ಮಲೇರಿಯಾ ರೋಗ ನಿಯಂತ್ರಣಕ್ಕೆ ಜಾಗೃತಿ ಮೂಡಿಸಲು ವೈದ್ಯರ ಸಲಹೆ
Team Udayavani, Jun 20, 2020, 6:22 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ರಾಯಚೂರು: ಮಲೇರಿಯಾ ರೋಗ ನಿಯಂತ್ರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಅದನ್ನು ನಿರ್ಮೂಲನ ಮಾಡುವಂತೆ ತಾಲೂಕು ಆರೋಗ್ಯ ಅಧಿಕಾರಿ ಡಾ| ಮಹ್ಮದ್ ಶಾಕೀರ್ ಮೊಯಿದ್ಧೀನ್ ಕರೆ ನೀಡಿದರು.
ನಗರದ ತಾಲೂಕು ಆರೋಗ್ಯ ಅಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಮಲೇರಿಯಾ ಮಾಸಾಚರಣೆ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಅನಾಫೆಲಿಸ್ ಎಂಬ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಮಲೇರಿಯಾ ರೋಗ ಹರಡುತ್ತದೆ. 2025 ರೊಳಗಾಗಿ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಪಣತೊಟ್ಟಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕಾರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಮಲೇರಿಯಾ ತಾಂತ್ರಿಕ ಮೇಲ್ವಿಚಾರಕಿ ಸಂಧ್ಯಾ ಮಾತನಾಡಿ, ಮೊದಲಿಗೆ ಜ್ವರ, ಮೈ ಕೈನೋವು, ವಾಂತಿ, ವಿಪರೀತವಾದ ತಲೆನೋವು, ಬಿಟ್ಟು ಬಿಟ್ಟು ಜ್ವರ ಬರುವುದು ಇವು ಮುಖ್ಯವಾಗಿ ಮಲೇರಿಯಾ ರೋಗದ ಲಕ್ಷಣಗಳಾಗಿವೆ. ಸಾರ್ವಜನಿಕರು ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮನೆ ಸುತ್ತ ಮುತ್ತ ಸ್ವಚ್ಛವಾಗಿಟ್ಟುಕೊಳ್ಳಬೇಕು ಮತ್ತು ನಿಂತ ನೀರನ್ನು ಸರಾಗವಾಗಿ ಹರಡುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾ ತಾಲೂಕು ಮೇಲ್ವಿಚಾರಕ ರಂಗರಾವ್ ಕುಲಕರ್ಣಿ, ಆಶಾ ಮೇಲ್ವಿಚಾರಕಿ ಮರಿಯಾಳಮ್ಮ, ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಪುರುಷ ಮತ್ತು ಮಹಿಳಾ ಆರೋಗ್ಯ ಸಹಾಯಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.