ಕಾಮಗಾರಿ ಆರಂಭಿಸಲು ಸಿಎಂಗೆ ಮನವಿ
Team Udayavani, Jul 4, 2017, 3:14 PM IST
ದೇವದುರ್ಗ: ತಾಲೂಕಿನಲ್ಲಿ ಸ್ಥಗಿತ ಗೊಂಡಿರುವ 112 ಕಾಮಗಾರಿಗಳನ್ನು ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಕೆ.ಶಿವನಗೌಡ ನಾಯಕ ಹೇಳಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಹಶೀಲ್ದಾರ ಕಚೇರಿ ಎದುರು ಬಿಜೆಪಿ ತಾಲೂಕು ಘಟಕ ಕಳೆದ 22 ದಿನಗಳಿಂದ
ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯಲ್ಲಿ ಸೋಮವಾರ ಭಾಗವಹಿಸಿ ಅವರು ಮಾತನಾಡಿದರು. 10 ಸಾವಿರ ಜನರೊಂದಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು. ಜನಪರವಾದ ವಿವಿಧ ಬೇಡಿಕೆ ಈಡೇರಿಕೆಗಾಗಿ 22 ದಿನಗಳಿಂದ ತಾಲೂಕು ಕಚೇರಿ ಎದುರು ಧರಣಿ ನಡೆಸುತ್ತಿದ್ದರೂ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ. ಸರ್ಕಾರದ ಕಣ್ಣು ತೆರೆಸುವುದಕ್ಕಾಗಿ ಸುಂಕೇಶ್ವರಹಾಳ ಬಳಿ ರಸ್ತೆತಡೆ ಮಾಡಿದರೂ, ನಮ್ಮ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಇದನ್ನು
ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ರಾಯಚೂರು ಜಿಲ್ಲೆ ಹಿಂದೆಂದೂ ಇಂತಹ ಜಿಲ್ಲಾಧಿ ಕಾರಿಯನ್ನು ಕಂಡಿರಲಿಲ್ಲ. ನಾವು ಸರ್ಕಾರದ ಮುಂದೆ ಇಟ್ಟಿರುವ
ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಹೇಳಿದರು. ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ
ಪಾಟೀಲ ಜೇರಬಂಡಿ, ಬಸನಗೌಡ ಹಾಲವೆಂಕಟಾಪುರ, ಪುರಸಭೆ ಸದಸ್ಯ ಚಂದ್ರಶೇಖರ ಚಲುವಾದಿ, ನಾಗರಾಜ
ಅಕ್ಕರಕಿ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಧರಣಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
Bengaluru: ಕಬ್ಬನ್ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ
S.Africa: ಫಿಕ್ಸಿಂಗ್ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್ 1 ಬೌಲರ್
Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್ ಭಕ್ಷ್ಯಗಳಿವು…
Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.