ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿ
Team Udayavani, Jun 19, 2020, 3:29 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ರಾಯಚೂರು: ಕೋವಿಡ್ ನಿಯಂತ್ರಣಕ್ಕಾಗಿ ಪ್ರತಿಯೊಬ್ಬರು ಮಾಸ್ಕ್ ಧರಿಸುವುದರೊಂದಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಕರೆ ನೀಡಿದರು.
ನಗರದ ಬಸವೇಶ್ವರ ವೃತ್ತದಲ್ಲಿ ಜಿಲ್ಲಾಡಳಿತ, ಜಿಪಂ, ನಗರಸಭೆ ಹಾಗೂ ಪೊಲೀಸ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಾಸ್ಕ್ ದಿನಾಚರಣೆ ಅಂಗವಾಗಿ ಗುರುವಾರ ಆಯೋಜಿಸಲಾಗಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಇಂದಿನ ದಿನವನ್ನು ಮಾಸ್ಕ್ ದಿನವನ್ನಾಗಿ ಆಚರಿಸಲು ಆದೇಶಿಸಿದೆ. ಪ್ರತಿಯೊಬ್ಬರು ಸ್ವಯಂ ಪ್ರೇರಿತವಾಗಿ ಮಾಸ್ಕ್ ಧರಿಸಿಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಸಿ.ಬಿ. ವೇದಮೂರ್ತಿ, ಜಿಪಂ ಸಿಇಒ ಲಕ್ಷ್ಮೀಕಾಂತರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ, ನಗರಸಭೆ ಪೌರಾಯುಕ್ತ ಡಾ| ದೇವಾನಂದ ದೊಡ್ಡಮನಿ, ತಹಶೀಲ್ದಾರ್ ಡಾ| ಹಂಪಣ್ಣ ಸಜ್ಜನ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.