ವರದಿ ಬರುವವರಿಗೆ ಶಂಕಿತರ ಬಿಡುಗಡೆ ಬೇಡ
Team Udayavani, May 31, 2020, 2:46 PM IST
ಸಾಂದರ್ಭಿಕ ಚಿತ್ರ
ರಾಯಚೂರು: ಸರ್ಕಾರಿ ಕ್ವಾರಂಟೈನ್‌ನಲ್ಲಿ ಉಳಿಸಲಾಗದ ಕೋವಿಡ್ ಶಂಕಿತರನ್ನು ವರದಿ ಬರುವವರೆಗೆ ಬಿಡುಗಡೆ ಮಾಡಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಒತ್ತಾಯಿಸಿದೆ.
ಈ ಕುರಿತು ಡಿಸಿಗೆ ಮನವಿ ಸಲ್ಲಿಸಿದ ಸಂಘಟನೆ ಸದಸ್ಯರು, ಈಚೆಗೆ ನಗರದಲ್ಲಿ ಪಿ.2324 ವ್ಯಕ್ತಿಯನ್ನು 14 ದಿನ ಕ್ವಾರಂಟೈನ್ ಅವಧಿ ಮುಗಿದಿದೆ ಎಂದು ಬಿಡುಗಡೆ ಮಾಡಲಾಗಿದೆ. ಆದರೆ, ಆತ ಮನೆಗೆ ಬಂದ ಮೇಲೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಆ ವ್ಯಕ್ತಿ ವಿವಿಧೆಡೆ ಓಡಾಡಿರುವುದು ಆತಂಕಕ್ಕೆ ಕಾರಣವಾಗಿದೆ. ವರದಿ ಬರುವ ಮುನ್ನವೇ ಬಿಡುಗಡೆ ಮಾಡಿರುವುದು ಅಕ್ಷಮ್ಯ. ಕೂಡಲೇ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಇನ್ನೂ ಇಂಥ ತಪ್ಪು ಮರುಕಳಿಸದಂತೆ ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಶಂಕಿತರ ಕ್ವಾರಂಟೈನ್ ಅವಧಿ ಮುಗಿದರೂ ವರದಿ ಬರುವವರೆಗೆ ಬಿಡುಗಡೆ ಮಾಡಬಾರದು. ಹಾಗೆ ಮಾಡಿದಲ್ಲಿ ಅಂಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದರು. ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಸಿ.ಕೆ. ಜೈನ್, ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ, ತಾಲೂಕು ಉಪಾಧ್ಯಕ್ಷ ಸುಂಕಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!
Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್ ಗಂಭೀರ್ ಭಾರತಕ್ಕೆ
BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
Fraud Case: ಎಪಿಕೆ ಫೈಲ್ ಕಳುಹಿಸಿ 1.31 ಲ.ರೂ. ವಂಚನೆ
Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.