ಗಣೇಶ ವಿಸರ್ಜನೆ ವೇಳೆ ಗಲಾಟೆ: 6 ಜನ ಸೆರೆ
Team Udayavani, Aug 28, 2020, 7:46 PM IST
ರಾಯಚೂರು: ಸರ್ಕಾರದ ನಿಯಮಗಳಿಗೆ ಬದ್ಧವಾಗಿರುವುದಾಗಿ ಮುಚ್ಚಳಿಕೆ ಬರೆದುಕೊಟ್ಟರೂ ಗಣೇಶ ವಿಸರ್ಜನೆ ವೇಳೆ ಧ್ವನಿವರ್ಧಕ ಬಳಸಲು ಅವಕಾಶ ನೀಡಿಲ್ಲ ಎಂಬ ಕಾರಣಕ್ಕೆ ನಗರದ ಭಂಗಿಕುಂಟಾ ಬಳಿ ಯುವಕರು ಬುಧವಾರ ತಡರಾತ್ರಿ ದೊಡ್ಡ ಗಲಾಟೆ ನಡೆಸಿದ್ದಾರೆ. ಯು
ವಕರು ಪೊಲೀಸರೊಂದಿಗೆ ವಾಗ್ವಾದ ಮಾಡಿದ್ದಲ್ಲದೆ, ನೂಕಾಟ ಮಾಡಿದ್ದಾರೆ. ಆರು ವಾಹನಗಳನ್ನು ಜಖಂಗೊಳಿಸಿದ್ದು, ತಳ್ಳುಬಂಡಿಗಳನ್ನು ಚಲ್ಲಾಪಿಲ್ಲಿ ಮಾಡಿದ್ದಾರೆ. ಪರಿಸ್ಥಿತಿ ಹತೋಟಿಗೆ ತರಲು ಲಾಠಿ ಪ್ರಹಾರ ನಡೆಸಿದ ಪೊಲೀಸರು ಸದರ್ ಬಜಾರ್ ಠಾಣೆಯಲ್ಲಿ 36 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರು ಜನರನ್ನು ಬಂಧಿ ಸಿದ್ದಾರೆ. ಸುನೀಲ, ವೆಂಕಟ, ವಿನಯ, ತಿರುಮಲ, ವೆಂಕಟೇಶ ಹಾಗೂ ಅಭಿಷೇಕ ಬಂಧಿತರು. ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದು, ಶೋಧ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಂದು ಟಂಟಂ, ಐದು ಬೈಕ್‌ಗಳು ಜಖಂಗೊಂಡಿವೆ. ಮುನ್ನೂರುಕಾಪು ಕಲ್ಯಾಣ ಮಂಟಪ ಹತ್ತಿರದ ಶ್ರೀ ಮಾತಾ ಲಕ್ಷ¾ಮ್ಮದೇವಿ ನವ ಯುವಕ ಮಂಡಳಿಯು ಪ್ರತಿಷ್ಠಾಪಿಸಿದ್ದ ಗಣೇಶ ವಿಸರ್ಜನೆ ವೇಳೆ ಘಟನೆ ನಡೆದಿದೆ. ಈ ಬಾರಿ ಗಣೇಶ ವಿಸರ್ಜನೆ ವೇಳೆ ಮೆರವಣಿಗೆ ಮಾಡಲು ಅವಕಾಶನೀಡುವುದಿಲ್ಲ. ಗುಂಪುಗೂಡುವಿಕೆ ನಿಷೇಧಿ ಸಲಾಗಿದೆ ಎಂದು ಜಿಲ್ಲಾಡಳಿತ ಮುಂಚೆಯೇ ತಿಳಿಸಿತ್ತು. ನಿಯಮ ಪಾಲಿಸುವುದಾಗಿ ಒಪ್ಪಿ ಮುಚ್ಚಳಿಕೆ ಬರೆದುಕೊಟ್ಟ ಗಜಾನನ ಸಮಿತಿಗಳಿಗೆ ಮಾತ್ರ ಪರವಾನಗಿ ನೀಡಲಾಗಿತ್ತು. ಆದರೂ ವಿಸರ್ಜನೆಗೆ ಕೊನೆ ದಿನವಾಗಿದ್ದ ನಿನ್ನೆ ಈ ರೀತಿ ಗಲಾಟೆ ಜರುಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.