ರೈಲು ತಡೆಗೆ ಯತ್ನ-ಬಂಧನ-ಬಿಡುಗಡೆ
ತೈಲ ಬೆಲೆ ದಿನೇದಿನೆ ಏರುತ್ತಿದ್ದರೂ ಕೇಂದ್ರ ಸರ್ಕಾರ ಮೌನಕ್ಕೆ ಶರಣಾಗಿದೆ.
Team Udayavani, Feb 19, 2021, 6:00 PM IST
ರಾಯಚೂರು: ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ಕರೆ ಮೇರೆಗೆ ಗುರುವಾರ ದೇಶಾದ್ಯಂತ ಹಮ್ಮಿಕೊಂಡಿದ್ದ ರೈಲು ರೋಖೋ ಚಳವಳಿ ಭಾಗವಾಗಿ ನಗರದಲ್ಲೂ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ಕಾರ್ಯಕರ್ತರು ಗುರುವಾರ ಹೋರಾಟ ನಡೆಸಿದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಬೆಳಗ್ಗೆ 11.30ರ ಮುಂಬೈ-ಬೆಂಗಳೂರಿಗೆ ಹೊರಡುವ ಕುರ್ಲಾ ಎಕ್ಸ್‌ಪ್ರೆಸ್ ರೈಲು ತಡೆಗಟ್ಟಲು ಮುಂದಾದಾಗ ಪೊಲೀಸರು ಅಡ್ಡಗಟ್ಟಿದರು. ಈ ವೇಳೆ ವಾಗ್ವಾದ ನಡೆದು ನೂಕುನುಗ್ಗಲು ಏರ್ಪಟ್ಟಿತು. ಕೊನೆಗೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಬಿಡುಗಡೆಗೊಳಿಸಿದರು.
ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆ ಕೈ ಬಿಡಲಿ. ಕರಾಳ ಕೃಷಿ ಮಸೂದೆ ಹಿಂಪಡೆಯಲಿ. ರೈತರಿಗೆ ಬೇಡವಾದ ಕಾಯ್ದೆಗಳನ್ನು ಬಲವಂತವಾಗಿ ಹೇರುವ
ಹುನ್ನಾರ ನಡೆಯುತ್ತಿರುವುದು ಖಂಡನೀಯ. ತೈಲ ಬೆಲೆ ದಿನೇದಿನೆ ಏರುತ್ತಿದ್ದರೂ ಕೇಂದ್ರ ಸರ್ಕಾರ ಮೌನಕ್ಕೆ ಶರಣಾಗಿದೆ. ಕೂಡಲೇ ಇದಕ್ಕೆ ಕಡಿವಾಣ
ಹಾಕಲಿ ಎಂದು ತಾಕೀತು ಮಾಡಿದರು.
ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ಜಿಲ್ಲಾ ಸಂಚಾಲಕ ಕೆ.ಜಿ. ವೀರೇಶ್, ವಿವಿಧ ಸಂಘಟನೆಗಳ ಮುಖಂಡರಾದ ಶರಣಪ್ಪ ಮರಳಿ, ಈ.ರಂಗನಗೌಡ,
ರವಿರಾಜ, ರೂಪಾ ಶ್ರೀನಿವಾಸ ನಾಯಕ, ಡಿ.ಎಸ್. ಶರಣಬಸವ, ಮಾರೆಪ್ಪ ಹರವಿ, ಖಾಜಾ ಅಸ್ಲಂಪಾಷ, ರಾಮಬಾಬು, ನರಸಪ್ಪ ಶಕ್ತಿನಗರ, ಶ್ರೀನಿವಾಸ
ಕಲವಲದೊಡ್ಡಿ, ಎನ್.ಎಸ್.ವೀರೇಶ್, ಚನ್ನಬಸವ ಜಾನೇಕಲ್, ವೀರೇಶ ಕೊತ್ತದೊಡ್ಡಿ, ರಂಗಪ್ಪ ಯಾಪಲದಿನ್ನಿ, ಮಲ್ಲಿಕಾರ್ಜುನ ದಿನ್ನಿ, ಉಮಾದೇವಿ
ಸೇರಿದಂತೆ ಅನೇಕ ಮುಖಂಡರು, ರೈತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.