ಶಾಲೆ ಮಂಜೂರಾತಿಗೆ ಆಗ್ರಹ
Team Udayavani, Nov 22, 2020, 5:28 PM IST
ಮಸ್ಕಿ: ತಾಲೂಕಿನ ಬುದ್ದಿನ್ನಿ (ಎಸ್) ಗ್ರಾಮಕ್ಕೆ ಪ್ರೌಢಶಾಲೆ ಮಂಜೂರಾತಿಗೆ ಆಗ್ರಹಿಸಿ ಬುದ್ದಿನ್ನಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಶನಿವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ಗಾಂಧಿ ನಗರದ ಪ್ರವಾಸಿ ಮಂದಿರದಿಂದ ಆರಂಭಗೊಂಡ ಪ್ರತಿಭಟನಾ ರ್ಯಾಲಿ, ಅಶೋಕ ವೃತ್ತ, ಅಗಸಿ, ದೈವದಕಟ್ಟೆ, ಮೇನ್ ಬಜಾರ್, ಕನಕ ವೃತ್ತ, ವಾಲ್ಮೀಕಿ ವೃತ್ತ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಹಸೀಲ್ ಕಚೇರಿ ತಲುಪಿತು.
ತಹಶೀಲ್ದಾರ್ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದ ಬಳಿಕ ನಾಗರಡ್ಡಿ ದೇವರಮನಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಸರ್ಕಾರ ಕೋಟ್ಯಂತರ ರೂ. ವ್ಯಯಿಸಿ ಶಾಲಾ ಕಟ್ಟಡಗಳನ್ನು ಕಟ್ಟಿದೆ. ಆದರೆ, ಶಿಕ್ಷಣ ಇಲಾಖೆ ಮಾತ್ರ ಪ್ರೌಢಶಾಲೆಆರಂಭಿಸಲು ಅನುಮತಿ ನೀಡದೇಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲು ಹೊರಟಿದೆ. ಪ್ರೌಢಶಾಲೆ ಆರಂಭಿಸಲು ಅನುಮತಿ ನೀಡಲು ಆಗದಿದ್ದರೆ ಶಾಲಾ ಕಟ್ಟಡ ಕಟ್ಟಿಸುವಅವಶ್ಯಕತೆ ಏನಿತ್ತು? ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ಬೇಕಾದರೆ ಯಾವುದೇ ನಿಯಮಗಳು ಅಡ್ಡಿ ಬರುವುದಿಲ್ಲ. ಆದರೆ, ಸರ್ಕಾರಿ ಶಾಲೆಗಳ ಅನುಮತಿಗಾಗಿ ಏಕೆ? ಇಷ್ಟೊಂದು ಬೇಜವಾಬ್ದಾರಿ ಎಂದು ಆಕ್ರೋಶ ಹೊರ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.