ಕೋವಿಡ್ ಪಾಸಿಟಿವ್ ಏರುಗತಿ-ಹೆಚ್ಚಿದ ಭೀತಿ
ಮತ್ತೆ 25 ಮಂದಿಯಲ್ಲಿ ಸೋಂಕು ಪತ್ತೆ ಸ್ವ ಪ್ರೇರಣೆಯಿಂದ ಅಂಗಡಿ ಮುಂಗಟ್ಟು ಬಂದ್
Team Udayavani, Jul 8, 2020, 11:41 AM IST

ರಾಯಚೂರು: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದ್ದು, ಮಂಗಳವಾರ ಮತ್ತೆ 23 ಹೊಸ ಪ್ರಕರಣಗಳು ಪತ್ತೆಯಾಗಿವೆ. ಸೋಮವಾರ ಇಬ್ಬರು ಮೃತಪಟ್ಟಿದ್ದು, ಪಾಸಿಟಿವ್ ಇರುವುದು ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 598ಕ್ಕೆ ಏರಿದ್ದು, 438 ಜನ ಗುಣಮುಖರಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಮಂಗಳವಾರ ಕೂಡ 16 ಜನ ಗುಣಮುಖರಾಗಿದ್ದಾರೆ. ಇನ್ನೂ 154 ಸಕ್ರಿಯ ಪ್ರಕರಣಗಳಿವೆ. ದೇವದುರ್ಗ ತಾಲೂಕಿನಿಂದ 100, ಲಿಂಗಸುಗೂರು ತಾಲೂಕಿನಿಂದ 86, ಮಾನ್ವಿ ತಾಲೂಕಿನಿಂದ 114, ಸಿಂಧನೂರು ತಾಲೂಕಿನಿಂದ 104 ಮತ್ತು ರಾಯಚೂರು ತಾಲೂಕಿನಿಂದ 89 ಸೇರಿದಂತೆ ಒಟ್ಟು 493 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್-19 ಶಂಕೆ ಹಿನ್ನೆಲೆಯಲ್ಲಿ ಪರೀಕ್ಷೆಗೆ ಕಳುಹಿಸಲಾಗಿದೆ.
ಈ ಹಿಂದೆ ಕಳುಹಿಸಲಾದ ವರದಿಗಳಲ್ಲಿ 312 ನೆಗೆಟಿವ್ ಬಂದಿವೆ. ಒಟ್ಟಾರೆ ಜಿಲ್ಲೆಯಿಂದ ಈವರೆಗೆ 25,991 ಮಾದರಿಗಳನ್ನು ಕಳುಹಿಸಿದ್ದು, 23,346 ವರದಿಗಳು ನೆಗೆಟಿವ್ ಆಗಿವೆ. ಉಳಿದ 2,041 ಸ್ಯಾಂಪಲ್‌ಗಳ ಫಲಿತಾಂಶ ಬರಬೇಕಿದೆ. ಫೀವರ್ ಕ್ಲಿನಿಕ್‌ಗಳಲ್ಲಿ ಮಂಗಳವಾರ 806 ಜನರನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಒಟ್ಟು 135 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ಇರಿಸಿ ನಿಗಾವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ

Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.