ವಚನಗಳ ಸಂದೇಶ ಸಾರ್ವಕಾಲಿಕ
ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ-ಸಾಧಕರಿಗೆ ಸನ್ಮಾನ ಭೋವಿ ಸಮಾಜ ಶಿಕ್ಷಣಕ್ಕೆ ಆದ್ಯತೆ ನೀಡಲಿ
Team Udayavani, Jan 26, 2020, 6:55 PM IST
ರಾಯಚೂರು: 12ನೇ ಶತಮಾನದ ಬಸವಣ್ಣನವರ ಅನುಭವ ಮಂಟಪದಲ್ಲಿ ಸಾಮಾಜಿಕ ಸಮಾನತೆಯ ತತ್ವ ಸಂದೇಶಗಳನ್ನು ಸಾರಿದ ಶ್ರೇಷ್ಠ ವಚನಕಾರರಲ್ಲಿ ಶಿವಯೋಗಿ ಸಿದ್ಧರಾಮೇಶ್ವರರು ಕೂಡ ಪ್ರಮುಖರು ಎಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹೇಳಿದರು.
ಜಿಲ್ಲಾಡಳಿತ, ಜಿಪಂ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶನಿವಾರ ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರರ 848ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮಾಜ ಸುಧಾರಣೆಗಾಗಿ ಬದುಕನ್ನೇ ಸವೆಸಿದ ಅವರ ಹಾದಿಯಲ್ಲಿ ಸಾಗುವುದನ್ನು ರೂಢಿಸಿಕೊಳ್ಳಬೇಕು. ಸಿದ್ಧರಾಮೇಶ್ವರರು ವಚನಗಳ ಮೂಲಕ ಸಾಕಷ್ಟು ಕ್ರಾಂತಿ ಮೂಡಿಸಿದರು. ಸಮಾಜವನ್ನು ಸರಿ ದಾರಿಗೆ ತರಲು ಯತ್ನಿಸಿದರು. ಸಮಸ್ಯೆಗಳಿಗೆ ಹೆದರದೇ ಮುನ್ನುಗ್ಗಿ ಜನರ ಮನಸ್ಸಿನಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದ್ದರು. ಅವರ ವಚನಗಳು ಇಂದಿಗೂ ಪ್ರಸ್ತುತ ಎಂದರು.
ಯಾವುದಾದರೂ ಸಮಾಜ ಇಂದಿಗೂ ಹಿಂದುಳಿದಿದೆ ಎಂದರೆ ಅದಕ್ಕೆ ಪ್ರಮುಖ ಕಾರಣ ಶಿಕ್ಷಣ. ಭೋವಿ ಸಮಾಜದವರು ಈ ವಿಚಾರದಲ್ಲಿ ವಿಶೇಷ ಕಾಳಜಿ ವಹಿಸಬೇಕು. ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿದಲ್ಲಿ ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದಾಗ ಸಮಾಜ ತನ್ನಿಂತಾನೆ ಬಲಿಷ್ಠವಾಗುತ್ತದೆ. ಪ್ರತಿ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಜಾಗೃತರಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ನಗರ ಶಾಸಕ ಡಾ| ಎಸ್.ಶಿವರಾಜ ಪಾಟೀಲ ಮಾತನಾಡಿ, ಶ್ರಮಕ್ಕೆ ಮತ್ತೂಂದು ಹೆಸರೇ ಭೋವಿ ಸಮಾಜ. ಸಮಾಜ ಅಭಿವೃದ್ಧಿಗೆ ಶಿಕ್ಷಣ ಮುಖ್ಯವಾದ ಆಯುಧ ಎಂಬುದನ್ನು ಎಲ್ಲರೂ ಮನಗಾನಬೇಕು. ಹೀಗಾಗಿ ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಉನ್ನತ ಶಿಕ್ಷಣ ಪಡೆಯಬೇಕು ಎಂದರು.
ಭೋವಿ ಸಮುದಾಯದ ವಿವಿಧ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಕರಾದ ಆಂಜನೇಯ ತುರಕಣದೋಣಿ ವಿಶೇಷ ಉಪನ್ಯಾಸ ನೀಡಿದರು. ಎಡಿಸಿ ದುರುಗೇಶ, ಭೋವಿ ಸಮಾಜದ ಜಿಲ್ಲಾಧ್ಯಕ್ಷ ಲಕ್ಷ್ಮಣ, ಸಮಾಜದ ತಾಲೂಕು ಘಟಕದ ಅಧ್ಯಕ್ಷ ಆಂಜನೇಯ, ನಗರಸಭೆ ಸದಸ್ಯ ವಿ.ನಾಗರಾಜ, ರಮೇಶ, ಮಹೇಂದ್ರರೆಡ್ಡಿ, ಎಂ.ನಾಗರಾಜ, ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ ಭೀಮರಾಯ ಸೇರಿದಂತೆ ಅನೇಕರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಗಳಾ ಬಿ. ನಾಯಕ ಸ್ವಾಗತಿಸಿದರು.
ಅದ್ಧೂರಿ ಮೆರವಣಿಗೆ: ಸಮಾರಂಭಕ್ಕೂ ಮುನ್ನ ಶ್ರೀ ಶಿವಯೋಗಿ ಸಿದ್ದರಾಮೇಶ್ವರರ ಭಾವಚಿತ್ರದ ಮೆರವಣೆಗೆ ನಡೆಸಲಾಯಿತು. ನಗರದ ಆಶಾಪುರ ರಸ್ತೆಯಲ್ಲಿರುವ ಶ್ರೀ ಸಿದ್ದರಾಮೇಶ್ವರ ವೃತ್ತದಲ್ಲಿ ಪುತ್ಥಳಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಎಂಎಲ್‌ಸಿ ಎನ್.ಎಸ್.ಬೋಸರಾಜ್ ಮೆರವಣಿಗೆಗೆ ಚಾಲನೆ ನೀಡಿದರು. ಸ್ಟೇಶನ್ ವೃತ್ತದ ಮಾರ್ಗವಾಗಿ ರಂಗಮಂದಿರವರೆಗೆ ಮೆರವಣಿಗೆ ನಡೆಯಿತು. ಕಿಲ್ಲೆ ಬೃಹನ್ಮಠದ ಶ್ರೀಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಜನಪ್ರತಿನಿ ಧಿಗಳು, ಸಮಾಜದ ಗಣ್ಯರು, ಜನರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.