ವಿಮಾನ ಹಾರಾಟ ಮೊದಲೇ ಹೆಸರಿಗೆ ಕಿತ್ತಾಟ
Team Udayavani, Jun 19, 2021, 8:02 PM IST
ರಾಯಚೂರು: ಕೂಸು ಹುಟ್ಟುವ ಮುನ್ನ ಕುಲಾವಿ ಹೊಲಿಸಿದರೂ ಎನ್ನುವಂತಾಗಿದೆ ಜಿಲ್ಲೆಯ ಉದ್ದೇಶಿತ ವಿಮಾನ ನಿಲ್ದಾಣದ ಸ್ಥಿತಿ. ಏರ್‌ಪೋರ್ಟ್‌ಗೆ ಸಂಬಂಧಿ ಸಿದ ಪ್ರಕ್ರಿಯೆ ಶುರುವಾಗಿದ್ದರೂ ಸರ್ಕಾರ ಇನ್ನೂ ಅಧಿಕೃತ ಆದೇಶವೇ ಹೊರಡಿಸಿಲ್ಲ. ಆದರೆ, ಆಗಲೇ ಹೆಸರಿಗಾಗಿ ಕಿತ್ತಾಟ ಶುರುವಾಗಿದೆ. ರಾಯಚೂರು-ಹೈದರಾಬಾದ್ ಮುಖ್ಯರಸ್ತೆ ಹೊಂದಿಕೊಂಡಂತೆ ಏಗನೂರು ಸಮೀಪ ಏರ್‌ಪೋರ್ಟ್ ನಿರ್ಮಾಣ ಪ್ರಕ್ರಿಯೆಗೆ ಈಗ ರೆಕ್ಕೆ ಪುಕ್ಕ ಮೂಡಿವೆ.
ಅಷ್ಟರಲ್ಲೇ ನಗರಸಭೆ ಸಾಮಾನ್ಯ ಸಭೆಯಲ್ಲಿ ಕೆಲ ಸದಸ್ಯರ ಒತ್ತಾಸೆ ಮೇರೆಗೆ ವಿಮಾನ ನಿಲ್ದಾಣಕ್ಕೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಹೆಸರಿಡಲು ಅನುಮೋದನೆ ಪಡೆಯಲಾಗಿದೆ. ಆ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ; ಎಲ್ಲೆಡೆ ಪರ-ವಿರೋಧ ಹೆಚ್ಚಾಗುತ್ತಿದೆ. ನಗರಸಭೆಯ ನಿರ್ಣಯವೇ ಅಂತಿಮವಲ್ಲ.
ಆದರೆ, ಅಲ್ಲಿ ಕೈಗೊಂಡ ನಿರ್ಣಯದಿಂದ ಗೊಂದಲ ಸೃಷ್ಟಿಯಾಗಿರುವುದಂತೂ ಸುಳ್ಳಲ್ಲ. ಇದು ದೇಶದ ಪ್ರಥಮ ಪ್ರಧಾನಿ ನೆಹರು ಸ್ಮರಣಾರ್ಥ ನಿರ್ಮಿಸುತ್ತಿರುವ ವಿಮಾನ ನಿಲ್ದಾಣ. ಹೀಗಾಗಿ ಅವರ ಹೆಸರೇ ಸೂಕ್ತ ಎಂದು ಕೆಲವರು, ಸಂಗೊಳ್ಳಿ ರಾಯಣ್ಣನ ಹೆಸರಿಡಬೇಕು ಎಂದು ಕೆಲವರು, ಏಗನೂರು ಕಂದಾಯ ಗ್ರಾಮ ವ್ಯಾಪ್ತಿಯಲ್ಲೇ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದ್ದು, ಹೀಗಾಗಿ ದೇವನಹಳ್ಳಿ ಏರ್‌ಪೋರ್ಟ್ ರೀತಿ ಏಗನೂರು ಏರ್‌ಪೋರ್ಟ್ ಎಂದೇ ಹೆಸರಿಡಬೇಕು ಎಂಬ ಒತ್ತಾಯಗಳು ಕೇಳಿ ಬರುತ್ತಿವೆ. ಮುಂದಿನ ದಿನಗಳಲ್ಲಿ ಈ ಪಟ್ಟಿ ಇನ್ನೂ ಹೆಚ್ಚಾದರೂ ಅಚ್ಚರಿ ಇಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.