![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 17, 2021, 12:19 PM IST
ರಾಯಚೂರು: ಮಸ್ಕಿ ಕ್ಷೇತ್ರದ ಕುರುಕುಂದಾ ಗ್ರಾಮದಲ್ಲಿ ಪೊಲೀಸರು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ ಪ್ರಸಂಗ ನಡೆಯಿತು.
ಮತಗಟ್ಟೆಯ ನೂರು ಮೀಟರ್ ಒಳಗೆ ಇರಬಾರದು ಎಂಬ ನೀತಿ ಕೇವಲ ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ಅನುಸರಿಲಾಗುತ್ತಿದೆ. ಬಿಜೆಪಿಯವರು ನಿಂತಿದ್ದರು ಕ್ಯಾರೆ ಎನ್ನದ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ಕಾಲರ್ ಹಿಡಿದು ಆಚೆ ಕಳುಹಿಸುತ್ತಿದ್ದಾರೆ. ಪೊಲೀಸರ ಬಿಜೆಪಿಯವರ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಪಕ್ಷದ ಕಾರ್ಯಕರ್ತೆ ಪದ್ಮಾವತಿ ದೂರಿದರು.
ಇದನ್ನೂ ಓದಿ : ಕುಮಾರಸ್ವಾಮಿ ಕೋವಿಡ್ ನಿಂದ ಶೀಘ್ರ ಗುಣಮುಖವಾಗಲಿ : ಸಿಎಂ ಬಿಎಸ್ ವೈ ಹಾರೈಕೆ
ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಇದರಿಂದ ಬಿಗುವಿನ ವಾತಾವರಣ ಏರ್ಪಟ್ಟಿತು. ಬಳಿಕ ಪೊಲೀಸರು ಎಲ್ಲರನ್ನು ಹೊರಗೆ ಕಳುಹಿಸಿದ ಪ್ರಸಂಗ ನಡೆಯಿತು.
You seem to have an Ad Blocker on.
To continue reading, please turn it off or whitelist Udayavani.