
ಮಾರ್ಚ್‌ಅಂತ್ಯಕ್ಕೆಕಾಮಗಾರಿ ಮುಗಿಸಿ
ಗುಣಮಟ್ಟದಿಂದ ನಿರ್ವಹಿಸಿ ಸಂಬಂಧಿಸಿದ ಇಲಾಖೆ ಸುಪರ್ದಿಗೆ ವಹಿಸಿ
Team Udayavani, Feb 20, 2020, 5:13 PM IST

ರಾಯಚೂರು: ಆರ್ಥಿಕ ವರ್ಷಾಂತ್ಯ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದಡಿ ಕೈಗೊಂಡಿರುವ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಮುಗಿಸುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2019-20ನೇ ಸಾಲಿನ ಮಂಡಳಿ ಅನುದಾನದಡಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದಿಂದ ನಿರ್ವಹಿಸಬೇಕು. ಶೀಘ್ರದಲ್ಲೇ ಮುಗಿಸಿ ಸಂಬಂಧಿಸಿದ ಇಲಾಖೆ ಸುಪರ್ದಿಗೆ ವಹಿಸಬೇಕು. ಶಾಲಾ ಕಟ್ಟಡ, ಅಂಗನವಾಡಿ ಕಟ್ಟಡಗಳು ಸೇರಿದಂತೆ ವಿವಿಧ ಕಟ್ಟಡಗಳ ದುರಸ್ತಿ ಹಾಗೂ ಇನ್ನಿತರ ಇತರೆ ಬಾಕಿಯಿರುವ ಎಲ್ಲ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಮುಗಿಸುವಂತೆ ಸೂಚಿಸಿದರು.
ಲೋಕೋಪಯೋಗಿ ಇಲಾಖೆಯಡಿ ಕೈಗೊಂಡ ಕಾಮಗಾರಿಗಳು ಹಾಗೂ ಬಾಕಿಯಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಮುಗಿಸಬೇಕು. ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ದೇವದುರ್ಗ ತಾಲೂಕು ಅರಿಕೇರಾದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಕಾಮಗಾರಿ ಅಪೂರ್ಣಗೊಂಡಿದ್ದು, ಕೂಡಲೇ ಮುಗಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕಾರ್ಯನಿರ್ವಾಹಕ ಇಂಜಿನಿಯರ್ ಹನುಮಂತಪ್ಪ ಅವರಿಗೆ ಸೂಚಿಸಿದರು.
ಕೆಕೆಆರ್‌ಡಿಬಿ ಪ್ರಗತಿ ಪರಿಶೀಲನಾ ಸಭೆಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಂಪೂರ್ಣ ಮಾಹಿತಿಯೊಂದಿಗೆ ಆಗಮಿಸಬೇಕು. ಇಲಾಖೆ ಪ್ರಗತಿ ಪರಿಶೀಲಿಸುವ ವೇಳೆ ಬೇಕಾಬಿಟ್ಟಿ ಮಾಹಿತಿ ನೀಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಅಧಿಕಾರಿಗಳು ಕಾರ್ಯವೈಖರಿ ಬದಲಿಸಿಸಿಕೊಂಡು ಶ್ರದ್ಧೆಯಿಂದ ಕೆಲಸ ಮಾಡಬೇಕು. ಕಾಮಗಾರಿ ಮುಗಿಸಿದ ಬಳಿಕ ಬಿಲ್‌ನ್ನು ಕೆಕೆಆರ್‌ಡಿಬಿ ವೆಬ್‌ಸೈಟ್ ನಲ್ಲಿ ಕಡ್ಡಾಯವಾಗಿ ನಮೂದಿಸಬೇಕು. ಲೋಕೋಪಯೋಗಿ ಇಲಾಖೆಗೆ ಕೋಟ್ಯಂತರ ರೂ. ಅನುದಾನ ಬಿಡುಗಡೆಯಾಗಲಿದೆ. ಆದರೆ, ಅನುದಾನವನ್ನು ಸಮರ್ಪಕವಾಗಿ ಖರ್ಚು ಮಾಡಬೇಕು. ಯಾವುದೇ ಕಾರಣಕ್ಕೂ ಅದು ಹಿಂದುರುಗಿ ಹೋಗದಂತೆ ಎಚ್ಚರಿಕೆ ವಹಿಸಿ ಎಂದು ಹೇಳಿದರು.
ಪಿಆರ್‌ಡಿಎಲ್, ಕೆಆರ್‌ಡಿಎಲ್ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದರು. ಜಿಪಂ ಸಿಇಒ ಲಕ್ಷ್ಮೀಕಾಂತ ರೆಡ್ಡಿ, ಎಡಿಸಿ ದುರಗೇಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ

Puttur: ಬಸ್ – ಬೈಕ್ ಅಪಘಾತ; ಸವಾರ ಸಾವು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.