ಸ್ವಾಮಿ ವಿವೇಕಾನಂದರು ಭಾರತದ ಹೆಮ್ಮೆ

ರಾಷ್ಟ್ರೀಯ ಯುವ ಸಪ್ತಾಹ-ಸ್ವಾಮಿ ವಿವೇಕಾನಂದ ಜಯಂತಿ

Team Udayavani, Jan 13, 2020, 2:46 PM IST

13-Jnauary-16

ರಾಯಚೂರು: ಭಾರತೀಯ ಕೃಷಿ ಪದ್ಧತಿ, ಭಾಷೆ, ಸಂಸ್ಕೃತಿ, ಪರಂಪರೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದರೂ ಅದನ್ನು ಸಂಪೂರ್ಣವಾಗಿ ಕಡೆಗಣಿಸಿದ್ದ ಕಾಲವಿತ್ತು. ಅಂತಹ ಕಾಲಘಟ್ಟದಲ್ಲಿ ಭಾರತದ ಹಿರಿಮೆಯನ್ನು ವಿಶ್ವದ ಮುಂದೆ ಹೆಮ್ಮೆಯಿಂದ ಸಾರಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದು ಜಿಲ್ಲಾ
ಧಿಕಾರಿ ಆರ್‌.ವೆಂಕಟೇಶಕುಮಾರ ಶ್ಲಾಘಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಯುವ ಸಪ್ತಾಹ, ಉಚಿತ ಲ್ಯಾಪ್‌ಟಾಪ್‌ ವಿತರಣೆ ಹಾಗೂ ಯುವ ಸಬಲೀಕರಣ ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಈಗ ಮುಂದುವರಿದ ದೇಶಗಳೆಂದು ಗುರುತಿಸಿಕೊಂಡ ಅಮೇರಿಕ, ಇಂಗ್ಲೆಂಡ್‌ ಸೇರಿದಂತೆ ಅನೇಕ ದೇಶಗಳ ಜನ ಕಾಡಿನಲ್ಲಿ ಪ್ರಾಣಿಗಳಂತೆ ಬಾಳುತ್ತಿದ್ದ ಕಾಲದಲ್ಲೇ ಭಾರತದಲ್ಲಿ ನಾಗರಿಕತೆ ಬೆಳೆದಿತ್ತು. ಇಷ್ಟೆಲ್ಲ ಇದ್ದರೂ ಬ್ರಿಟಿಷರ ಕಪಿಮುಷ್ಟಿಯಲ್ಲಿ ಬಂಧಿ ಯಾಗಿದ್ದ ನಮ್ಮ ದೇಶದ ಜನ ವಿಶ್ವದ ದೃಷ್ಟಿಗೆ ಕೇವಲ ಗುಲಾಮರಂತೆ ಕಂಡೆವು. ಇಂತಹ ಸಂದರ್ಭದಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ ಭಾಷಣ ಮಾಡುವ ಮೂಲಕ ವಿಶ್ವ ಮತ್ತೆ ನಮ್ಮತ್ತ ತಿರುಗಿ ನೋಡುವಂತೆ ಮಾಡಿದ್ದು, ಇದೇ ಸ್ವಾಮಿ ವಿವೇಕಾನಂದರು ಎಂದರು.

ನಮ್ಮ ಧರ್ಮ-ಸಂಸ್ಕೃತಿಗೆ ಪುನಶ್ಚೇತನ ನೀಡಿದವರು ಸ್ವಾಮಿ ವಿವೇಕಾನಂದರು. ಅವರ ಧೈರ್ಯ, ಸಾಹಸ, ಚಿಂತನೆಗಳು ಹಾಗೂ ವ್ಯಕ್ತಿತ್ವ ನಮಗೆಲ್ಲರಿಗೂ ಮಾದರಿ. ಇಂದಿನ ಮಾಹಿತಿ ಯುಗದಲ್ಲಿ ಗಣಕಯಂತ್ರ ಹಾಗೂ ಮೊಬೈಲ್‌ ಅನಿವಾರ್ಯ ವಸ್ತುಗಳು. ಇಂಟರ್‌ನೆಟ್‌ ಒಂದಿದ್ದರೆ ವಿಶ್ವವೇ ಕೈಯಲ್ಲಿದ್ದಂತೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಪದವಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್‌ ನೀಡುತ್ತಿದೆ. ಮನರಂಜನೆ ಅಥವಾ ಕಾಲಹರಣ ಸಂಗತಿಗಳಿಗೆ ಇದನ್ನು ಬಳಸದೇ, ಜ್ಞಾನ ಹಾಗೂ ಕೌಶಲ್ಯ ವೃದ್ಧಿಗಾಗಿ ಬಳಸಬೇಕು. ಮುಖ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಬಳಸುವಂತೆ ತಿಳಿ ಹೇಳಿದರು.

ಸ್ವಾಮಿ ವಿವೇಕಾನಂದ ಆರೋಗ್ಯ ಕೇಂದ್ರದ ಡಾ| ಆನಂದತೀರ್ಥ ಫಡ್ನಿಸ್‌ ವಿವೇಕಾನಂದರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಬಳಿಕ ರಾಷ್ಟ್ರೀಯ ಯುವ ದಿನದ ಅಂಗವಾಗಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಎಂಲ್‌ಎಸಿ ಎನ್‌.ಎಸ್‌.ಭೋಸರಾಜ್‌ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ದುರ್ಗೇಶ, ಪ್ರೊಬೇಶನರಿ ಐಎಎಸ್‌ ಅಧಿಕಾರಿ ಯುಕೇಶಕುಮಾರ, ಪ್ರಾಚಾರ್ಯ ಡಾ|
ದಸ್ತಗಿರ್‌ಸಾಬ್‌ ದಿನ್ನಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Ullal: ಗಾಂಜಾ ಮಾರಾಟ: ಜೋಡಿ ಬಂಧನ

Ullal: ಗಾಂಜಾ ಮಾರಾಟ: ಜೋಡಿ ಬಂಧನ

Mangaluru: ವಕೀಲರ ಮೇಲೆ ಹಲ್ಲೆ: ದೂರು

Mangaluru: ವಕೀಲರ ಮೇಲೆ ಹಲ್ಲೆ: ದೂರು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

10-

Maski ರುದ್ರಭೂಮಿಯಲ್ಲಿ ವಿದ್ಯುತ್ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರ ಒತ್ತಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Ullal: ಗಾಂಜಾ ಮಾರಾಟ: ಜೋಡಿ ಬಂಧನ

Ullal: ಗಾಂಜಾ ಮಾರಾಟ: ಜೋಡಿ ಬಂಧನ

Mangaluru: ವಕೀಲರ ಮೇಲೆ ಹಲ್ಲೆ: ದೂರು

Mangaluru: ವಕೀಲರ ಮೇಲೆ ಹಲ್ಲೆ: ದೂರು

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.