ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಕೆಗೆ ಮನವಿ
Team Udayavani, Sep 7, 2020, 4:51 PM IST
ಸಾಂದರ್ಭಿಕ ಚಿತ್ರ
ರಾಯಚೂರು: ರಾಯಚೂರು ಸ್ನಾತ್ತಕೋತ್ತರ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಈ ಶೈಕ್ಷಣಿಕ ವರ್ಷಕ್ಕೆ ಮುಂದುವರಿಸಲು ಆಗ್ರಹಿಸಿ ಉಪನ್ಯಾಸಕರು ಗುವಿವಿ ಸಿಂಡಿಕೇಟ್ ಸದಸ್ಯ ಶರಣಬಸವ ಪಾಟೀಲ ಜೋಳದಹೆಡಗಿ ಅವರಿಗೆ ಮನವಿ ಸಲ್ಲಿಸಿದರು.
ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನೇ ಸೇವೆಯಲ್ಲಿ ಮುಂದುವರಿಸಬೇಕು. ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಹೊಸ ನೇಮಕಾತಿ ಮಾಡದೆ ಹಳಬರನ್ನೇ ಮುಂದುವರಿಸಲು ಆದೇಶ ಹೊರಡಿಸಿವೆ. ಆದರೆ, ಗುಲ್ಬರ್ಗ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಮಿತಿ ಮಾತ್ರ ಹೊಸ ಅತಿಥಿ ಉಪನ್ಯಾಸಕರನ್ನು ನೇಮಿಸಲು ಒಪ್ಪಿಗೆ ನೀಡಿದೆ ಎನ್ನುವ ಮಾಹಿತಿ ಇದೆ. ಯಾವುದೇ ಕಾರಣಕ್ಕೂ ಅಂಥ ನಿರ್ಧಾರ ಕೈಗೊಳ್ಳಬಾರದು. ಈಗಿರುವ ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವ ಮೂಲಕ ಸೇವಾ ಭದ್ರತೆ ಕಲ್ಪಿಸಬೇಕೆಂದು ವಿನಂತಿಸಿದರು.
ಸೆ.1ರಿಂದಲೇ ಕಾರ್ಯಭಾರ ಜಾರಿಯಾಗುವಂತೆ ಆದೇಶ ಹೊರಡಿಸಲುವಿವಿ ಕುಲಪತಿಗಳಿಗೆ ಮನವರಿಕೆಮಾಡಿಕೊಡುವ ಮೂಲಕ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವವರನ್ನೇ ಪರಿಗಣಿಸಲು ಕೋರಿದರು. ಈ ವೇಳೆ ಸ್ನಾತಕೋತ್ತರ ಕೇಂದ್ರದ ಅತಿಥಿ ಉಪನ್ಯಾಸಕರಾದ ರೇಖಾ ಪಾಟೀಲ, ವಿಜಯಲಕ್ಷ್ಮೀ, ತಾಯಪ್ಪ, ಡಾ| ಶರಣಪ್ಪ, ಛಲವಾದಿ, ಡಾ| ಲಕ್ಷ್ಮೀ ಕಾಂತ ಆರ್., ಬಜಾರಪ್ಪ, ಡಾ|ರಂಗನಾಥ, ಡಾ| ಆಂಜನೇಯ, ಡಾ| ಕೃಷ್ಣ, ಡಾ| ಹನುಮಂತ, ಡಾ| ವಿಕ್ರಮಸಿಂಗ್, ಡಾ| ಸೋಮನಾಥರೆಡ್ಡಿ, ಡಾ| ಶ್ರೀಮಂತ ಸುಧೀರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.