Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Team Udayavani, Mar 29, 2024, 7:05 AM IST
ರಾಯಚೂರು: ಕಾಂಗ್ರೆಸ್ ಪಕ್ಷವನ್ನೇ ಉಸಿರಾಗಿಸಿಕೊಂಡು ಅನೇಕ ದಶಕಗಳ ಕಾಲ ಪಾರುಪತ್ಯ ಮಾಡಿದ್ದ ರಾಯಚೂರು ಲೋಕಸಭೆ ಕ್ಷೇತ್ರದಲ್ಲಿ ಈಗ ಬಿಜೆಪಿಯೂ ಬೇರು ಬಿಟ್ಟಿದೆ. ಈವರೆಗೆ ಕೇವಲ ಎರಡೇ ಬಾರಿ ಗೆದ್ದಿರುವ ಬಿಜೆಪಿ ಮೂರನೇ ಬಾರಿ ಗೆಲ್ಲುವ ತವಕದಲ್ಲಿದ್ದರೆ, ಕಾಂಗ್ರೆಸ್ ಈ ಕ್ಷೇತ್ರವನ್ನು ಮರಳಿ ಪಡೆಯಲು ನಿವೃತ್ತ ಐಎಎಸ್ ಅಧಿಕಾರಿಯನ್ನು ಕಣಕ್ಕಿಳಿಸಿ ಪ್ರಯೋಗಕ್ಕೆ ಮುಂದಾಗಿದೆ.
ರಾಯಚೂರು ಮತ್ತು ಯಾದಗಿರಿ ಜಿಲ್ಲೆ ಒಳಗೊಂಡು ರಚನೆಯಾಗಿರುವ ಈ ಕ್ಷೇತ್ರದಲ್ಲಿ ಈ ಹಿಂದೆ ನಡೆದ ಚುನಾವಣೆಗಳಲ್ಲಿ 14 ಬಾರಿ ಕಾಂಗ್ರೆಸ್‌ಗೆ ಜಯ ಸಿಕ್ಕಿದೆ. 2014ರಲ್ಲಿ ಎಲ್ಲೆಡೆ ಮೋದಿ ಅಲೆಯಿದ್ದರೂ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಗೆಲುವಾಗಿತ್ತು. ಆದರೆ 2019ರಲ್ಲಿ ಮೋದಿ ಅಲೆ ಎದುರು ಕಾಂಗ್ರೆಸ್ ಮಂಡಿಯೂರಿತು. ಈ ಬಾರಿಯೂ ಬಿಜೆಪಿಗೆ ಮೋದಿ ಶಕ್ತಿಯನ್ನೇ ನೆಚ್ಚಿಕೊಂಡರೆ, ಕಾಂಗ್ರೆಸ್ ಗ್ಯಾರಂಟಿ, 371 (ಜೆ) ವಿಶೇಷ ಸ್ಥಾನಮಾನ ಸ್ಮರಿಸುವ ಮೂಲಕ ಚುನಾವಣೆಗೆ ಹೊರಟಿದೆ.
ಬಿಜೆಪಿಯಿಂದ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕರನ್ನು ಕಣಕ್ಕಿಳಿಸಿದೆ. ಆದರೆ ಆರಂಭದಿಂದ ಕೊನೆವರೆಗೂ ಮಾಜಿ ಸಂಸದ ಬಿ.ವಿ.ನಾಯಕಗೆ ಟಿಕೆಟ್ ಸಿಗಲಿದೆ ಎಂಬ ಚರ್ಚೆಗಳಿದ್ದು, ಕೊನೇ ಕ್ಷಣದಲ್ಲಿ ಬದಲಾಗಿದೆ. ಇದರಿಂದ ಬಿ.ವಿ.ನಾಯಕ ಬೆಂಬಲಿಗರಿಗೆ ಬೇಸರವಾಗಿದ್ದು, ಬಿಜೆಪಿಗೆ ತುಸು ಹಿನ್ನಡೆ ಆಗಲೂಬಹುದು.
ನಿರ್ಣಾಯಕ ಅಂಶ ಏನು?:
ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಈ ಕ್ಷೇತ್ರದಲ್ಲಿ ಅದಕ್ಕೆ ಪೂರ್ವದಲ್ಲೂ ನಾಯಕ ಸಮುದಾಯದ ಪ್ರಾಬಲ್ಯವೇ ಇತ್ತು. ವೆಂಕಟೇಶ ನಾಯಕ ಸಾಮಾನ್ಯ ವರ್ಗಕ್ಕೆ ಮೀಸಲಾದ ಕ್ಷೇತ್ರದಿಂದಲೇ 4 ಬಾರಿ ಗೆಲುವು ಸಾಧಿಸಿದ್ದರು. ಲಿಂಗಾಯತರು, ಕುರುಬರು, ಪರಿಶಿಷ್ಟ ಜಾತಿ ಹಾಗೂ ಅಲ್ಪಸಂಖ್ಯಾಕರ ಪ್ರಾಬಲ್ಯ ಕೂಡ ಹೆಚ್ಚಾಗಿಯೇ ಇದೆ. ಎಸ್‌ಟಿಗೆ ಮೀಸಲಾಗಿರುವ ಕಾರಣ ನಾಯಕ ಮತಗಳು ವಿಭಜನೆಗೊಂಡರೆ, ಲಿಂಗಾಯತರು, ಕುರುಬರು ಮತಗಳು ನಿರ್ಣಾಯಕ ಎನಿಸಿಕೊಳ್ಳುತ್ತಿವೆ.
ಸೂಕ್ತ ಅಭ್ಯರ್ಥಿಗಾಗಿ ಶೋಧ ನಡೆಸಿದ್ದ ಕಾಂಗ್ರೆಸ್ ಕೊನೆಗೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಐಎಎಸ್ ಅಧಿಕಾರಿ ಜಿ.ಕುಮಾರ ನಾಯಕಗೆ ಮಣೆ ಹಾಕಿದೆ. ಅಲ್ಪಸಂಖ್ಯಾಕ ಮತಗಳು ಕಾಂಗ್ರೆಸ್ ಪರವಾದರೆ, ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಪ್ಲಸ್ ಆಗಲಿದೆ. ದೇವದುರ್ಗದಲ್ಲಿ ಜೆಡಿಎಸ್ ಶಾಸಕರಿದ್ದರೆ, ಸಿಂಧನೂರು, ಮಾನ್ವಿ, ಲಿಂಗಸೂಗೂರಿನಲ್ಲಿ ಜೆಡಿಎಸ್ ಬಲಿಷ್ಠವಾಗಿದೆ.
14 ಬಾರಿ ಗೆದ್ದು ಬೀಗಿದ್ದ ಕಾಂಗ್ರೆಸ್:
1952ರಿಂದ ಈ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ 14 ಬಾರಿ ಕಾಂಗ್ರೆಸ್ ಗೆಲುವು ಸಾಧಿಸಿದರೆ, 2 ಬಾರಿ ಬಿಜೆಪಿ ಹಾಗೂ ಒಮ್ಮೆ ಪಕ್ಷೇತರ, ಒಮ್ಮೆ ಜನತಾದಳಕ್ಕೆ ಗೆಲುವು ದಕ್ಕಿದೆ. 1952ರಲ್ಲಿ ಹೈದರಾಬಾದ್ ರಾಜ್ಯವಾಗಿದ್ದ ಸಂದರ್ಭದಲ್ಲಿ ಯಾದಗಿರಿ ಲೋಕಸಭಾ ಕ್ಷೇತ್ರವಿತ್ತು. ಮೊದಲ ಚುನಾವಣೆಯಲ್ಲಿ ಕೃಷ್ಣಾಚಾರಿ ಜೋಷಿ ಕಾಂಗ್ರೆಸ್‌ನಿಂದ ಗೆದ್ದಿದ್ದರು. ಮೈಸೂರು ರಾಜ್ಯಕ್ಕೆ ಒಳಪಟ್ಟ ಬಳಿಕ ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರ ಒಳಗೊಂಡು ಈ ಕ್ಷೇತ್ರ ರಚನೆಯಾಯಿತು. ಕಾಂಗ್ರೆಸ್‌ನಿಂದ 1957ರಲ್ಲಿ ಜಿ.ಎಸ್.ಮೇಲುಕೋಟೆ ಗೆಲುವು ಸಾಧಿಸಿದ್ದಾರೆ.
1962ರಲ್ಲಿ ಜಗನ್ನಾಥ ರಾವ್ ವೆಂಕಟರಾವ್ ಚಂಡ್ರಿಕಿ (ಕಾಂಗ್ರೆಸ್), 1967ರಲ್ಲಿ ಆರ್.ವಿ.ನಾಯಕ (ಪಕ್ಷೇತರ), 1971ರಲ್ಲಿ ಪಂಪನಗೌಡ ಸಕ್ರೆಪ್ಪಗೌಡ ಅತ್ತನೂರು (ಕಾಂಗ್ರೆಸ್) ಆಯ್ಕೆಯಾಗಿದ್ದರು. 1977ರಲ್ಲಿ ರಾಜಶೇಖರ ಮಲ್ಲಪ್ಪ (ಕಾಂಗ್ರೆಸ್), 1980ರಲ್ಲಿ ಬಿ.ವಿ.ದೇಸಾಯಿ (ಕಾಂಗ್ರೆಸ್), 1984ರಲ್ಲಿ ಬಿ.ವಿ.ದೇಸಾಯಿ (ಕಾಂಗ್ರೆಸ್), 1986ರಲ್ಲಿ ಬಿ.ವಿ.ದೇಸಾಯಿ ನಿಧನ ಹೊಂದಿದ ಹಿನ್ನೆಲೆಯಲ್ಲಿ ನಡೆದ ಉಪ ಚುನಾವಣೆಯಲ್ಲಿ ಎಂ.ವೈ ಘೋರ್ಪಡೆ (ಕಾಂಗ್ರೆಸ್) ಆಯ್ಕೆಯಾದರು.
1989ರಲ್ಲಿ ರಾಜಾ ಅಂಬಣ್ಣ ನಾಯಕ ದೊರೆ (ಕಾಂಗ್ರೆಸ್), 1991ರಲ್ಲಿ ಎ.ವೆಂಕಟೇಶ ನಾಯಕ (ಕಾಂಗ್ರೆಸ್), 1996ರಲ್ಲಿ ರಾಜಾರಂಗಪ್ಪ ನಾಯಕ (ಜನತಾದಳ) ಗೆದ್ದಿದ್ದರು. ಸರಕಾರ ಪತನದ ಹಿನ್ನೆಲೆಯಲ್ಲಿ 1998ರಲ್ಲಿ ನಡೆದ ಮರುಚುನಾವಣೆ ಮಾತ್ರವಲ್ಲದೆ 1999, 2004ರಲ್ಲಿಯೂ ಎ.ವೆಂಕಟೇಶ ನಾಯಕ (ಕಾಂಗ್ರೆಸ್) ಗೆದ್ದರು. 2009ರಲ್ಲಿ ಸಣ್ಣ ಫಕೀರಪ್ಪ(ಬಿಜೆಪಿ), 2014ರಲ್ಲಿ ಬಿ.ವಿ.ನಾಯಕ (ಕಾಂಗ್ರೆಸ್), 2019ರಲ್ಲಿ ರಾಜಾ ಅಮರೇಶ್ವರ ನಾಯಕ (ಬಿಜೆಪಿ) ಗೆಲುವು ಸಾಧಿಸಿದ್ದಾರೆ.
-ಸಿದ್ಧಯ್ಯಸ್ವಾಮಿ ಕುಕನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.