ವಲಸೆ ಕಾರ್ಮಿಕರನ್ನು ತವರು ರಾಜ್ಯಕ್ಕೆ ಕಳುಹಿಸಲು ಕ್ರಮ
Team Udayavani, May 16, 2020, 11:50 AM IST
ರಾಯಚೂರು: ಲಾಕ್‌ಡೌನ್‌ನಿಂದ ಜಿಲ್ಲೆಯಲ್ಲಿ ಸಿಲುಕಿಕೊಂಡ ಹೊರ ರಾಜ್ಯಗಳ ಕಾರ್ಮಿಕರನ್ನು ಸುರಕ್ಷಿತವಾಗಿ ತಮ್ಮ ರಾಜ್ಯಗಳಿಗೆ ಕಳುಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಡಿಸಿ ಆರ್. ವೆಂಕಟೇಶ ಕುಮಾರ್ ಸೂಚಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ಮಾತನಾಡಿ, ನಾನಾ ಕಾರಣಕ್ಕೆ ಆಗಮಿಸಿ ಜಿಲ್ಲೆಯಲ್ಲೇ ಸಿಲುಕಿದವರನ್ನು ಅವರ ರಾಜ್ಯಗಳಿಗೆ ಕಳುಹಿಸಲು ಜಿಲ್ಲೆಯಲ್ಲಿ ವ್ಯವಸ್ಥಾಪನಾ ಸಮಿತಿ ರಚಿಸಲಾಗಿದೆ. ಎಡಿಸಿ ಸಮಿತಿ ಅಧ್ಯಕ್ಷರಾಗಿದ್ದು, ವಿವಿಧ ಇಲಾಖೆ ಅಧಿಕಾರಿಗಳು ಸದಸ್ಯರಾಗಿರುತ್ತಾರೆ ಎಂದರು.
ಈ ತಿಂಗಳ 20 ರಿಂದ 22ರೊಳಗೆ ಮೊದಲಿಗೆ ಉತ್ತರ ಪ್ರದೇಶದ ಕಾರ್ಮಿಕರನ್ನು ಕಳುಹಿಸಲಾಗುವುದು. ಬಳಿಕ ಮಧ್ಯಪ್ರದೇಶ, ಬಿಹಾರ ಹಾಗೂ ಜಾರ್ಖಂಡ್ ಜನರನ್ನು ಕಳುಹಿಸಲಾಗುವುದು. ವಲಸಿಗರನ್ನು ಈಗಾಗಲೇ ಗುರುತಿಸಿ ಪಟ್ಟಿ ಮಾಡಲಾಗಿದೆ. ಉತ್ತರ ಪ್ರದೇಶದ 457, ಬಿಹಾರದ 272, ಜಾರ್ಖಂಡ್‌ನ 168 ಹಾಗೂ ಮಧ್ಯ ಪ್ರದೇಶದ 131 ಕಾರ್ಮಿಕರು ಜಿಲ್ಲೆಯಲಿದ್ದಾರೆ ಎಂದು ವಿವರಿಸಿದರು.
ಅವರನ್ನು ಕಲಬುರಗಿ, ಬಳ್ಳಾರಿ ಹಾಗೂ ಹುಬ್ಬಳ್ಳಿಯ ರೈಲು ನಿಲ್ದಾಣಗಳಿಂದ ಕಳುಹಿಸಲಾಗುವುದು. ಬಸ್‌ಗಳ ಮೂಲಕ ಈ ರೈಲು ನಿಲ್ದಾಣಗಳಿಗೆ ಕಳುಹಿಸಬೇಕು. ಬಸ್ ಹಾಗೂ ರೈಲು ಪ್ರಯಾಣದ ಟಿಕೆಟ್ ದರಗಳನ್ನು ಸಂಬಂಧಿಸಿದವರೇ ಪಾವತಿಸಬೇಕು. ಈ ಬಗ್ಗೆ ಆಯಾ ರಾಜ್ಯಗಳಿಗೆ ಮೊದಲ ಸುತ್ತಿನಲ್ಲಿ ದೂರವಾಣಿ ಮೂಲಕ ಮಾಹಿತಿ ನೀಡಲಾಗಿದೆ. ಅವರನ್ನು ಕಳುಹಿಸುವ ದಿನಾಂಕ ಹಾಗೂ ವಿವರವನ್ನು ಎಸ್ ಎಂಎಸ್ ಮೂಲಕ ಸಂಬಂಧಿ ಸಿದವರಿಗೆ ತಿಳಿಸುವುದಾಗಿ ತಿಳಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.