ಶಾಖೋತ್ಪನ್ನ ಕೇಂದ್ರಗಳಿಗೆ ವಿಶ್ರಾಂತಿ

ಸತತ ಎರಡನೇ ವರ್ಷವೂ ಎಲ್ಲ ಘಟಕ ಸ್ಥಗಿತ ; ವರುಣ ಕೃಪೆಯಿಂದ ವಿದ್ಯುತ್‌ ಉತ್ಪಾದನೆ ಮೊಟಕು

Team Udayavani, Jul 24, 2022, 2:56 PM IST

12

ರಾಯಚೂರು: ಒಂದು ಕಾಲದಲ್ಲಿ ವರ್ಷದ ಎಲ್ಲ ದಿನಗಳು ಕೆಲಸ ಮಾಡುತ್ತಿದ್ದ ಶಾಖೋತ್ಪನ್ನ ಕೇಂದ್ರಗಳಿಗೆ ಇತ್ತೀಚೆಗೆ ಸಂಪೂರ್ಣ ವಿಶ್ರಾಂತಿ ನೀಡಲಾಗುತ್ತಿದೆ. ಕಳೆದ ವರ್ಷ ಕೋವಿಡ್‌ ಕಾರಣಕ್ಕೆ ಸ್ಥಗಿತಗೊಂಡಿದ್ದ ಘಟಕಗಳು ಈ ಬಾರಿ ವರುಣನ ಕೃಪೆಯಿಂದ ಸ್ಥಗಿತಗೊಂಡಿವೆ.

ರಾಯಚೂರು ಶಾಖೋತ್ಪನ್ನ ವಿದ್ಯುತ್‌ ಕೇಂದ್ರ (ಆರ್‌ಟಿಪಿಎಸ್‌)  ಹಾಗೂ ಯರಮರಸ್‌ ಸೂಪರ್‌ ಕ್ರಿಟಿಕಲ್‌ ಥರ್ಮಲ್‌ ಪವರ್‌ ಸ್ಟೇಶನ್‌ಗಳು ಕಳೆದ ಕೆಲ ದಿನಗಳಿಂದ ಸಂಪೂರ್ಣ ಉತ್ಪಾದನೆ ನಿಲ್ಲಿಸಿವೆ. ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದ್ದು, ಎಲ್ಲೆಡೆ ಜಲ ಪಾತಗಳು ಧುಮ್ಮಿಕ್ಕಿ ಹರಿಯುತ್ತಿವೆ. ಇದರಿಂದ ಜಲ ವಿದ್ಯುತ್‌ ಎಂದಿಗಿಂತ ಹೆಚ್ಚು ಉತ್ಪಾದನೆಯಾಗುತ್ತಿದೆ. ಅದರ ಜತೆಗೆ ಪವನ ಶಕ್ತಿ ಕೂಡ ಹೆಚ್ಚಾಗಿ ಬರುತ್ತಿದ್ದು, ಶಾಖೋತ್ಪನ್ನ ಕೇಂದ್ರಗಳ ಮೇಲೆ ನೇರ ಪರಿಣಾಮ ಬೀರಿದೆ. ಆರ್‌ಟಿಪಿಎಸ್‌ನ ಎಂಟು ಘಟಕಗಳಿಂದ 1720 ಮೆಗಾವ್ಯಾಟ್‌ ಹಾಗೂ ವೈಟಿಪಿಎಸ್‌ನ ಎರಡು ಘಟಕಗಳಿಂದ 1600 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡಬಹುದು. ಈಗ ಎರಡು ಕೇಂದ್ರಗಳ ಎಲ್ಲ ಘಟಕಗಳು ಸ್ಥಗಿತಗೊಂಡಿದ್ದು, ಒಂದೇ ಒಂದು ಮೆಗಾವ್ಯಾಟ್‌ ಉತ್ಪಾದನೆ ಮಾಡುತ್ತಿಲ್ಲ. ಈ ಎರಡು ಕೇಂದ್ರಗಳು ಹೊರತಾಗಿಯೂ ರಾಜ್ಯದಲ್ಲಿ 1642 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಯಾಗುತ್ತಿದೆ. ಅದರ ಜತೆಗೆ ಸೋಲಾರ್‌ ಯೂನಿಟ್‌ಗಳಿಂದಲೂ ವಿದ್ಯುತ್‌ ಸಿಗುತ್ತಿದೆ.

ಶರಾವತಿಯಲ್ಲಿ 216 ಮೆಗಾವ್ಯಾಟ್‌, ಆಲಮಟ್ಟಿಯಲ್ಲಿ 43 ಮೆಗಾವ್ಯಾಟ್‌, ಜೋಗದಲ್ಲಿ 60 ಮೆಗಾವ್ಯಾಟ್‌, ವಾರಾಹಿಯಲ್ಲಿ 60 ಮೆಗಾವ್ಯಾಟ್‌, ನಾಗ್ಝರಿಯಲ್ಲಿ 104 ಮೆಗಾವ್ಯಾಟ್‌, ಶಿವನಸಮುದ್ರದಲ್ಲಿ 33 ಮೆಗಾವ್ಯಾಟ್‌ ಹೀಗೆ ನಾನಾ ಕಡೆ ವಿದ್ಯುತ್‌ ಉತ್ಪಾದನೆಯಾಗುತ್ತಿದೆ. ಆದರೆ, ಬಳ್ಳಾರಿ ಶಾಖೊತ್ಪನ್ನ ಕೇಂದ್ರದಿಂದ ಅ ಧಿಕ ಪ್ರಮಾಣದಲ್ಲಿ ವಿದ್ಯುತ್‌ ಉತ್ಪಾದನೆ ಮಾಡಲಾಗುತ್ತಿದ್ದು, ಎರಡು ಘಟಕಗಳಿಂದ 674 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ.

ಕೋವಿಡ್‌ ವೇಳೆ ಸ್ಥಗಿತ: ಆರ್‌ಟಿಪಿಎಸ್‌ನ ಇತಿಹಾಸದಲ್ಲೇ ಎಂದಿಗೂ ಎಂಟಕ್ಕೆ ಎಂಟೂ ಘಟಕಗಳು ಸ್ಥಗಿತಗೊಂಡ ನಿದರ್ಶನ ಇರಲಿಲ್ಲ. ಕೋವಿಡ್‌ ಸಂಕಷ್ಟದ ವೇಳೆ ಎಲ್ಲೆಡೆ ಕೈಗಾರಿಕೆಗಳು ಸ್ಥಗಿತಗೊಂಡ ಕಾರಣ ವಿದ್ಯುತ್‌ ಬೇಡಿಕೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಆಗ ಅನಿವಾರ್ಯವಾಗಿ ಶಾಖೋತ್ಪನ್ನ ಕೇಂದ್ರಗಳನ್ನು ನಿಲ್ಲಿಸುವ ಸನ್ನಿವೇಶ ಏರ್ಪಟ್ಟು ಮೊದಲ ಬಾರಿಗೆ ಸ್ಥಗಿತಗೊಳಿಸಲಾಗಿತ್ತು. ಅದೇ ವೇಳೆ ಸುಮಾರು 600ಕ್ಕೂ ಅ ಧಿಕ ಗುತ್ತಿಗೆ ಕಾರ್ಮಿಕರನ್ನು ಕೈ ಬಿಡಲಾಗಿತ್ತು. ಈಗ ರಾಜ್ಯದಲ್ಲಿ ಪರ್ಯಾಯ ವಿದ್ಯುತ್‌ ಮೂಲಗಳು ಹೆಚ್ಚಾಗಿರುವ ಕಾರಣ ಶಾಖೋತ್ಪನ್ನ ಕೇಂದ್ರಗಳ ಮೇಲಿನ ಅವಲಂಬನೆ ಕ್ರಮೇಣ ಕ್ಷೀಣಿಸುತ್ತಿದೆ.

ಬಿಟಿಪಿಎಸ್‌ಗೂ ಶಾಕ್‌

ಬಳ್ಳಾರಿ ಥರ್ಮಲ್‌ ಪವರ್‌ ಸ್ಟೇಶನ್‌ ಕೂಡ ಕೆಲ ದಿನಗಳಿಂದ ಸ್ಥಗಿತಗೊಳಿಸಲಾಗಿತ್ತು. ಅಲ್ಲಿಯೂ ಮೂರು ಘಟಕಗಳಿಂದ 1750 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಜಲಶಕ್ತಿ ಉತ್ಪಾದನೆ ಹಂತ ಹಂತವಾಗಿ ಕಡಿಮೆಯಾಗುತ್ತಿದ್ದು, ಮಂಗಳವಾರದಿಂದ ಎರಡು ಘಟಕಗಳನ್ನು ಪುನಾರಂಭಿಸಲಾಗಿದೆ.

ರಾಜ್ಯದಲ್ಲಿ ಜಲಶಕ್ತಿಯಿಂದ ವಿದ್ಯುತ್‌ ಉತ್ಪಾದನೆ ಹೆಚ್ಚಾಗಿದ್ದು, ಶಾಖೋತ್ಪನ್ನ ಕೇಂದ್ರಗಳಿಗೆ ಬೇಡಿಕೆ ಕುಗ್ಗಿದೆ. ಹೀಗಾಗಿ ಎಲ್ಲ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ. ಬಿಟಿಪಿಎಸ್‌ನಲ್ಲಿ ವಿದ್ಯುತ್‌ ಆರಂಭಿಸಿದ್ದು, ಶೀಘ್ರದಲ್ಲೇ ಆರ್‌ಟಿಪಿಎಸ್‌ ವೈಟಿಪಿಎಸ್‌ನಲ್ಲಿ ವಿದ್ಯುತ್‌ ಉತ್ಪಾದನೆ ಆರಂಭಿಸಲಾಗುವುದು. ಕಲ್ಲಿದ್ದಿಲು ಕೊರತೆಯಾಗಿಲ್ಲ. –ಹೆಸರು ಹೇಳಲಿಚ್ಛಿಸದ ಅಧಿಕಾರಿ

ಟಾಪ್ ನ್ಯೂಸ್

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

4-panaji

Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.