![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Mar 22, 2022, 3:23 PM IST
ರಾಯಚೂರು: ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿವಿಧ ಪಂಚಾಯಿತಿಗಳಿಗೆ ಸಾಕಷ್ಟು ಮನವಿ ಸಲ್ಲಿಸಿದ್ದು, ಎಲ್ಲ ಸಮಸ್ಯೆ ಜಿಲ್ಲಾಡಳಿತ ಕ್ರೋಡೀಕರಿಸಿ ಪರಿಹರಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಆದೇಶಿಸುವಂತೆ ವಿಸ್ತಾರ ಸಂಸ್ಥೆ ನೇತೃತ್ವದಲ್ಲಿ ಶಾಲಾ ಮಕ್ಕಳು ಸೋಮವಾರ ಪ್ರತಿಭಟಿಸಿದರು.
ಈ ಕುರಿತು ಡಿಸಿಗೆ ಮನವಿ ಸಲ್ಲಿಸಿ, ಜಿಲ್ಲೆಯಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ನಾನಾ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಆ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಚರ್ಚೆ ಮಾಡಿ ಸಮಸ್ಯೆ ಪರಿಹರಿಸಲು ಪಿಡಿಒಗೆ ಮನವಿ ಸಲ್ಲಿಸಿದರೂ ಕ್ರಮ ಕೈಗೊಂಡಿಲ್ಲ. ರಾಯಚೂರು ತಾಲೂಕಿನ ಹೆಂಬೆರಾಳ ತಿಮ್ಮಾಪೂರ, ಮೀರಾಪೂರ, ಹನುಮಾಪುರ ಸೇರಿ ವಿವಿಧ ಗ್ರಾಮಗಳಿಗೆ ಬಸ್ ಸೌಕರ್ಯವಿಲ್ಲ. ವಸತಿ ಸೌಕರ್ಯವಿಲ್ಲದ ಕಾರಣ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದರು.
ಶುಚಿ ಯೋಜನೆಯಡಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ ವಿತರಣೆ ನಿಲ್ಲಿಸಿದ ಪರಿಣಾಮ ವಿದ್ಯಾರ್ಥಿನಿಯರಿಗೆ ಸಮಸ್ಯೆಯಾಗಿದೆ. ಕೂಡಲೇ ಯೋಜನೆ ಪುನಾರಂಭಿಸಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.
ಈ ವೇಳೆ ಸಂಸ್ಥೆ ಮುಖಂಡ ಹನುಮೇಶ, ದೇವರಾಜ, ವಿದ್ಯಾರ್ಥಿಗಳಾದ ಗೀತಾ, ಕಾವೇರಿ, ಮಾಳಮ್ಮ, ಶಾಂತಲಾ, ಈರಮ್ಮ, ದೇವಿಕಾ ಸೇರಿದಂತೆ ಇತರರಿದ್ದರು.
You seem to have an Ad Blocker on.
To continue reading, please turn it off or whitelist Udayavani.