Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ
Team Udayavani, Mar 12, 2024, 11:30 AM IST
ರಾಯಚೂರು: ಸಂಸದ ಅನಂತ ಕುಮಾರ್ ಹೆಗಡೆ ಒಬ್ಬ ಮೂರ್ಖ. ಸಂವಿಧಾನ ಬದಲಿಸುತ್ತೇವೆ ಎಂದು ಹೇಳುವ ಸಂಸದನನ್ನು ಆ ಕ್ಷೇತ್ರ ಜನ ಹೇಗೆ ಗೆಲ್ಲಿಸಿದ್ದಾರೋ ಗೊತ್ತಿಲ್ಲ ಎಂದು ಸಚಿವ ಬಿ.ನಾಗೇಂದ್ರ ಹೇಳಿದರು.
ಮಂತ್ರಾಲಯದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಸೂರ್ಯ ಚಂದ್ರರ ಸಾಕ್ಷಿಯಾಗಿ ಹೇಳುತ್ತೇನೆ. ಸಂವಿಧಾನ ಬದಲಿಸಲು ಯಾರಿಂದ ಸಾಧ್ಯವಿಲ್ಲ. ಸಂವಿಧಾನ ಇದ್ದುದ್ದಕ್ಕೆ ನಾನು ಶಾಸಕ ಮಂತ್ರಿಯಾಗಿದ್ದೇನೆ. ಪ್ರಧಾನಿ ಮೋದಿ ಅವರು ಸಹ ಸಂವಿಧಾನದಿಂದಲೇ ನಾನು ಪ್ರಧಾನಿಯಾಗಿದ್ದೇನೆ ಎಂದು ಹೇಳುತ್ತಾರೆ. ಆದರೆ, ಅವರ ಪಕ್ಷದ ಸಂಸದ ಗೆದ್ದು ಬಂದ ಕೂಡಲೇ ಸಂವಿಧಾನ ಬದಲಿಸುತ್ತೇವೆ ಎನ್ನುತ್ತಾರೆ. ಸಂವಿಧಾನವನ್ನು ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ. ಇಂತಹ ಮೂರ್ಖರು ಎಷ್ಟು ಹೇಳಿದರು ಬದಲಾಗಲ್ಲ ಎಂದರು.
ಸಂವಿಧಾನ ಬದಲಾದರೆ ರಕ್ತಪಾತವಾಗುತ್ತದೆ ಎನ್ನುವ ಸಿಎಂ ಸಿದ್ದರಾಮಯ್ಯ ನೂರಕ್ಕೆ ನೂರರಷ್ಟು ಸತ್ಯ. ಸಂವಿಧಾನ ಬಿಟ್ಟು ನಡೆದುಕೊಳ್ಳುವುದಾದರೆ ನಮಗೆ ವಾಕ್ ಸ್ವಾತಂತ್ರ್ಯವೂ ಇರಲ್ಲ ಎಂದರು.
ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಪಕ್ಷದ ಕಟ್ಟಕಡೆಯ ಕಾರ್ಯಕರ್ತ ಸ್ಪರ್ಧಿಸಿದರೂ ಗೆಲ್ಲುವಂತಹ ವಾತಾವರಣವಿದೆ. ಬಳ್ಳಾರಿಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ. ಎದುರಾಳಿ ಯಾರೇ ನಿಂತರೂ ನಮಗೆ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.