ಖರೀದಿ ಕೇಂದ್ರ ಆರಂಭಿಸಲು ಆಗ್ರಹ
Team Udayavani, Dec 17, 2019, 1:11 PM IST
ಲಿಂಗಸುಗೂರು: ಭತ್ತ, ತೊಗರಿ, ಕಡಲೆ ಬೆಳೆಗೆ ಸೂಕ್ತ ಬೆಲೆಯಿಲ್ಲದೆ ರೈತರು ಸಂಕಷ್ಟ ಎದುರಿಸುವಂತಾಗಿದೆ. ಕೂಡಲೇ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರ ಆರಂಭಿಸಲು ಆಗ್ರಹಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಸೋಮವಾರ ಪಟ್ಟಣದ ಸಹಾಯಕ ಆಯುಕ್ತರ ಕಚೇರಿ ಬಳಿ ಧರಣಿ ನಡೆಸಿದರು.
ತೊಗರಿ, ಭತ್ತ, ಸೇರಿ ರೈತರು ಬೆಳೆದ ಎಲ್ಲ ಬೆಳೆಗಳಿಗೆ ಸ್ವಾಮಿನಾಥನ್ ವರದಿ ಆಧರಿಸಿ ವೈಜ್ಞಾನಿಕ ಬೆಲೆ ನಿಗದಿಮಾಡಬೇಕು. ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್ ಗಳ ಮತ್ತು ಖಾಸಗಿ ಹಣಕಾಸು ಸಂಸ್ಥೆಯಲ್ಲಿನ ಸಾಲ ಮನ್ನಾ ಮಾಡಬೇಕು. ಎಪಿಎಂಸಿಯಲ್ಲಿ ವರ್ತಕರು ಪ್ರತಿ ಕ್ವಿಂಟಲ್ ಆಹಾರ ಧಾನ್ಯಕ್ಕೆ 3ರಿಂದ 5 ಕೆಜಿ ಸೂಟ ತೆಗೆಯುತ್ತಿದ್ದಾರೆ. ಕಮಿಷನ್ ಹಾವಳಿ, ಖಾಲಿಚೀಲದ ಮೊತ್ತ ಪಡೆಯವುದನ್ನು ತಡೆಗಟ್ಟಬೇಕು. ಕೃಷಿ ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಇದಕ್ಕೆ ಕಡಿವಾಣ ಹಾಕಬೇಕು. ನಂದವಾಡಗಿ ಏತ ನೀರಾವರಿ ಯೋಜನೆ ಕಾಮಗಾರಿ ಶೇ.70ರಷ್ಟು ಪೂರ್ಣಗೊಂಡಿದ್ದರೂ ಈವರೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡಿಲ್ಲ. ಕೂಡಲೇ ರೈತರಿಗೆ ಪರಿಹಾರ ನೀಡಬೇಕು. ತಾಲೂಕು ಕೇಂದ್ರದಲ್ಲಿರೈತ ಭವನ ನಿರ್ಮಿಸಬೇಕು ಎಂದು ಆಗ್ರಹಿಸಿದರು.
ರೈತ ಸಂಘದ ರಾಜ್ಯ ಕಾರ್ಯದರ್ಶಿ ಬಲವಂತ ಕಾಂಬಳೆ, ಹನುಮಂತಪ್ಪ ಹೊಳೆಯಾಚೆ, ಜಿಲ್ಲಾ ಅಧ್ಯಕ್ಷ ಶರಣಪ್ಪ ಮರಳಿ, ತಾಲೂಕು ಅಧ್ಯಕ್ಷ ಶಿವಪುತ್ರಗೌಡ, ಬಸನಗೌಡ ಹಿರೇಹೆಸರೂರು, ಮಹಿಳಾ ಘಟಕದ ಅಧ್ಯಕ್ಷೆ ಉಮಾದೇವಿ ನಾಯಕ, ಕರಿಯಪ್ಪ ಸಿರವಾರ, ಆದಪ್ಪ ಹಾಗಲ್ದಾಳ, ವಿಜಯ ಬಡಿಗೇರ, ರಾಮಯ್ಯರೆಡ್ಡಿ,ಸಿ.ಎಚ್.ರವಿಕುಮಾರ, ಸಂಗನಗೌಡ ಹೊಸೂರು ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.