ಮಾಸ್ಕ್ -ಹ್ಯಾಂಡ್ ಸ್ಯಾನಿಟೈಜರ್ ಪೂರೈಕೆಗೆ ಸೂಚನೆ
Team Udayavani, Mar 25, 2020, 4:28 PM IST
ರಾಯಚೂರು: ಕೊರೊನಾ ವೈರಸ್ ಹರಡದಂತೆ ಕ್ರಮ ಕೈಗೊಳ್ಳಲು ಮಾಸ್ಕ್ಗಳು ಹಾಗೂ ಹ್ಯಾಂಡ್ ಸ್ಯಾನಿಟೈಜೆಷನ್‌ನ ಅಭಾವ ಉಂಟಾಗಿದ್ದು, ಅವುಗಳ ಕೊರತೆ ನೀಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿಯವರ ಗೃಹ ಕಚೇರಿಯಲ್ಲಿ ಜಿಲ್ಲೆಯ ಮೆಡಿಕಲ್ ಸ್ಟೋರ್‌ಗಳ ಸಂಘದ ಸದಸ್ಯರೊಂದಿಗೆ ಸಭೆ ನಡೆಸಿದರು. ಪರಿಸ್ಥಿತಿಯ ಲಾಭ ಪಡೆದು ಹೆಚ್ಚಿನ ಬೆಲೆಗೆ ಮಾರಿದಲ್ಲಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಮಾಸ್ಕ್ ಹಾಗೂ ಹ್ಯಾಂಡ್ ಸ್ಯಾನಿಟೈಜೆಷನ್ ಪೂರೈಕೆಯಲ್ಲಿ ಕೊರತೆ ಆಗಬಾರದು. ಆದೇಶ ನೀಡಿದ ಕೂಡಲೇ ನಿಗದಿ ಪಡಿಸಿದ ಬೆಲೆಗೆ ಅವುಗಳನ್ನು ಪೂರೈಸಲು ಸಿದ್ಧರಿರಬೇಕು. 200ಎಂಎಲ್ ಹ್ಯಾಂಡ್ ಸ್ಯಾನಿಟೈಜೆಷನ್‌ಗೆ 100 ರೂ. ದರ ನಿಗದಿಯಾಗಿದೆ. ಅದೇ ದರಕ್ಕೆ ಮಾರಾಟ ಮಾಡಬೇಕು, ಸನ್ನಿವೇಶದ ಲಾಭ ಪಡೆದು ಹೆಚ್ಚಿನ ಬೆಲೆಗೆ ಮಾಡುವುದಾಗಲಿ ಅಥವ ಕೃತಕ ಅಭಾವ ಸೃಷ್ಟಿಸುವುದಾಗಲಿ ಕಂಡುಬಂದಲ್ಲಿ ಕಾನೂನು ಮಾಪನ ಶಾಸ್ತ್ರ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಅಧಿಕಾರಿಗಳು ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳುವರು ಎಂದರು.
ಹ್ಯಾಂಡ್ ಸ್ಯಾನಿಟೈಜೆಷನ್‌ನ ಹಳೆ ದಾಸ್ತಾನುಗಳನ್ನು ಕೂಡ ಗರಿಷ್ಠ ರಿಟೇಲ್ ದರದಲ್ಲೇ ಮಾರಬೇಕು. ಮಾಸ್ಕ್ ಹಾಗೂ ಹ್ಯಾಂಡ್ ಸ್ಯಾನಿಟೈಜೆಷನ್ ಹೈದರಾಬಾದ್, ಪಾಂಡಿಚೇರಿ ಸೇರಿದಂತೆ ಇತರ ರಾಜ್ಯಗಳಿಂದ ಪೂರೈಕೆಯಾಗುವುದರಿಂದ ಪ್ರಸ್ತುತವಾಗಿ ಸಾರಿಗೆ ಸಮಸ್ಯೆ ಉದ್ಭವಿಸಿದೆ. ಟ್ರಕ್‌ಗಳಿಗೆ ಸುಲಭವಾಗಿ ಸಂಚಾರ ಮಾಡಿಕೊಡಲು ಅನುವು ಮಾಡಿಕೊಟ್ಟರೆ ಜಿಲ್ಲೆಯ ಜನತೆಗೆ ಅಗತ್ಯವಾಗಿರುವ ಮಾಸ್ಕ್ ಹಾಗೂ ಹ್ಯಾಂಡ್ ಸ್ಯಾನಿಟೈಜೆಷನ್‌ಗಳನ್ನು ಪೂರೈಸಲು ಸಿದ್ಧವಿದೆ ಎಂದು ಸಂಘದ ಸದಸ್ಯರು ಡಿಸಿ ಗಮನಕ್ಕೆ ತಂದರು.
ಅಗತ್ಯ ವಸ್ತುಗಳ ಪೂರೈಕೆಗೆ ಜಿಲ್ಲಾಡಳಿತದಿಂದ ಅನುಮತಿ ನೀಡಲಾಗುವುದು. ವಾಹನ ಹಾಗೂ ವಾಹನ ಸಂಖ್ಯೆಯನ್ನು ನಮೂದಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಿ, ಹೊರ ರಾಜ್ಯದಿಂದ ಅವುಗಳನ್ನು ಪೂರೈಸಲು ಅವಕಾಶ ಮಾಡಲಾಗುವುದು. ಯಾವುದೇ ಕಾರಣಕ್ಕೂ ನಕಲಿ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಬಾರದು ಎಂದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಅರುಣ ಕುಮಾರ್, ತೂಕ ಮತ್ತು ಅಳತೆ ಇಲಾಖೆ ಇನ್ಸ್‌ಪೆಕ್ಟರ್ ಮಹಾಂತಯ್ಯ, ಡ್ರಗ್ ಕಂಟ್ರೋಲರ್ ವೆಂಕಟೇಶ್, ಮೆಡಿಕಲ್ ಅಸೋಸಿಯೇಶನ್ ಕಾರ್ಯದರ್ಶಿ ವೆಂಕಟೇಶ ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.