ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಮುಕ್ತಿ: ಹಗೆದಾಳ


Team Udayavani, Nov 30, 2018, 2:28 PM IST

ray-3.jpg

ಹಟ್ಟಿ ಚಿನ್ನದ ಗಣಿ: ಪಟ್ಟಣದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪಟ್ಟಣ ಪಂಚಾಯತಿ ಕಾರ್ಯಾಲಯಕ್ಕೆ ಮುತ್ತಿಗೆ ಪ್ರತಿಭಟನೆಯನ್ನು ಪಪಂ ಮುಖ್ಯಾಧಿಕಾರಿ ಲಿಖೀತ ಭರವಸೆ ಮೇರೆಗೆ ತಾತ್ಕಾಲಿಕವಾಗಿ ಮೂರು ದಿನ ಮುಂದೂಡಲಾಗಿದೆ.

ಪಟ್ಟಣ ಪಂಚಾಯತಿ ಕಾರ್ಯಾಲಯದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಪಂ ಮುಖ್ಯಾಧಿಕಾರಿ ದುರಗಪ್ಪ ಹಗೆದಾಳ, ಪಟ್ಟಣ ಪಂಚಾಯ್ತಿಗೆ ಸದ್ಯದಲ್ಲಿಯೇ 9.80 ಕೋಟಿ ರೂ. ಅನುದಾನ ಬಿಡುಗಡೆ ಆಗಲಿದೆ. ಇದರಲ್ಲಿ ಶೇ.85ರಷ್ಟು ಹಣವನ್ನು ಮೂಲ ಸೌಕರ್ಯಕ್ಕೆ ಮೀಸಲಿಡಲಾಗುವುದು. ಪಟ್ಟಣದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಸಾರ್ವಜನಿಕರು, ಸಂಘಟನೆಗಳು ಶುಕ್ರವಾರ ಹಮ್ಮಿಕೊಂಡಿರುವ ಪಪಂ ಕಾರ್ಯಾಲಾಯಕ್ಕೆ ಮುತ್ತಿಗೆಯನ್ನು ಕೈಬಿಡಬೇಕೆಂದು ವಿನಂತಿಸಿದರು.

ಎರಡು ಮೋಟಾರ್‌ ಹಾಗೂ 2 ಸ್ಟಾರ್ಟರ್‌ ಸೇರಿದಂತೆ ಟಿಸಿ ದುರಸ್ತಿಯಲ್ಲಿದೆ. ಸಹಾಯಕ ಕಾರ್ಯಪಾಲಕ ಅಭಿಯಂತರ ನಿರ್ದೇಶನದಂತೆ ಅವುಗಳನ್ನು ಸಿಂಧನೂರಿಗೆ ದುರಸ್ತಿಗೆ ಕಳಿಸಲಾಗಿದೆ. ಮೋಟಾರ್‌ ರಿಪೇರಿ ಮುಗಿಯುವ ಹಂತದಲ್ಲಿದ್ದು, ಶೀಘ್ರವೇ ತಂದು ಕುಡಿಯುವ ನೀರಿನ ಘಟಕದಲ್ಲಿ ಅಳವಡಿಸಲಾಗುವುದು. ಡಿ.3ರಂದು ಸೋಮವಾರ ಸಂಜೆ ಹಟ್ಟಿ ಪಟ್ಟಣಕ್ಕೆ ನೀರು ಸರಬರಾಜು ಮಾಡಲಾಗುವುದು ಎಂದು ಭರವಸೆ ನೀಡಿದರು.

ಹಟ್ಟಿ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಗುಂಡಪ್ಪಗೌಡ ಪೊಲೀಸ್‌ ಪಾಟೀಲ ಮಾತನಾಡಿ, ಕುಡಿಯುವ ನೀರಿಗಾಗಿ ಮಹಿಳೆಯರು, ಮಕ್ಕಳು ಕೊಡ ಹಿಡಿದುಕೊಂಡು ಬೀದಿ ಬೀದಿ ಅಲೆಯುತ್ತಿದ್ದಾರೆ. 18 ಕೋಟಿ ವೆಚ್ಚದಲ್ಲಿ ಕೈಗೊಂಡ ಶಾಶ್ವತ ಕುಡಿಯುವ ನೀರಿನ ಯೋಜನೆ ವಿಫಲವಾಗಿದ್ದರಿಂದ ನೀರಿನ ಸಮಸ್ಯೆ ಎದುರಾಗಿದೆ. 

ಪದೇ ಪದೇ ಮೋಟಾರ್‌ ದುರಸ್ತಿಗೀಡಾಗುತ್ತಿದ್ದು, ಗುಣಮಟ್ಟದ ಮೋಟಾರ್‌ ಅಳವಡಿಸಿ ನೀರಿನ ಬವಣೆ ನೀಗಿಸಬೇಕು. ಪಪಂ ಅಧಿಕಾರಿ ಹಾಗೂ ಮೇಲಾಧಿಕಾರಿಗಳು ಮೂರು ದಿನ ಕಾಲಾವಕಾಶ ಕೇಳಿದ್ದಾರೆ. ಅಷ್ಟರಲ್ಲಿ ಮೋಟಾರ್‌ ಅಳವಡಿಸಿ ನೀರು ಪೂರೈಸದಿದ್ದರೆ ಮುಂದೆ ಉಗ್ರ ಹೋರಾಟ ನಡೆಸಲಾಗುವುದು. ಶುಕ್ರವಾರ ಹಮ್ಮಿಕೊಂಡ ಧರಣಿಯನ್ನು ತಾತ್ಕಾಲಿಕವಾಗಿ ಮೂರು ದಿನಗಳ ಕಾಲ ಮುಂದೂಡಲಾಗಿದೆ ಎಂದು ಹೇಳಿದರು.

ಹಟ್ಟಿ ಠಾಣೆ ಪಿಎಸ್‌ಐ ಪಿಎಸ್‌ಐ ಗಂಗಪ್ಪ ಬುರ್ಲಿ, ಮೌನೇಶ ಕಾಕಾನಗರ, ಶ್ರೀನಿವಾಸ, ಕರವೇ ಶಿವರಾಮೇಗೌಡ ಬಣ ಪದಾಧಿಕಾರಿಗಳು, ಸಾರ್ವಜನಿಕರು, ಪಪಂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.