ರಸ್ತೆ ಸುರಕ್ಷತಾ ಸಪ್ತಾಹ: ಪೊಲೀಸರ ಬೈಕ್ ರ್ಯಾಲಿ
Team Udayavani, Jan 17, 2017, 1:27 PM IST
ರಾಯಚೂರು: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದು ಸೇರಿ ಸಂಚಾರಿ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದು ಪಶ್ಚಿಮ ಪೊಲೀಸ್ ಠಾಣೆ ಸಿಪಿಐ ಲಕ್ಷಿನಾರಾಯಣ ಹೇಳಿದರು.
ಇಲ್ಲಿನ ಸಂಚಾರಿ ಠಾಣೆಯಿಂದ 28ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸೋಮವಾರ ಆಯೋಜಿಸಿದ್ದ ಸಂಚಾರ ಜಾಗೃತಿ ಮೂಡಿಸುವ ಬೈಕ್ ರ್ಯಾಲಿ ಮತ್ತು ಸಂಚಾರಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ವರ್ಗ ಹಾಗೂ ಆಟೋ ಚಾಲಕರಿಗೆ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಂಚಾರಿ ನಿಯಮಗಳ ಪಾಲನೆಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಇದರಿಂದ ಅಪಘಾತ ತಪ್ಪಿಸಬಹುದು. ಈ ಹಿನ್ನೆಲೆಯಲ್ಲಿ ವಾಹನ ಚಾಲಕರು ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ಇಲಾಖೆ ಜತೆ ಕೈಜೋಡಿಸಬೇಕು ಎಂದರು.
ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದ ಸಮೀಪದ ಸಂಚಾರಿ ಠಾಣೆಯಿಂದ ಆರಂಭಗೊಂಡ ಬೈಕ್ ರ್ಯಾಲಿ ಡಾ| ಬಿ.ಆರ್.ಅಂಬೇಡ್ಕರ್ ವೃತ್ತ, ಸ್ಟೇಷನ್ ವೃತ್ತ, ಕೇಂದ್ರ ಬಸ್ ನಿಲ್ದಾಣ, ತೀನ್ ಕಂದಿಲ್, ಮಹಾವೀರ ವೃತ್ತ, ಚಂದ್ರಮೌಳೇಶ್ವರ ವೃತ್ತ, ಗಂಜ್, ಬಸವೇಶ್ವರ ವೃತ್ತದ ಮಾರ್ಗವಾಗಿ ಠಾಣೆಗೆ ಆಗಮಿಸಿ ಸಮಾರೋಪಗೊಂಡಿತು.
ಸಂಚಾರಿ ಪೊಲೀಸರು ಬೈಕ್ ರ್ಯಾಲಿ ನಡೆಸುವ ಮೂಲಕ ದ್ವಿಚಕ್ರ ವಾಹನ ಚಲಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ವಾಹನ ಚಲಾಯಿಸುವಾಗ ಮೊಬೈಲ್ ಬಳಸಬಾರದು ಮತ್ತು ವಾಹನವನ್ನು ಸರಿಯಾದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸುವಂತೆ ಜಾಗೃತಿ ಮೂಡಿಸಿದರು.
ತನ್ನಿಮಿತ್ತ ಪೊಲೀಸ್ ಸಿಬ್ಬಂದಿ, ಆಟೋ ಚಾಲಕರು ಮತ್ತು ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ವೈದ್ಯರಾದ ಡಾ| ಶಿವರಾಜ ಊಟೂರು, ನೇತ್ರ ತಜ್ಞ ಡಾ| ನದೀಮ್, ದಂತ ವೈದ್ಯ ಡಾ| ತ್ರಿಲೋಕ್ ಅವರು ಆರೋಗ್ಯ ತಪಾಸಣೆ ನಡೆಸಿದರು.
80ಕ್ಕೂ ಹೆಚ್ಚು ಜನ ಶಿಬಿರದ ಪ್ರಯೋಜನ ಪಡೆದರು. ನಗರ ಸಂಚಾರಿ ಠಾಣೆ ಪಿಎಸ್‌ಐ ಸಿದ್ಧರಾಮಪ್ಪ ಗಡೇದ, ಎಎಸ್ ಐಗಳಾದ ಕೃಷ್ಣಪ್ಪ ಯಾದವ, ಹುಸೇನ್ ಬಾಷಾ, ಸಿಬ್ಬಂದಿ ತೋಟಪ್ಪ, ಶರಣಬಸವ, ಮೆಹಬೂಬ್ ಅಲಿ, ಮಹ್ಮದ್ ಖಾನ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.