ದ್ರವ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಿದ್ದು, ಅವುಗಳಲ್ಲಿ 19,327 ವರದಿಗಳು ನೆಗೆಟಿವ್ ಬಂದಿವೆ.
ಉಳಿದ 955 ಸ್ಯಾಂಪಲ್ ಗಳ ಫಲಿತಾಂಶ ಬರಬೇಕಿದೆ. ಫೀವರ್ ಕ್ಲಿನಿಕ್‌ಗಳಲ್ಲಿಂದು 356 ಜನರನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಗುಣಮುಖರಾದ ಕಾರಣ 308 ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ವಿವಿಧ ಕ್ವಾರಂಟೈನ್ ಕೇಂದ್ರಗಳಲ್ಲಿ 155 ಜನರನ್ನು ಇರಿಸಿ ನಿಗಾವಹಿಸಲಾಗಿದೆ. ಕೋವಿಡ್-19 ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.