ವಲಸೆ ಕಾರ್ಮಿಕರ ಸುರಕ್ಷತೆಗೆ ಒತ್ತು ಕೊಡಿ
Team Udayavani, May 29, 2020, 6:20 PM IST
ಸಾಂದರ್ಭಿಕ ಚಿತ್ರ
ರಾಯಚೂರು: ಈ ರಾಜ್ಯದಿಂದ ಬೇರೆ ಕಡೆ ಹೋಗುವವರು, ಬೇರೆ ರಾಜ್ಯಗಳಿಂದ ಇಲ್ಲಿಗೆ ಬರುವ ವಲಸೆ ಕಾರ್ಮಿಕರಿಗೆ ಸುರಕ್ಷಿತ ಪ್ರಮಾಣದ ವ್ಯವಸ್ಥೆ ಮಾಡುವಂತೆ ಅಖೀಲ ಭಾರತ ಸಾಂಸ್ಕೃತಿಕ ಸಂಘಟನೆ ಸದಸ್ಯರು ಒತ್ತಾಯಿಸಿದರು.
ಈ ಕುರಿತು ಗುರುವಾರ ಡಿಸಿ ಮೂಲಕ ಸಿಎಂಗೆ ಮನವಿ ಸಲ್ಲಿಸಿ, ಕೆಲವಿಲ್ಲದೇ ದೇಶದ ನಾನಾ ರಾಜ್ಯಗಳಿಗೆ, ಅಲ್ಲಿಂದ ಇಲ್ಲಿಗೆ ಲಕ್ಷಾಂತರ ಕಾರ್ಮಿಕರು ವಲಸೆ ಹೋಗಿದ್ದಾರೆ. ಆದರೆ, ಕೋವಿಡ್ ಲಾಕ್‌ಡೌನ್‌ನಿಂದ ಅಲ್ಲಿಂದ ಬರುವವರಿಗೆ ಸಾಕಷ್ಟು ತೊಂದರೆ ಆಗುತ್ತಿದೆ. ಎಷ್ಟೋ ಜನ ನೂರಾರು ಕಿಮೀ ನಡೆದೇ ಬರುತ್ತಿದ್ದಾರೆ. ಮಕ್ಕಳು ಸರಕು ಸರಂಜಾಮು ಸಮೇತ ನಡೆದು ನಡೆದು ಬಸವಳಿಯುತ್ತಿದ್ದಾರೆ. ಅಂಥ ಕಾರ್ಮಿಕರಿಗೆ ಯೋಗ್ಯವಾದ ಆಹಾರ, ವಸತಿ ವೈದಕೀಯ ಚಿಕಿತ್ಸೆಯನ್ನು ವ್ಯವಸ್ಥೆಯೊಂದಿಗೆ ಸುರಕ್ಷಿತ ರೀತಿಯಲ್ಲಿ ಊರುಗಳಿಗೆ ತಲುಪಲು ಆಯಾ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಆಶಾ ಕಾರ್ಯಕರ್ತೆಯರು, ಐಸಿಡಿಎಸ್, ಬಿಸಿಯೂಟದವರಿಗೆ ಹಾಗೂ ಇನ್ನಿತರ ಅಸಂಘಟಿತ ಕಾರ್ಮಿಕರಿಗೆ ಆರ್ಥಿಕ ಸಹಾಯ ನೀಡಬೇಕು. ಕೆಲಸದ ಸಮಯವನ್ನು 8ರಿಂದ 10 ಗಂಟೆಯವರೆಗೆ ವಿಸ್ತರಿಸಿರುವ ನಿರ್ಧಾರ ಕೈ ಬಿಡಬೇಕು, ಬಡ ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ಸೂಕ್ತ ಹಣ ಸಹಾಯ ಮಾಡಬೇಕು. ಕೌಟುಂಬಿಕ ದೌರ್ಜನ್ಯ ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಬೇಕು, ಮದ್ಯಮಾರಾಟ ಸಂಪೂರ್ಣ ನಿಷೇಧಿಸುವಂತೆ ಒತ್ತಾಯಿಸಿದರು. ಸಂಘಟನೆ ಜಿಲ್ಲಾ ಸಂಚಾಲಕಿ ಉಮಾ ಮಹೇಶ್ವರಿ, ಸದಸ್ಯರಾದ ಗಾಯತ್ರಿ, ಸಂಗೀತಾ, ಮೀನಾಕ್ಷಿ ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.