ಸಂಡೇ ಸಂಪೂರ್ಣ ಲಾಕ್‌

ಮನೆಯಿಂದ ಹೊರ ಬಾರದ ಸಾರ್ವಜನಿಕರು ಹೊರಗೆ ಬಂದವರಿಗೆ ಪೊಲೀಸರ ಲಾಠಿ ರುಚಿ

Team Udayavani, Jul 6, 2020, 12:11 PM IST

06-July-06

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ರಾಯಚೂರು: ಕೋವಿಡ್‌-19 ವೈರಸ್‌ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಪದೇಪದೆ ಮಾಡುತ್ತಿರುವ ಲಾಕ್‌ಡೌನ್‌ಗೆ ಸಾರ್ವಜನಿಕರು ಹೊಂದಿಕೊಂಡಿದ್ದು, ರವಿವಾರ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತಗೊಳಿಸುವ ಮೂಲಕ ಬೆಂಬಲ ಸೂಚಿಸಿದರು.

ಇದರಿಂದ ನಗರ ಸೇರಿದಂತೆ ಜಿಲ್ಲಾದ್ಯಂತ ಸ್ಥಬ್ಧ ವಾತಾವರಣ ಏರ್ಪಟ್ಟಿದ್ದು, ರಸ್ತೆಗಳೆಲ್ಲ ಜನರಿಲ್ಲದೇ ಬಿಕೊ ಎನ್ನುತ್ತಿದ್ದವು. ಹಳ್ಳಿಗಳು ಮಾತ್ರ ಎಂದಿನಂತೆ ತಮ್ಮ ದೈನಂದಿನ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದು ಕಂಡು ಬಂತು. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಜಿಲ್ಲಾಡಳಿತ ರವಿವಾರ ನಗರ ಸೇರಿದಂತೆ ಜಿಲ್ಲಾದ್ಯಂತ ಕಟ್ಟುನಿಟ್ಟಾಗಿ ಲಾಕ್‌ಡೌನ್‌ ಜಾರಿಗೊಳಿಸಿತ್ತು. ಬೆಳಗ್ಗೆಯಿಂದಲೇ ಪೊಲೀಸರು ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ ಅಳವಡಿಸುವ ಮೂಲಕ ಸಂಚಾರ ಸ್ಥಗಿತಗೊಳಿಸಿದರು. ಗೊತ್ತಿಧ್ದೋ ಗೊತ್ತಿಲ್ಲದೆಯೋ ಹೊರಗೆ ಬಂದ ಜನರಿಗೆ ಪೊಲೀಸರು ಲಾಠಿ ರುಚಿ ತೋರಿಸುವ ಮೂಲಕ ಮನೆಗೆ ಕಳುಹಿಸಿದರು.

ವ್ಯಾಪಾರ ವಹಿವಾಟು ಕೂಡ ಸಂಪೂರ್ಣ ಸ್ಥಗಿತಗೊಂಡಿತ್ತು. ವೈದ್ಯಕೀಯ ಸೇವೆ, ಹಾಲು, ತರಕಾರಿಯಂಥ ಅಗತ್ಯ ಸೇವೆಗಳು ಹೊರತಾಗಿಸಿ ಮತ್ಯಾವ ಅಂಗಡಿ ಮುಂಗಟ್ಟುಗಳನ್ನು ತೆರದಿರಲಿಲ್ಲ. ಇದರಿಂದ ನಗರದ ಬಹುತೇಕ ಬಜಾರ್‌ಗಳು ಜನರಿಲ್ಲದೇ ಬಿಕೋ ಎನ್ನುತ್ತಿದ್ದವು. ಮಾರುಕಟ್ಟೆ ಪ್ರದೇಶದಲ್ಲಿ ಕಿರಾಣಿ ಬಜಾರ್‌, ಬಟ್ಟೆ ಬಜಾರ್‌, ಸರಾಫ್‌ ಬಜಾರ್‌ ಸೇರಿದಂತೆ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆದಿರಲಿಲ್ಲ.

ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನಗಳನ್ನು ತಡೆಯುತ್ತಿದ್ದ ಪೊಲೀಸರು ವಿಚಾರಣೆ ಮಾಡಿ ಕಳುಹಿಸುತ್ತಿದ್ದರು. ಸೂಕ್ತ ಕಾರಣ ನೀಡದ ವಾಹನಗಳನ್ನು ಹಿಂದಕ್ಕೆ ಕಳುಹಿಸಲಾಯಿತು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರಾಯಚೂರು ನಗರದ ಬಸ್‌ ನಿಲ್ದಾಣದಲ್ಲಿ ಯಾವುದೇ ಬಸ್‌ ಗಳ ಸಂಚಾರ ಇರಲಿಲ್ಲ. ಆದರೆ, ಈ ಬಗ್ಗೆ ಮಾಹಿತಿ ಇಲ್ಲದೇ ವಿವಿಧೆಡೆಯಿಂದ ಆಗಮಿಸಿದ ಪ್ರಯಾಣಿಕರು ಸಾರಿಗೆ ಸೌಲಭ್ಯ ಸಿಗದೆ ಪರದಾಡಿದ ಪ್ರಸಂಗ ನಡೆಯಿತು.

ಖಾಸಗಿ ವಾಹನಗಳ ಓಡಾಟ ಕೂಡ ನಿಷೇಧಿ ಸಿದ್ದರಿಂದ ಸಮಸ್ಯೆ ಎದುರಿಸುವಂತಾಯಿತು. ಈ ಕುರಿತು ಪೊಲೀಸ್‌ ಇಲಾಖೆ ಆಟೋಗಳಲ್ಲಿ ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸಿತ್ತು. ಮಾನ್ವಿಯಲ್ಲಿ ಲಾಕ್‌ಡೌನ್‌ ನಡುವೆಯೂ ಅನಗತ್ಯವಾಗಿ ಓಡಾಡಿದ ಕಾರಣಕ್ಕೆ ಪೊಲೀಸರು 50 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.