ರಾಯಚೂರು: ಮತ್ತೆ ಆರು ಜನರಿಗೆ ಪಾಸಿಟಿವ್
Team Udayavani, Jun 29, 2020, 11:42 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ರಾಯಚೂರು: ಜಿಲ್ಲೆಯಲ್ಲಿ ರವಿವಾರ ಮತ್ತೆ 6 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲೆಯಿಂದ 254 ಶಂಕಿತರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ದೇವದುರ್ಗ 81, ಲಿಂಗಸುಗೂರು 30, ಮಾನ್ವಿ 28, ಸಿಂಧನೂರು 26 ಮತ್ತು ರಾಯಚೂರು ತಾಲೂಕಿನಿಂದ 89 ಮಾದರಿಗಳನ್ನು ಕಳುಹಿಸಲಾಗಿದೆ. ಹಿಂದೆ ಕಳುಹಿಸಿದ ವರದಿಗಳಲ್ಲಿ 665 ನೆಗೆಟಿವ್ ಆಗಿವೆ. ಈವರೆಗೆ 22,385 ಜನರ ಗಂಟಲು ದ್ರವ ಮಾದರಿ ಪರೀಕ್ಷೆಗಾಗಿ ಕಳುಹಿಸಿದ್ದು, 20,763 ವರದಿಗಳು ನೆಗೆಟಿವ್ ಬಂದಿವೆ. ಉಳಿದ 1,147 ಮಾದರಿಗಳ ಫಲಿತಾಂಶ ಬರಬೇಕಿದೆ. ಫೀವರ್ ಕ್ಲಿನಿಕ್‌ಗಳಲ್ಲಿ ರವಿವಾರ 311 ಜನರನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಈವರೆಗೆ 469 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 400 ಜನಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ವಿವಿಧ ಸಾಂಸ್ಥಿಕ ಕ್ವಾರಂಟೈನ್ ಗಳಲ್ಲಿ 175 ಜನರನ್ನು ಇರಿಸಿ ನಿಗಾವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
23 ಪ್ರಕರಣ ದಾಖಲು: ಕೋವಿಡ್-19 ನಿಯಮಗಳನ್ನು ಉಲ್ಲಂಘಿಸಿದ ವಿವಿಧ ಅಂಗಡಿಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ. ಈವರೆಗೆ ಜಿಲ್ಲೆಯಲ್ಲಿ 28 ಪ್ರಕರಣ ದಾಖಲಿಸಿರುವುದಾಗಿ ಎಸ್ಪಿ ತಿಳಿಸಿದ್ದಾರೆ. ಸದರ್ ಬಜಾರ್ ಠಾಣೆ ವ್ಯಾಪ್ತಿಯ ಪಟೇಲ ರಸ್ತೆಯಲ್ಲಿರುವ ಚಾಕೊಲೆಟ್ ಮತ್ತು ಬಿಸ್ಕಿಟ್ ಅಂಗಡಿ, ಉಸ್ಮಾನಿಯಾ ಮಸೀದಿ ಪಕ್ಕದ ಕಿರಾಣಿ ಸ್ಟೋರ್, ನೇತಾಜಿ ಠಾಣೆ ವ್ಯಾಪ್ತಿಯ ಪಟೇಲ ವೃತ್ತದ ಬಳಿಯ ರಾಘವೇಂದ್ರ ಜರಲ್ ಸ್ಟೋರ್, ಮಸ್ಕಿ ಪಟ್ಟಣದ ಮಯೂರ ಹೋಟೆಲ್, ಮಾನ್ವಿ ಬಸ್ ನಿಲ್ದಾಣ ಎದುರಿನ ಹೋಟೆಲ್, ತುರ್ವಿಹಾಳ ಪಟ್ಟಣದ ಸುಂಕಲಮ್ಮ ಗುಡಿ ಹತ್ತಿರದ ಹಾಲಿನ ಅಂಗಡಿ, ಹಟ್ಟಿ ಪಟ್ಟಣದ ಫರ್ನಿಚರ್ ಅಂಗಡಿ, ಬಳಗಾನೂರ ಪಟ್ಟಣದ ಎಗ್ ರೈಸ್ ಅಂಗಡಿ ಸೇರಿ ಜಿಲ್ಲಾದ್ಯಂತ 23 ಪ್ರಕರಣ ದಾಖಲಾಗಿವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.