ಪರಿಸರ ಮಾಲಿನ್ಯದಿಂದ ಜೀವಸಂಕುಲಕ್ಕೆ ಅಪಾಯ
Team Udayavani, Sep 17, 2019, 3:48 PM IST
ರಾಯಚೂರು: ನಗರದ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಯ್ಯನಗೌಡ ನಂದಿಹಾಳ ಅವರ ಗೆಳೆತನದ ಪ್ರೀತಿ ಬಡತನದಲ್ಲಿ ಕಂಡಾಗ ಕೃತಿ ಬಿಡುಗಡೆ ಮಾಡಲಾಯಿತು.
ರಾಯಚೂರು: ಮನುಷ್ಯ ಮತ್ತು ಭೂಮಿ ಮೇಲಿನ ಜೀವಸಂಕುಲಗಳ ಅಸ್ತಿತ್ವಕ್ಕೆ ಧಕ್ಕೆಯಾಗದಂತೆ ನೈಸರ್ಗಿಕ ಸಂಪನ್ಮೂಲಗಳ ಬಳಕೆ ವಿಶ್ವದ ಮುಖ್ಯ ಗುರಿಯಾಗಬೇಕು ಎಂದು ಸಾಹಿತಿ ಆಂಜಿನಯ್ಯ ಜಾಲಿಬೆಂಚಿ ಅಭಿಪ್ರಾಯಪಟ್ಟರು.
ನಗರದ ಕನ್ನಡ ಭವನದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ಅಯ್ಯನಗೌಡ ನಂದಿಹಳ್ಳಿ ಅವರ ‘ಗೆಳೆತನದ ಪ್ರೀತಿ ಬಡತನದಲ್ಲಿ ಕಂಡಾಗ’ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಪರಿಸರ ಮಾಲಿನ್ಯದಿಂದ ಜಾಗತಿಕ ಹವಾಮಾನದಲ್ಲಿ ಆಗುತ್ತಿರುವ ವಿಪರೀತ ಏರಿಳಿತದಿಂದ ಮನುಷ್ಯ ಸಂಕುಲ ಮಾತ್ರವಲ್ಲದೇ ಜೀವರಾಶಿಯೇ ಸಂಕಷ್ಟಕ್ಕೆ ಸಿಲುಕಿದೆ. ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಭವಿಷ್ಯದಲ್ಲಿ ಅಪಾಯ ಖಚಿತ ಎಂದರು.
ಅಯ್ಯನಗೌಡ ನಂದಿಹಳ್ಳಿಯವರು ಸೇವಾ ನಿವೃತ್ತಿ ಹೊಂದಿದ್ದರೂ ಅವರೊಳಗಿನ ಪ್ರವೃತ್ತಿ ಇನ್ನೂ ಸಕ್ರಿಯವಾಗಿದೆ. ತಮ್ಮ ಜೀವನದ ಅನುಭವಾಧಾರಿತ ಈ ಕೃತಿ ಸಾಕಷ್ಟು ವಿಚಾರಗಳನ್ನು ತಿಳಿಸುತ್ತದೆ. 32ಕ್ಕೂ ಅಧಿಕ ನಾಟಕಗಳಲ್ಲಿ ಅಭಿನಯಿಸುವ ಮೂಲಕ ಕಲಾ ಸೇವೆ ಮಾಡಿರುವ ಅಯ್ಯನಗೌಡರು, ಈಗ ಸಾಹಿತ್ಯ ಕ್ಷೇತ್ರದಲ್ಲೂ ತಮ್ಮ ಛಾಪು ಮೂಡಿಸುತ್ತಿರುವುದು ವಿಶೇಷ ಎಂದರು.
ಗೆಳೆತನದ ಪ್ರೀತಿ ಬಡತನದಲ್ಲಿ ಕಂಡಾಗ ಎನ್ನುವ ಪುಸ್ತಕದಲ್ಲಿ ಐಶ್ವರ್ಯಕ್ಕಿಂತ ಆರೋಗ್ಯ ಮುಖ್ಯ. ಉಸಿರಿಗಾಗಿ ಹಸಿರು, ಕಲೆ, ರೈತಾಪಿ ಕೃಷಿ, ಸಂಗೀತ ಮತ್ತು ಗಾಯಕರು, ರಂಗ ಪ್ರಕಾರಗಳು ನಡೆದುಬಂದ ದಾರಿ ಮತ್ತು ರಾಜಕುಮಾರವರ ಸಂಕ್ಷಿಪ್ತ ಮಾಹಿತಿ ಪುಸ್ತಕ ಒಳಗೊಂಡಿದೆ ಎಂದು ವಿವರಿಸಿದರು. ಸಿದ್ದಪ್ಪ ಇತ್ಲಿ, ಚಂದ್ರಕಾಂತಗೌಡ, ಸಿ.ಎನ್.ಭಂಡಾರಿ, ಟಿ.ಪಿ.ಶಿವಯ್ಯ, ಎಸ್.ಎಚ್.ಗುಂಡಗುರತಿ, ತಾಯಣ್ಣ ಯರಗೇರಾ, ವಿರುಪನಗೌಡ, ಎಸ್.ಸಿದ್ದಪ್ಪ ಸಾಹುಕಾರ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.