ಗಡಿನಾಡಲ್ಲಿ ರಾಜಮೌಳಿ ಆರ್‌ಆರ್‌ಆರ್‌ ಆರ್ಭಟ!

Team Udayavani, Mar 26, 2022, 1:28 PM IST

12RRR

ರಾಯಚೂರು: ಬಾಹುಬಲಿ ಖ್ಯಾತಿಯ ನಿರ್ದೇಶಕ ಎಸ್‌.ಎಸ್‌. ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಆರ್‌ಆರ್‌ಆರ್‌ ಸಿನಿಮಾ ಶುಕ್ರವಾರ ಬಿಡುಗಡೆಯಾಗಿದ್ದು, ಬಹುತಾರಾಗಣದ ಸಿನಿಮಾ ನೋಡಲು ಅಭಿಮಾನಿಗಳಿಂದ ನೂಕುನುಗ್ಗಲು ನಡೆದಿದೆ.

ಬೆಳ್ಳಬೆಳಗ್ಗೆಯೇ ಸಿನಿಮಾ ಪ್ರದರ್ಶನ ಆರಂಭಿಸಲಾಯಿತು. ನಗರದ ಪೂರ್ಣಿಮಾ ಚಿತ್ರಮಂದಿರದಲ್ಲಿ ಗೇಟ್‌ ಮುರಿದು ಪ್ರೇಕ್ಷಕರು ನುಗ್ಗಿದ ಪ್ರಸಂಗಗಳು ನಡೆದವು. ಬಾಗಿಲು, ಕಿಟಕಿಗಳನ್ನು ಮುರಿಯುವ ಮೂಲಕ ಪ್ರೇಕ್ಷಕರು ಅತಿರೇಕದ ವರ್ತನೆ ತೋರಿದ್ದಾರೆ. ಅಭಿಮಾನಿಗಳ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.

ಟಿಕೆಟ್‌ ಪಡೆದವರು ಬಿಟ್ಟು ಬೇರೆಯವರೇ ಸಿನಿಮಾ ನೋಡಿದ್ದು, ಹಣ ಕೊಟ್ಟವರಿಗೆ ಸಿನಿಮಾ ನೋಡಲಾಗಿಲ್ಲ ಎಂದು ಚಿತ್ರಮಂದಿರ ಮಾಲೀಕರು ತಿಳಿಸಿದ್ದಾರೆ.

ಮಿರಾಜ್‌ ಸಿನಿಮಾದಲ್ಲಿ ಹೆಚ್ಚು ಪ್ರದರ್ಶನಗಳನ್ನು ಆಯೋಜಿಸಿದ್ದು, ಮೂರು ನಾಲ್ಕು ಪರದೆಗಳಲ್ಲಿ ಸಿನಿಮಾವನ್ನು ನಿರಂತರವಾಗಿ ಓಡಿಸಲಾಗಿದೆ. ಬಹುತೇಕ ಎಲ್ಲ ಪ್ರದರ್ಶನಗಳು ಹೌಸ್‌ಫುಲ್‌ ಪ್ರದರ್ಶನ ಕಂಡಿವೆ. ಗಡಿ ಜಿಲ್ಲೆಯಾದ ಕಾರಣ ತೆಲುಗು ಪ್ರಭಾವ ಹೆಚ್ಚಾಗಿದ್ದು, ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೇ, ಲಾಕ್‌ಡೌನ್‌ನಿಂದ ದೊಡ್ಡ ಸಿನಿಮಾಗಳು ಈಗಷ್ಟೇ ಬಿಡುಗಡೆಯಾಗುತ್ತಿರುವುದು ಮತ್ತೊಂದು ಕಾರಣ.

ಖ್ಯಾತ ನಟರಾದ ಜ್ಯೂ.ಎನ್‌ಟಿಆರ್‌ ಹಾಗೂ ರಾಮ್‌ ಚರಣ್‌ ಹಾಗೂ ರಾಜಮೌಳಿ ನಿರ್ದೇಶನದ ಸಿನಿಮಾ ಎಂಬ ಕಾರಣಕ್ಕೂ ಭಾರೀ ಪ್ರತಿಕ್ರಿಯೆ ಬಂದಿದೆ. ಈ ಅವಕಾಶ ಬಳಸಿಕೊಂಡ ಚಿತ್ರಮಂದಿರದ ಮಾಲೀಕರು ಟಿಕೆಟ್‌ ದರವನ್ನು ಹೆಚ್ಚಿಸಿದ್ದರು. 150 ರೂ. ಇದ್ದ ಟಿಕೆಟ್‌ ದರ 300 ರೂ. ಹೆಚ್ಚಿಸಲಾಗಿತ್ತು. ಟಿಕೆಟ್‌ ಸಿಗದ ಅಭಿಮಾನಿಗಳು ಬೇರೆಯವರ ಟಿಕೆಟ್‌ಗಳನ್ನು ಕಲರ್‌ ಝೆರಾಕ್ಸ್‌ ಮಾಡಿಸಿ ಸಿನಿಮಾ ನೋಡಲು ಯತ್ನಿಸಿದ ಪ್ರಸಂಗಗಳು ನಡೆದಿವೆ.

ಕನ್ನಡ ಡಬ್ಬಿಂಗ್‌; ಸಿಗದ ಸ್ಪಂದನೆ

ಆರ್‌ಆರ್‌ ಆರ್‌ ಸಿನಿಮಾ ತೆಲುಗು, ಕನ್ನಡ ಸೇರಿದಂತೆ ಬಹುಭಾಷೆಯಲ್ಲಿ ಬಿಡುಗಡೆಯಾಗಿದೆ. ಆದರೆ, ಜಿಲ್ಲೆಯಲ್ಲಿ ಕನ್ನಡ ಡಬ್ಬಿಂಗ್‌ ಸಿನಿಮಾ ಜತೆಗೆ ತೆಲುಗು ಸಿನಿಮಾ ಪ್ರದರ್ಶನವೇ ಹೆಚ್ಚಾಗಿದ್ದು, ಕನ್ನಡ ಡಬ್ಬಿಂಗ್‌ ಸಿನಿಮಾಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಿರಾಜ್‌ ಸಿನಿಮಾಸ್‌ನಲ್ಲಿ ಎರಡ್ಮೂರು ಪರದೆ ಮೇಲೆ ತೆಲುಗು ಸಿನಿಮಾ ಪ್ರದರ್ಶಿಸಿದರೆ, ಒಂದು ಪರದೆಯಲ್ಲಿ ಮಾತ್ರ ಕನ್ನಡ ಡಬ್ಬಿಂಗ್‌ ಸಿನಿಮಾ ಪ್ರದರ್ಶಿಸುತ್ತಿದ್ದು, ಅದಕ್ಕೂ ಪ್ರೇಕ್ಷಕರ ಕೊರತೆ ಕಂಡು ಬರುತ್ತಿದೆ.

ಟಾಪ್ ನ್ಯೂಸ್

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

10-

Maski ರುದ್ರಭೂಮಿಯಲ್ಲಿ ವಿದ್ಯುತ್ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರ ಒತ್ತಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

20

Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.