ಎಂಇಎಸ್ ಪುಂಡಾಟಿಕೆ ಖಂಡಿಸಿ ಪ್ರತಿಕೃತಿ ದಹನ
Team Udayavani, Dec 16, 2021, 5:30 PM IST
ಮುದಗಲ್ಲ: ಕನ್ನಡ ಬಾವುಟ ಸುಟ್ಟು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ದುಷ್ಕತ್ಯ ಎಸಗಿದ ಶಿವಸೇನೆಯ ಮುಖ್ಯಸ್ಥ ಉದ್ಭವ ಠಾಕ್ರೆ ಹಾಗೂ ಕಾರ್ಯಕರ್ತರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿ ಪಟ್ಟಣದ ಕರುನಾಡ ವಿಜಯ ಸೇನೆ ಕಾರ್ಯಕರ್ತರು ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಪೊಲೀಸ್ ಠಾಣೆ ಮುಂಭಾಗದ ರಸ್ತೆ ಮೂಲಕ ತೆರಳಿ ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿ ಮುಖ್ಯರಸ್ತೆಯಲ್ಲಿ ಉದ್ಭವ ಠಾಕ್ರೆ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ವಿಜಯ ಸೇನೆ ತಾಲೂಕು ಪ್ರಧಾನ ಕಾರ್ಯದರ್ಶಿ ರಾಘು ಕುದುರಿ ಮಾತನಾಡಿ, ಕನ್ನಡ ನಾಡು-ನುಡಿ ರಕ್ಷಣೆಗೆ ಕನ್ನಡಪರ ಸಂಘಟನೆಗಳ ಬೆಂಬಲಕ್ಕೆ ಸರಕಾರ ನಿಲ್ಲಬೇಕು. ಕನ್ನಡಿಗರ ಸ್ವಾಭಿನಮಾನಕ್ಕೆ ಧಕ್ಕೆ ತರುವ ಕೆಲಸಕ್ಕೆ ಕುಮ್ಮಕ್ಕು ನೀಡಿ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಭ್ರಷ್ಟ ಠಾಕ್ರೆಗೆ ಗಡಿಪಾರು ಮಾಡಬೇಕು. ಎಂಇಎಸ್ ಪುಂಡಾಟಿಕೆ ಹೆಚ್ಚಾಗುತ್ತಿದ್ದು ಸರಕಾರ ಇದಕ್ಕೆ ಕ್ರಮಕ್ಕೆ ಮುಂದಾಗುವಂತೆ ಆಗ್ರಹಿಸಿದರು.
ಮುದಗಲ್ಲ ಘಟಕಾಧ್ಯಕ್ಷ ಮೌನೇಶ ಚೆಲುವಾದಿ, ಗೌರವಾಧ್ಯಕ್ಷ ಸಂಗಮೇಶ ಸರಗಣಾಚಾರಿ, ಕಾರ್ಯಾಧ್ಯಕ್ಷ ಜವಾಹರಸೇಠ, ಸುಭಾಶ್ ಪಾಟೀಲ, ಮಂಜುನಾಥ ಹಡಪದ, ಬಸವರಾಜ ದೊಡ್ಡಮನಿ, ಫಾರುಕ್ ಅರಬ್, ಸಂಜೀವ್ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.