
ಹೈದರಾಬಾದ್‌ಗೆ ತೆರಳುವ ಪ್ರಯಾಣಿಕರ ಸಂಖ್ಯೆ ಇಳಿಮುಖ
ಆಂಧ್ರ-ಕರ್ನಾಟಕ-ತೆಲಂಗಾಣ ಸಾರಿಗೆ ನಿಗಮಕ್ಕೆ ನಷ್ಟ ಬಸ್ ನಿಲ್ದಾಣದಲ್ಲಿ ಮಾಸ್ಕ್ ಧರಿಸಿದ ಸಿಬ್ಬಂದಿ
Team Udayavani, Mar 5, 2020, 5:55 PM IST

ರಾಯಚೂರು: ಹೈದರಾಬಾದ್‌ನಲ್ಲಿ ಕೊರೊನಾ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹೈದರಾಬಾದ್ ಸೇರಿದಂತೆ ತೆಲಂಗಾಣ, ಆಂಧ್ರಕ್ಕೆ ತೆರಳುವ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.
ಪ್ರಯಾಣಿಕರ ಸಂಖ್ಯೆ ಕುಗ್ಗಿದ ಹಿನ್ನೆಲೆಯಲ್ಲಿ ಸಾರಿಗೆ ನಿಗಮದ ಅಧಿಕಾರಿಗಳು ಬಸ್ ಗಳ ಓಡಾಡಕ್ಕೆ ಬ್ರೇಕ್ ಹಾಕಿದ್ದಾರೆ. ಅದರ ಜತೆಗೆ ಚಾಲಕ, ನಿರ್ವಾಹಕರು ಮಾಸ್ಕ್ ಹಾಕಿಕೊಂಡೇ ಕಾರ್ಯ ನಿರ್ವಹಿಸುತ್ತಿದ್ದರೆ, ಅಲ್ಲಿಂದ ಬರುವ ಸಿಬ್ಬಂದಿ ಜತೆ ಒಟನಾಟ ಮಾಡಬೇಕಾದ ಸ್ಥಳೀಯ ಸಿಬ್ಬಂದಿಯೂ ಮಾಸ್ಕ್ ಬಳಸುತ್ತಿದ್ದಾರೆ.
ವ್ಯಾಪಾರ ವಹಿವಾಟು ಮಾಡಲು ಈ ಭಾಗದ ಜನ ಹೆಚ್ಚಾಗಿ ಹೈದರಾಬಾದ್, ಮೆಹಬೂಬ್ ನಗರ, ಕರ್ನೂಲ್‌ಗೆ ತೆರಳುತ್ತಾರೆ. ಆದರೆ, ಮಂಗಳವಾರ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಪರಿಶೀಲಿಸಿ ಬಿಡುತ್ತಿದ್ದಂತೆ ಪ್ರಯಾಣಿಕರು ಓಡಾಟವನ್ನೇ ಸ್ಥಗಿತಗೊಳಿಸಿದ್ದಾರೆ. ಹೋಗಲೇಬೇಕಾದ ಅನಿವಾರ್ಯ ಸ್ಥಿತಿ ಇದ್ದಲ್ಲಿ ಪ್ರಯಾಣಿಕರಿಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮಾಸ್ಕ್ಗಳನ್ನು ನೀಡುತ್ತಿದ್ದಾರೆ.
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ರಾಜ್ಯದ ಇತರ ನಿಗಮದ ಬಸ್ ಗಳು ಸೇರಿದಂತೆ ಪ್ರತಿನಿತ್ಯ 45 ಬಸ್ ಗಳು ಸಂಚರಿಸುತ್ತವೆ. ತೆಲಂಗಾಣ, ಆಂಧ್ರಪ್ರದೇಶದ ಸಾರಿಗೆ ಸಂಸ್ಥೆಗಳಿಂದಲೂ 45 ಬಸ್‌ಗಳು ನಿತ್ಯ ಓಡಾಡುತ್ತವೆ. ಆದರೆ,
ಬುಧವಾರ ಅರ್ಧದಷ್ಟು ಬಸ್‌ಗಳು ಮಾತ್ರ ಓಡಾಡಿದವು. ಜಿಲ್ಲೆಯಲ್ಲಿ ಐದು ಕಡೆ ಚೆಕ್ ಪೋಸ್ಟ್ ಸ್ಥಾಪಿಸಿದ್ದು, ತಪಾಸಣೆ ಮಾಡಿ ಬಿಡಲಾಗುತ್ತಿದೆ. ಆರೋಗ್ಯ ಇಲಾಖೆ ಕೂಡ ಅಗತ್ಯ ಕ್ರಮ ಕೈಗೊಂಡಿದ್ದು, ರಿಮ್ಸ್‌ನಲ್ಲಿ ತಪಾಸಣೆ ಕಾರ್ಯ ನಡೆಯುತ್ತಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!

UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.