ಕೊರೊನಾ ಭಯ ಬೇಡ: ಮುಂಜಾಗ್ರತೆ ವಹಿಸಿ
ಮದುವೆ-ಜಾತ್ರೆ-ಸಭೆ-ಸಮಾರಂಭಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ನಿರ್ಧಾರ
Team Udayavani, Mar 14, 2020, 1:55 PM IST
ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದ್ದು, ಈವರೆಗೂ ಯಾವುದೇ ಪ್ರಕರಣ ದೃಢಪಟ್ಟಿಲ್ಲ. ಜನರು ಅನಗತ್ಯ ಆತಂಕಕ್ಕೆ ಒಳಗಾಗದೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಕೊರೊನಾ ವೈರಸ್ ಕುರಿತು ಶುಕ್ರವಾರ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.
ಇದು ಸಾಂಕ್ರಾಮಿಕವಲ್ಲದೇ ಮಾರಣಾಂತಿಕ ಕಾಯಿಲೆಯಾಗಿದೆ. ಹೀಗಾಗಿ ಜನ ದಟ್ಟಣೆ ಸ್ಥಳಗಳಲ್ಲಿ ಮದುವೆ, ಜಾತ್ರೆ ಸೇರಿದಂತೆ ಇನ್ನಿತರ ಸಭೆ ಸಮಾರಂಭಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲು ವೈದ್ಯರ ತಂಡ ನಿಯೋಜಿಸಬೇಕು. ಕೊರೊನಾ ಲಕ್ಷಣಗಳು ಕಂಡು ಬಂದವರನ್ನು ಕೂಡಲೇ ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿದರು.
ಫೆ.15ರ ಬಳಿಕ ವಿದೇಶಗಳಿಗೆ ಹೋಗಿ ಬಂದವರು ತಪ್ಪದೇ ಪರೀಕ್ಷೆ ಮಾಡಿಸಿಕೊಳ್ಳಬೇಕು. ಅವರ ಕುಟುಂಬಸ್ಥರಿಂದ ಅಂತರ ಕಾಯ್ದುಕೊಳ್ಳಬೇಕು. ಸೋಂಕಿನ ಲಕ್ಷಣಗಳು 2ರಿಂದ 14 ದಿನಗಳೊಳಗೆ ಕಂಡು ಬರುವ ಕಾರಣ ತಾವಾಗಿಯೇ ವೈದ್ಯರನ್ನು ಸಂಪರ್ಕಿಸಿ ಪರೀಕ್ಷಿಸಿಕೊಳ್ಳಬೇಕು. ಅದಕ್ಕಾಗಿ ಪ್ರತ್ಯೇಕ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ವೈದ್ಯರ ತಂಡ ನಿಯೋಜಿಸಬೇಕು. ಶಾಲೆ ಮಕ್ಕಳ ಬೇಸಿಗೆ ಶಿಬಿರ ರದ್ದುಪಡಿಸಬೇಕು. ಜಿಲ್ಲೆಯಲ್ಲಿ ಕಾಯಿಲೆ ಪತ್ತೆಯಾದಲ್ಲಿ ಶಾಲೆ, ಚಿತ್ರಮಂದಿರದಗಳನ್ನು ಬಂದ್ ಮಾಡಲಾಗುವುದು. ಎಲ್ಲ ತಹಶೀಲ್ದಾರ್ ಮತ್ತು ಸಹಾಯಕ ಆಯುಕ್ತರ ನೇತೃತ್ವದಲ್ಲಿ ಟಾಸ್ಕ್ಫೋರ್ಸ್ ಸಮಿತಿ ಸಭೆ ಕರೆಯಬೇಕು ಎಂದು ಸೂಚಿಸಿದರು.
ಜಿಲ್ಲೆಯ ಸರ್ವೆಲೆನ್ಸ್ ಅಧಿಕಾರಿ ಡಾ| ಅನೀಲಕುಮಾರ ತಾಳಿಕೋಟೆ ಮಾತನಾಡಿ, ಈಗಾಗಲೇ ವಿಶ್ವಸಂಸ್ಥೆ ತುರ್ತು ಪರಿಸ್ಥಿತಿ ಎಂದು ಘೋಷಿಸಿದೆ. ವಿಶ್ವದಲ್ಲಿ 1,18,326 ಸೋಂಕಿತರ ಪೈಕಿ 4,292 ಸೋಂಕಿತರು ಮೃತಪಟ್ಟಿದ್ದಾರೆ. ಭಾತರದಲ್ಲಿ 74 ಸೋಂಕಿತರ ಪೈಕಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಿದರು.
ವಿದೇಶಗಳಿಂದ ಬಂದ ವ್ಯಕ್ತಿಗಳನ್ನು ವಿಮಾನ ನಿಲ್ದಾಣಗಳಲ್ಲಿ ಪರೀಕ್ಷೆಗೆ ಒಳಪಡಿಸಬೇಕು. ಲಕ್ಷಣಗಳು ಕಂಡು ಬಂದರೆ ಅಂತವರನ್ನು ಆಸ್ಪತ್ರೆ ಪ್ರತ್ಯೇಕ ಕೊಠಡಿಯಲ್ಲಿ ಇರಿಸಿ ನಿಗಾವಹಿಸಲಾಗತ್ತದೆ. ರಿಮ್ಸ್ ಹಾಗೂ ನವೋದಯ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ಮಾಡಲಾಗಿದೆ ಎಂದು ಹೇಳಿದರು.
ಆಸ್ಪತ್ರೆ ಸಿಬ್ಬಂದಿ ಹಾಗೂ ಸೋಂಕಿತರ ಸಂಪರ್ಕದಲ್ಲಿರುವವರು ಮಾಸ್ಕ್ ಧರಿಸಬೇಕು. ಜಿಲ್ಲೆಯ ಗಡಿ ಭಾಗಗಳಲ್ಲಿ ಪರೀಕ್ಷೆ ಮಾಡಲು ಚೆಕ್‌ಪೋಸ್ಟ್ ಪ್ರಾರಂಭಿಸಿ ಸಿಬ್ಬಂದಿ ನೇಮಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಕರಪತ್ರ ನೀಡಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಸೂಚಿಸಲಾಗಿದೆ ಎಂದು ಹೇಳಿದರು.
ಜಿಪಂ ಸಿಇಒ ಲಕ್ಷ್ಮೀಕಾಂತ ರೆಡ್ಡಿ, ಎಸ್‌ಪಿ ಡಾ| ಸಿ.ಬಿ. ವೇದಮೂರ್ತಿ, ಎಸಿ ಸಂತೋಷ ಕಾಮಗೌಡ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ| ರಾಮಕೃಷ್ಣ ಎಚ್. ಸೇರಿ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.