ರಾಯಚೂರು: ಮಹಾಶಿವರಾತ್ರಿ ಸಂಭ್ರಮ-ಜಾಗರಣೆ
ಪ್ರಮುಖ ದೇವಸ್ಥಾನಗಳ ಮುಂದೆ ಜನದಟ್ಟಣೆ ಹೆಚ್ಚಾಗದಂತೆ ಪೊಲೀಸರು ಬಂದೋಬಸ್ತ್ ಕಲ್ಪಿಸಿದ್ದರು.
Team Udayavani, Mar 12, 2021, 6:22 PM IST
ರಾಯಚೂರು: ನಗರ ಸೇರಿದಂತೆ ಜಿಲ್ಲಾದ್ಯಂತ ಮಹಾಶಿವರಾತ್ರಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಜಾಗರಣೆ ನಿಮಿತ್ತ ವಿವಿಧ ದೇವಸ್ಥಾನಗಳ ವಿಶೇಷ ಪೂಜೆ ನಡೆದರೆ, ಸಂಘ-ಸಂಸ್ಥೆಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು. ನಗರದ ಚಂದ್ರಮೌಳೇಶ್ವರ, ನಂದೀಶ್ವರ ದೇವಸ್ಥಾನ, ಏಗನೂರು ಟೆಂಪಲ್, ನೀಲಕಂಠೇಶ್ವರ ದೇವಸ್ಥಾನ, ನಗರೇಶ್ವರ ದೇವಸ್ಥಾನ, ರಾಮಲಿಂಗೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳ ಪುರಾಣ ಪ್ರವಚನ, ಸಂಗೀತ ಕಾರ್ಯಕ್ರಮ, ಭಜನೆಯಂಥ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿವಿಧೆಡೆ ಶಿವಪುರಾಣ ಪ್ರವಚನ ಆಯೋಜಿಸಿದ್ದರೆ ಜನ ಜಾ ಗರಣೆ ನಿಮಿತ್ತ
ಇಡೀ ದಿನ ಶಿವಧ್ಯಾನ, ಶಿವಪೂಜೆಯಲ್ಲಿ ತೊಡಗಿದ್ದು ಕಂಡು ಬಂತು.
ಶಿವನ ದೇವಸ್ಥಾನಗಳಲ್ಲಿ ಗುರುವಾರ ಬೆಳಗಿನ ಜಾವದಿಂದಲೇ ಪೂಜಾ, ವಿಧಿ- ವಿಧಾನ ಕೈಂಕರ್ಯಗಳನ್ನು ಜರುಗಿದವು. ಶಿವನನ್ನು ಒಲಿಸಲು ಕೆಲವು ಪ್ರಮುಖ ದೇವಸ್ಥಾನಗಳಲ್ಲಿ ರುದ್ರಾಭಿಷೇಕ ನೆರವೇರಿಸಲಾಯಿತು. ದೇವರಿಗೆ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು. ಭಕ್ತರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ನಗರದ ಹೃದಯ ಭಾಗದಲ್ಲಿರುವ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ಭಕ್ತರು ಸಾಲುಗಟ್ಟಿದ್ದು ಕಂಡು ಬಂತು. ಭಕ್ತರ ದರ್ಶನಕ್ಕಾಗಿ ವಿಶೇಷವಾಗಿ ಬೊಂಬುಗಳನ್ನು ಕಟ್ಟಲಾಗಿತ್ತು.
ಐಬಿ ರಸ್ತೆಯ ರಾಮಲಿಂಗೇಶ್ವರ ದೇವಸ್ಥಾನ, ನೇತಾಜಿ ನಗರದ ನಗರೇಶ್ವರ ದೇವಸ್ಥಾನ, ಮಾವಿನಕೆರೆ ಪಕ್ಕದ ನಂದೀಶ್ವರ ದೇವಸ್ಥಾನ, ಎನ್‌ಜಿಒ ಕಾಲೋನಿಯ ನೀಲಕಂಠೇಶ್ವರ ದೇವಸ್ಥಾನ, ಬೊಳಮಾನದೊಡ್ಡಿಯ ಏಗನೂರು ದೇವಸ್ಥಾನ, ನಿಜಲಿಂಗಪ್ಪ ಕಾಲೋನಿಯ ಈಶ್ವರ ದೇವಸ್ಥಾನ ಹಾಗೂ ಮಾಣಿಕಪ್ರಭು ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಇನ್ನೂ ತಾಲೂಕಿನ ದೇವಸೂಗೂರಿನ ಸೂಗೂರೇಶ್ವರ ದೇವಸ್ಥಾನ, ಮನ್ಸಲಾಪುರದ ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲೂ ವಿಶೇಷ ಪೂಜೆ ಜರುಗಿಸಲಾಯಿತು.
ಪ್ರಮುಖ ದೇವಸ್ಥಾನಗಳ ಮುಂದೆ ಜನದಟ್ಟಣೆ ಹೆಚ್ಚಾಗದಂತೆ ಪೊಲೀಸರು ಬಂದೋಬಸ್ತ್ ಕಲ್ಪಿಸಿದ್ದರು. ಕೆಲ ದೇವಸ್ಥಾನಗಳಲ್ಲಿ ಪ್ರಸಾದದ ವ್ಯವಸ್ಥೆ ಮಾಡಿದ್ದರೆ, ಕೆಲವೆಡೆ ಊಟದ ವ್ಯವಸ್ಥೆ ಮಾಡಲಾಗಿತ್ತು.
ಜ್ಯೋತಿರ್ಲಿಂಗಗಳ ಮೆರವಣಿಗೆ:
ಮಹಾಶಿವರಾತ್ರಿ ಪ್ರಯುಕ್ತ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ನಗರದ ಬಸವೇಶ್ವರ ವೃತ್ತದ ಪಕ್ಕದಲ್ಲಿರುವ ವಾಲ್ಕಟ್ ಮೈದಾನದಲ್ಲಿ
ವಿಶೇಷ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಂಜೆ 6 ಅಡಿ ಎತ್ತರದ ವಿಶೇಷ ಶಿವಲಿಂಗ ಮತ್ತು ದ್ವಾದಶ ಜ್ಯೋತಿರ್ಲಿಂಗಗಳ ಶಾಂತಿಯಾತ್ರೆ ಜರುಗಿತು.
ರಂಗಮಂದಿರ ಬಳಿ ಸಂಸ್ಥೆಯ ಸ್ಮಿತಾ ಸಹೋದರಿ ಚಾಲನೆ ನೀಡಿದರು. ಅಲ್ಲಿಂದ ಅಂಬೇಡ್ಕರ್ ವೃತ್ತ, ತೀನ್ ಕಂದಿಲ್, ನೇತಾಜಿ ವೃತ್ತ, ಪಟೇಲ್ ವೃತ್ತ, ಬಸವೇಶ್ವರ ವೃತ್ತದ ಮೂಲಕ ವಾಲ್ಕಟ್ ಮೈದಾನಕ್ಕೆ ಯಾತ್ರೆ ತಲುಪಿತು. ಸಂಜೆ 6ಕ್ಕೆ ವಾಲ್ಕಟ್ ಮೈದಾನದಲ್ಲಿ ಅವರು ಸಂಗೀತ ಕಾರ್ಯಕ್ರಮ ಜರುಗಿತು. ವಿವಿಧ ಮುಖಂಡರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.